ಕಳೆದ ಮೂರು ದಶಕಗಳಿಂದ ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ಕೇಳಿಬರುತ್ತಿದೆ. ಈ ಕೂಗು ಜೋರಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಭಜನೆಯ ಮಾತುಗಳನ್ನು ಆಡಿದ ನಂತರ. ಬೆಳಗಾವಿಯನ್ನು ವಿಭಜಿಸಿ ಮೂರು ಜಿಲ್ಲೆ ಮಾಡಬೇಕೆಂದು ಆಗ್ರಹವಿದೆ. ಗೋಕಾಕ್, ಚಿಕ್ಕೋಡಿ ಮತ್ತು ಬೆಳಗಾವಿ ನಗರ ಜಿಲ್ಲೆ ಮಾಡಬೇಕೆಂದು ಕೂಗು ಇದೆ. ಇದೀಗ ಅಥಣಿಯನ್ನೂ ಜಿಲ್ಲೆ ಮಾಡುವಂತೆ ಆಗ್ರಹ ಕೇಳಿಬಂದಿದೆ.
ಮೂನ್ ಮಿಷನ್ನಲ್ಲಿ ಒಂದೇ ಗ್ರಾಮದ ಇಬ್ಬರು ವಿಜ್ಞಾನಿಗಳು ಭಾಗಿಯಾಗಿರುವುದು ವಿರಳ ಹಾಗೂ ವಿಶೇಷವಾಗಿದೆ. ಗಡಿಜಿಲ್ಲೆ ಬೆಳಗಾವಿಯ (Belagavi) ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದ ವಿಜ್ಞಾನಿಗಳಾದ (Scientists) ಕೇರಬಾ ಲೋಹರ್ ಮತ್ತು ಚಿದಾನಂದ ಮಗದುಮ್ ಮೂನ್ ಮಿಷನ್ಗೆ ಕೊಡುಗೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದೆ. ಹೀಗಾಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹಾಗೂ ಬೆಳಗಾವಿಯಿಂದ ಸಚಿವ ಸತೀಶ್ ಜಾರಕಿಹೊಳಿರನ್ನು ಕಣಕ್ಕಿಳಿಸಬೇಕೆಂದು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ ಎನ್ನಲಾಗುತ್ತಿದೆ.
ಕೈ ಕೊಟ್ಟ ಮುಂಗಾರು ಮಳೆಗೆ ರೈತರು ಕಂಗೆಟ್ಟು ಹೋಗಿದ್ದು, ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಹೌದು, ರಾಯಬಾಗ - ಕೇರೂರು - ನನದಿವಾಡಿ ಮಾರ್ಗದ ಜಿಎಲ್‌ಬಿಸಿ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಹಶಿಲ್ದಾರ್ ಕಚೇರಿ ಎದುರು ರಾಜ್ಯ ರೈತ ಸಂಘಗಳು ಪ್ರತಿಭಟನೆ ನಡೆಸಿವೆ.
ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಬಿದ್ದ ಎತ್ತುಗಳಿಗೆ ಚಿತ್ರಹಿಂಸೆ ನೀಡಿದ ಅಮಾನವೀಯ ಕೃತ್ಯ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ನಾಗರಪಂಚಮಿ ನಿಮಿತ್ತ ಹುಕ್ಕೇರಿ ಪಟ್ಟಣದ ಸಿರಿಯಾಳ ಸೃಷ್ಟಿ ಕಮೀಟಿ ಹುಕ್ಕೇರಿ - ಅರ್ಜುನವಾಡ ರಸ್ತೆಯಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು.
ಕಳೆದ ಮೂರು ದಶಕಗಳಿಂದ ಬೆಳಗಾವಿ ಜಿಲ್ಲೆ ವಿಭಜನೆಯ ಕೂಗು ಕೇಳಿಬರುತ್ತಿದೆ. ಈ ಕೂಗು ಜೋರಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಭಜನೆಯ ಮಾತುಗಳನ್ನು ಆಡಿದ ನಂತರ. ಬೆಳಗಾವಿಯನ್ನು ವಿಭಜಿಸಿ ಮೂರು ಜಿಲ್ಲೆ ಮಾಡಬೇಕೆಂದು ಆಗ್ರಹವಿದೆ. ಇದೀಗ ಬೆಳಗಾವಿ ಜಿಲ್ಲೆ ವಿಭಜನೆ ಪರವಾಗಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಧ್ವನಿ ಎತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರುಪಿನಾಳ ಗ್ರಾಮದ ರೈತ ಅಪ್ಪಾಸಾಹೇಬ್ ಎಂಬುವವರು ನಿತ್ಯ ಟೊಮೆಟೊ ಮಾರಾಟ ಮಾಡಿ ಲಕ್ಷ ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಹೌದು, ನಿರಂತರ 12 ವರ್ಷಗಳಿಂದ ಟೊಮೆಟೊ ಬೆಳೆಯುತ್ತಿದ್ದ ರೈತನಿಗೆ ಈ ವರ್ಷ ಲಕ್ ಖುಲಾಯಿಸಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಬಡಬ್ಯಾಕೂಡ್ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದೆ. ಹೌದು, ಸ್ನೇಹಿತನನ್ನೇ ಕೊಲೆ ಮಾಡಿ, ರುಂಡದೊಂದಿಗೆ ಊರಿಗೆ ಬಂದ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ - ಯಡೂರ ಮಾರ್ಗಮಧ್ಯ ಸಂಚರಿಸುವ ಸರ್ಕಾರಿ ಬಸ್ ಮೇಲೆ ಅಂಟಿಸಿರುವ ವೀರ ಸಾವರ್ಕರ್ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ, ಇದನ್ನು ಎಸ್ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಪರಿಶೀಲನೆಗೆ NWKRTCಗೆ ವರ್ಗಾಯಿಸುತ್ತೇವೆ ಎಂದು KSRTC ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ಮುನ್ನಲೆಗೆ ಬಂದಿದೆ.ಈ ಮಾತನ್ನು ಸ್ವತಃ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರೇ ಹೇಳಿದ್ದು, ತಾವು ಸಹ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ, ಗೋಕಾಕ್ ಜಿಲ್ಲೆ ಮಾಡಲು ಆಗ್ರಹಿಸುವುದಾಗಿ ತಿಳಿಸಿದ್ದಾರೆ.
ಶಾಸಕ ಗಣೇಶ್ ಹುಕ್ಕೇರಿ ಅವರು ತಂದೆ ಪ್ರಕಾಶ್ ಹುಕ್ಕೇರಿಗಾಗಿ ಹುದ್ದೆ ತ್ಯಾಗ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕಾಶ್ ಹುಕ್ಕೇರಿ ಸಂತಸಗೊಂಡಿದ್ದು, ಮಗನಿಂದಲೇ ಈ ಅಧಿಕಾರ ಸಿಕ್ಕಿದೆ ಎಂದು ಹೇಳಿದ್ದಾರೆ.
Soldiers Village: ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕೃಷ್ಣಾ ಉಪನದಿ ದೂಧ್‌ಗಂಗಾ ದಡದಲ್ಲಿರುವ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಈವರೆಗೂ ಐನೂರಕ್ಕೂ ಹೆಚ್ಚು ಜನ ಸೇವೆ ಸಲ್ಲಿಸಿ ಹಲವು ಯುದ್ಧಗಳಲ್ಲಿ ಹೋರಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಮಲಿಕವಾಡ ಗ್ರಾಮದ ದಿವಂಗತ ಬಾಳಾಸಾಹೇಬ್ ಕರಜಗೆ ಅವರು 1961ರ ಭಾರತ ಪಾಕಿಸ್ತಾನ ಯುದ್ಧ ಹಾಗೂ 1962ರ ಚೀನಾ ಭಾರತ ಯುದ್ಧದಲ್ಲಿ ಹೋರಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ರು.