ದೂರು ದಾಖಲಾದ ಒಂದೂವರೆ ಗಂಟೆಯಲ್ಲೇ ಕಿಡ್ನ್ಯಾಪ್ ಆರೋಪಿ ಅಂದರ್

ಬೆಂಗಳೂರು: ಬಾಲಕನ ಅಪಹರಣ ಸಂಬಂಧ ದೂರು ಬಂದ ಕೂಡಲೇ ಆ್ಯಕ್ಟೀವ್ ಆದ ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ, ಕೇವಲ ಒಂದೂವರೆ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಚಿರಾಗ್ ಆರ್.ಮೆಹ್ತಾ(21) ಬಂಧಿತ ಆರೋಪಿ. ನಿನ್ನೆ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಾಟನ್ ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ 10 ವರ್ಷದ ಬಾಲಕನನ್ನು ಆರೋಪಿ ಚಿರಾಗ್ ಅಪಹರಿಸಿದ್ದ. ಕಿಡ್ನ್ಯಾಪ್ ನಂತರ ಬಾಲಕನ ತಂದೆಗೆ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಲ್ಯಾವೆಲ್ಲಿ ರಸ್ತೆಯ […]

Important Highlight‌
ದೂರು ದಾಖಲಾದ ಒಂದೂವರೆ ಗಂಟೆಯಲ್ಲೇ ಕಿಡ್ನ್ಯಾಪ್ ಆರೋಪಿ ಅಂದರ್
Follow us
ಸಾಧು ಶ್ರೀನಾಥ್​
|

Updated on:Jan 29, 2020 | 3:02 PM

ಬೆಂಗಳೂರು: ಬಾಲಕನ ಅಪಹರಣ ಸಂಬಂಧ ದೂರು ಬಂದ ಕೂಡಲೇ ಆ್ಯಕ್ಟೀವ್ ಆದ ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಆಧರಿಸಿ, ಕೇವಲ ಒಂದೂವರೆ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಚಿರಾಗ್ ಆರ್.ಮೆಹ್ತಾ(21) ಬಂಧಿತ ಆರೋಪಿ.

ನಿನ್ನೆ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಾಟನ್ ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ 10 ವರ್ಷದ ಬಾಲಕನನ್ನು ಆರೋಪಿ ಚಿರಾಗ್ ಅಪಹರಿಸಿದ್ದ. ಕಿಡ್ನ್ಯಾಪ್ ನಂತರ ಬಾಲಕನ ತಂದೆಗೆ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಲ್ಯಾವೆಲ್ಲಿ ರಸ್ತೆಯ ಏರ್​ಲೈನ್ಸ್ ಹೋಟೆಲ್​ ಬಳಿ ಬಂದಿದ್ದ ಆರೋಪಿ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದವನ ಮೊಬೈಲ್​ನಿಂದ ಕರೆ ಮಾಡಿದ್ದಾನೆ. ನಂತರ ಬಾಲಕನ ತಂದೆ ಕಾಟನ್​ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಟವರ್ ಲೊಕೇಷನ್ ಆಧರಿಸಿ ಆರೋಪಿಯನ್ನ ಸೆರೆ ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಏರ್​ಲೈನ್ಸ್ ಹೋಟೆಲ್​ ಬಳಿ ಲ್ಯಾವೆಲ್ಲಿ ರಸ್ತೆಯ ಪಾರ್ಕಿಂಗ್​ನಲ್ಲಿ ಬೌನ್ಸ್ ಬೈಕ್ ಮೇಲೆ ಮಗುವನ್ನು ಕೂರಿಸಿದ್ದ. ಲೊಕೇಷನ್ ಆಧರಿಸಿ ಬೆನ್ನತ್ತಿದ್ದ ಪೊಲೀಸರನ್ನು ಕಂಡು ಓಡುವ ವೇಳೆ ಕಾರು ಡಿಕ್ಕಿಯಾಗಿ ನೆಲಕ್ಕೆ ಬಿದ್ದಿದ್ದಾನೆ. ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಗುವನ್ನು ಸುರಕ್ಷಿತವಾಗಿ ತಂದೆ ಕೈಗೆ ಒಪ್ಪಿಸಿದ್ದಾರೆ.

ಟಿವಿಗಳಲ್ಲಿ ಕ್ರೈಂ ಸೀರಿಯಲ್ ನೋಡಿ ಕಿಡ್ನ್ಯಾಪ್ ಪ್ಲ್ಯಾನ್: ಇನ್ನು ಕಿಡ್ನ್ಯಾಪ್ ಆರೋಪಿ ಚಿರಾಗ್ ಬಸವನಗುಡಿಯಲ್ಲಿ ವಾಸವಾಗಿದ್ದ. ಕೆಲಸ ಇಲ್ಲದೆ ಮನೆಯಲ್ಲಿ ಟಿವಿ ನೋಡುವುದೇ ಇವನ ನಿತ್ಯದ ಕಾಯಕವಾಗಿತ್ತು. ಟಿವಿಗಳಲ್ಲಿ ಕ್ರೈಂ ಸೀರಿಯಲ್ ನೋಡಿ ಕಿಡ್ನ್ಯಾಪ್​ಗೆ ಪ್ಲ್ಯಾನ್ ಮಾಡಿದ್ದಾನೆ. ಈ ಹಿಂದೆ ಒಮ್ಮೆ ತನ್ನ ಮನೆಯಲ್ಲೇ ಕದ್ದು ತಂದೆ ಕೈಗೆ ಸಿಕ್ಕಿಹಾಕಿಕೊಂಡಿದ್ದ. ಕೆಲ ದಿನಗಳ ಹಿಂದಷ್ಟೇ ಬಾಲಕನೊಬ್ಬನನ್ನು ಅಪಹರಿಸಿದ್ದ. ಆಗ ಗೆಳೆಯರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕನನ್ನ ಬಿಟ್ಟಿದ್ದ. ಆದರೆ ಈ ಬಾರಿ ಹಣಕ್ಕಾಗಿ ಶಾಲೆ ಬಳಿ ಬಾಲಕನನ್ನು ಅಪಹರಿಸಿ ಪೊಲೀಸರ ಅತಿಥಿಯಾಗಿದ್ದಾನೆ.

Published On - 2:52 pm, Wed, 29 January 20

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ