ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವು

Haveri News: ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ.

Important Highlight‌
ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್​ ಸಾವು
ಮೃತ ಹೆಡ್​ಕಾನ್ಸ್​ಟೇಬಲ್​ ಬಸಪ್ಪ ಮಲ್ಲಾಡದ
Follow us
Suraj Mahaveer Utture
| Updated By: ಗಂಗಾಧರ​ ಬ. ಸಾಬೋಜಿ

Updated on: Aug 06, 2023 | 6:03 PM

ಹಾವೇರಿ, ಆಗಸ್ಟ್​ 06: ಲೋ ಬಿಪಿಯಾಗಿ ಕುಸಿದುಬಿದ್ದು ಕರ್ತವ್ಯನಿರತ ಹೆಡ್​ಕಾನ್ಸ್​ಟೇಬಲ್ (Head constable)​ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ. ರಟ್ಟೀಹಳ್ಳಿ ಪೊಲೀಸ್​ ಠಾಣೆ ಬಸಪ್ಪ ಮಲ್ಲಾಡದ(48) ಮೃತ ಹೆಡ್​ಕಾನ್ಸ್​ಟೇಬಲ್​. ಮೂಲತಃ ರಾಣೆಬೆನ್ನೂರು ತಾಲ್ಲೂಕಿನ ಹಾರೋಗೊಪ್ಪ ನಿವಾಸಿ. 26 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ.

ಬಲಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕೋಲಾರ ‌ಜಿಲ್ಲೆ ಕೆಜಿಎಫ್ ಮೂಲದ ಯಶ್ವಂತ್(27) ಮೃತ ಯುವಕ. ನಾಲ್ವರು ಸ್ನೇಹಿತರ ಜೊತೆ ಪಿಕ್ನಿಕ್​ಗೆ ಬಂದಿದ್ದ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ. ಕೆಆರ್​ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಗದಗ: ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೊತ್ತದ ಜಮೀನು ಲೂಟಿಗೆ ಪ್ಲಾನ್! ಆರು ಮಂದಿ ಅರೆಸ್ಟ್

ಮರದ ಕೊಂಬೆ ಕಡಿಯುವಾಗ ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವು

ಚಿಕ್ಕಮಗಳೂರು: ಮರದ ಕೊಂಬೆ ಕಡಿಯುವಾಗ ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪಗೌಡ(56) ಮೃತ ವ್ಯಕ್ತಿ.  ವಿದ್ಯುತ್ ತಂತಿಗೆ ತಗುಲುತ್ತಿದ್ದ ಕೊಂಬೆ ಕಡಿಯುತ್ತಿದ್ದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾಳೂರು ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಮನೆಗಳ್ಳರ ಬಂಧನ

ಜಮೀನಿನ ರಸ್ತೆ ವಿವಾದ: ಸೈಜುಗಲ್ಲು ಎತ್ತಿಹಾಕಿ ಮಹಿಳೆ ಕೊಲೆಗೆ ಯತ್ನ

ತುಮಕೂರು: ಜಮೀನಿನ ರಸ್ತೆ ವಿವಾದ, ಸೈಜುಗಲ್ಲು ಎತ್ತಿಹಾಕಿ ಮಹಿಳೆ ಕೊಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮಮ್ಮನಹಳ್ಳಿಯಲ್ಲಿ ನಡೆದಿದೆ. ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ಸುಬ್ಬಯ್ಯ ಎಂಬುವವರಿಂದ ಕೃತ್ಯವೆಸಗಲಾಗಿದೆ. ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಕಲ್ಲು ಹಾಕಿ ಬಂದ್‌ ಮಾಡಿದ್ದ.

ಜಮೀನಿಗೆ ತೆರಳಲು ದಾರಿ ಬಿಡುವಂತೆ ಕೇಳಿದ್ದಕ್ಕೆ ಅಕ್ಕಮ್ಮ ಹತ್ಯೆಗೆ ಯತ್ನಿಸಲಾಗಿದೆ. ಸೈಜುಗಲ್ಲು ಎತ್ತಿಹಾಕಿದರೂ ಅದೃಷ್ಟವಶಾತ್ ಬಚಾವ್​ ಆಗಿದ್ದಾರೆ. ಸೊಂಟ, ಕಾಲಿಗೆ ಗಂಭೀರ ಗಾಯಗಳಾಗಿದ್ದು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು