IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!

|

Updated on: Jan 29, 2020 | 11:13 AM

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ […]

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!
Follow us on

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ಐಎಂಎ ಕಂಪನಿ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸದೆ ಐಪಿಎಸ್​ ಅಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಅಲ್ಲದೆ, ಆರ್​ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್ ಚಿಟ್ ನೀಡುವ ಮೂಲಕ ಐಎಂಎ ಕಂಪನಿ ಅಕ್ರಮ ಮುಂದುವರಿಸಲು ನೆರವಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಐಎಂಎ ಕಂಪನಿಯು 1 ಲಕ್ಷ ಜನರಿಂದ 4 ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿ ಹೂಡಿಕೆದಾರರಿಗೆ ವಂಚನೆ ಮಾಡಿದೆ.


Published On - 7:46 am, Wed, 29 January 20