ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಹತ್ಯೆ
ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ. ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Important Highlight
ದೇವನಹಳ್ಳಿ: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮೀನಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಇಂದು ಚಿಕಿತ್ಸೆ ಫಲಕಾರಿಯಾಗದೆ ರೌಡಿಶೀಟರ್ ಸುಬ್ರಹ್ಮಣ್ಯ(30) ಮೃತಪಟ್ಟಿದ್ದಾರೆ.
ಮೀನುಕುಂಟೆ ಹೊಸೂರು ಗ್ರಾಮದಲ್ಲಿ ನಿನ್ನೆ ಸಂಜೆ ಬೈಕ್ನಲ್ಲಿ ಬಂದಿದ್ದವರು ಸುಬ್ರಹ್ಮಣ್ಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು. ತೀವ್ರ ಗಾಯಗೊಂಡಿದ್ದ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಸಾವಿಗೀಡಾಗಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿ