ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ಬೆಳೆಯುವ ಸಾಧ್ಯತೆ

India GDP Growth: 2023-24ರ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಶೇ. 8ರಷ್ಟು ಜಿಡಿಪಿ ಬೆಳೆಯಬಹುದು ಎಂದು ಆರ್​ಬಿಐ ಮಾಡಿದ್ದ ಅಂದಾಜಿಗಿಂತಲೂ ಹೆಚ್ಚು ವೃದ್ಧಿ ಕಾಣುವ ಸಾಧ್ಯತೆ ಇದೆ. ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 8.3 ಮತ್ತು ಶೇ. 8.5ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ಮತ್ತು ಐಸಿಆರ್​ಎ ಸಂಸ್ಥೆಗಳ ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

Important Highlight‌
ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ಬೆಳೆಯುವ ಸಾಧ್ಯತೆ
ಭಾರತದ ಆರ್ಥಿಕತೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 23, 2023 | 4:21 PM

ನವದೆಹಲಿ, ಆಗಸ್ಟ್ 23: ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ (2023ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್) ಭಾರತದ ಜಿಡಿಪಿ (India GDP Growth) ನಿರೀಕ್ಷೆಮೀರಿ ಹೆಚ್ಚು ವೇಗದಲ್ಲಿ ವೃದ್ಧಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ತಿಂಗಳು ಆರ್​ಬಿಐ ನಡೆಸಿದ ಎಂಪಿಸಿ ಸಭೆಯಲ್ಲಿ ಜೂನ್ ಅಂತ್ಯದ ಕ್ವಾರ್ಟರ್​ನಲ್ಲಿ ಆರ್ಥಿಕತೆ ಶೇ. 8ರಷ್ಟು ಬೆಳೆಯಬಹುದು ಎಂಬ ಅಂದಾಜನ್ನು ಪುನರುಚ್ಚರಿಸಿತ್ತು. ಆದರೆ, ಐಸಿಆರ್​ಎ ಎಂಬ ಕ್ರೆಡಿಟ್ ರೇಟಿಂಗ್ ಏಜೆನ್ಸಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಥಿಕತಜ್ಞರು (Economists) ದೇಶದ ಜಿಡಿಪಿ ಶೇ. 8ಕ್ಕಿಂತಲೂ ಹೆಚ್ಚು ವೇಗದಲ್ಲಿ ಬೆಳೆಯುವ ಸಾಧ್ಯತೆಯನ್ನು ಕಂಡಿದ್ದಾರೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.3ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ಅಂದಾಜು ಮಾಡಿದರೆ, ಐಸಿಆರ್​ಎನ ಆರ್ಥಿಕ ತಜ್ಞರ ಅನಿಸಿಕೆ ಪ್ರಕಾರ ಜಿಡಿಪಿ ಶೇ. 8.5ರಷ್ಟು ಹೆಚ್ಚಬಹುದು.

ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ನಲ್ಲಿ ಜಾಗತಿಕ ಆರ್ಥಿಕ ಚಟುವಟಿಕೆ ನಿರೀಕ್ಷೆಗಿಂತ ಉತ್ತಮವಾಗಿದೆ. ಇದರಿಂದ ಸರ್ವಿಸ್ ಸೆಕ್ಟರ್​ಗೆ ಪುಷ್ಟಿ ಸಿಕ್ಕಿದೆ. ಈ ಸೇವಾ ವಲಯವು ಭಾರತದ ಆರ್ಥಿಕತೆಯನ್ನು ಮುನ್ನಡೆಸುತ್ತಿರುವುದು ಈ ಕ್ವಾರ್ಟರ್​ನಲ್ಲಿ ಆರ್ಥಿಕ ತಜ್ಞರಿಗೆ ಕಂಡು ಬಂದಿರುವ ಸಂಗತಿ.

ಇದನ್ನೂ ಓದಿ: ಚೀನಾದ ಆರ್ಥಿಕ ಪತನ ಶುರುವಾಗಿದ್ದ ಕೋವಿಡ್​ನಿಂದಲ್ಲ; 15 ವರ್ಷದ ಹಿಂದೆಯೇ ಆರಂಭವಾಗಿದ್ದವಾ ಚೀನೀ ದುರ್ದಿನಗಳು?

ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆಯು ಜಾಗತಿಕ ಆರ್ಥಿಕತೆಯ ಬೆಳವಣಿಗೆ ಶೇ. 3.5ರಿಂದ ಶೇ. 3ಕ್ಕೆ ಕುಸಿಯಬಹುದು ಎಂದು ಅಂದಾಜು ಮಾಡಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಗ್ಲೋಬಲ್ ಎಕನಾಮಿ ಗಮನಾರ್ಹ ರೀತಿಯಲ್ಲಿ ಸೆಟೆದು ನಿಂತಿದೆ. ಹೀಗಾಗಿ, ಸೇವಾ ವಲಯ ಗರಿಗೆದರಿದೆ. ಈ ಕ್ಷೇತ್ರದಲ್ಲಿ ಭಾರತ ಪ್ರಬಲವಾಗಿರುವುದು ಇಲ್ಲಿನ ಜಿಡಿಪಿ ವೃದ್ಧಿ ನಿಟ್ಟಿನಲ್ಲಿ ವರದಾನವಾಗಿ ಪರಿಣಮಿಸಿದೆ.

ಭಾರತದ ಜಿಡಿಪಿಯನ್ನು ಬೆಳೆಸುತ್ತಿರುವುದು ಜಾಗತಿಕ ಆರ್ಥಿಕ ಚೇತರಿಕೆ ಸ್ಥಿತಿ ಮಾತ್ರವಲ್ಲ, ಸಾಕಷ್ಟು ಬಂಡವಾಳ ಹೂಡಿಕೆಗಳು ಫಲ ಕೊಡುತ್ತಿವೆ. ಅದರಲ್ಲೂ ಸರ್ಕಾರದಿಂದಲೇ ಆಗುತ್ತಿರುವ ಬಂಡವಾಳ ವೆಚ್ಚವು ಆರ್ಥಿಕತೆಯನ್ನು ಎತ್ತಿ ಮುನ್ನುಗ್ಗಿಸುತ್ತಿದೆ.

ಇದನ್ನೂ ಓದಿ: ಅದಾನಿ ಕಂಪನಿಗೆ ದಂಡ ವಿಧಿಸಿದ ಸ್ಟಾಕ್ ವಿನಿಮಯ ಕೇಂದ್ರಗಳು; ಕ್ರಮ ಒಪ್ಪದ ಅದಾನಿ ಎಂಟರ್ಪ್ರೈಸಸ್; ಏನು ಕಾರಣ?

ಐಸಿಆರ್​ಎನ ಮುಖ್ಯ ಆರ್ಥಿಕತಜ್ಞೆ ಅದಿತಿ ನಾಯರ್ ಹಾಗೂ ಎಸ್​ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯಾ ಕಾಂತಿ ಘೋಷ್ ಬಹುತೇಕ ಅದೇ ಅಭಿಪ್ರಾಯ ಪುನರುಚ್ಚರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು