Telangana Assembly Elections: ಕಡಿಮೆ ಅಂತರದಿಂದ ಬಿಆರ್​ಎಸ್ ಗೆದ್ದಿದ್ದ 34 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಕೆಸಿಆರ್

ವರ್ಷದ ಅಂತ್ಯದಲ್ಲಿ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಈ ಬಾರಿ ಆಡಳಿತಾರೂಢ ಬಿಆರ್​ಎಸ್​ಗೆ ಬಿಜೆಪಿಯು ಟಕ್ಕರ್ ನೀಡುವ ಉತ್ಸಾಹದಲ್ಲಿದೆ.

Important Highlight‌
Telangana Assembly Elections: ಕಡಿಮೆ ಅಂತರದಿಂದ ಬಿಆರ್​ಎಸ್ ಗೆದ್ದಿದ್ದ 34 ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟ ಕೆಸಿಆರ್
ಕೆ ಚಂದ್ರಶೇಖರ್ ರಾವ್Image Credit source: The print
Follow us
ನಯನಾ ರಾಜೀವ್
|

Updated on:Mar 31, 2023 | 1:32 PM

ವರ್ಷದ ಅಂತ್ಯದಲ್ಲಿ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿ ಈ ಬಾರಿ ಆಡಳಿತಾರೂಢ ಬಿಆರ್​ಎಸ್​ಗೆ ಬಿಜೆಪಿಯು ಟಕ್ಕರ್ ನೀಡುವ ಉತ್ಸಾಹದಲ್ಲಿದೆ. ಹೀಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಗಂಭೀರವಾಗಿ ಪರಿಗಣಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಆರ್​ಎಸ್ ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆದ್ದಿದ್ದ 34 ಕ್ಷೇತ್ರಗಳ ಮೇಲೆ ಹೆಚ್ಚುವರಿ ನಿಗಾ ನೀಡುವಂತೆ ಪಕ್ಷಕ್ಕೆ ಕೆಸಿಆರ್ ಸೂಚನೆ ನೀಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ಅಭ್ಯರ್ಥಿಗಳು 5 ರಿಂದ 10 ಸಾವಿರ ಮತಗಳ ಅಂತರದಿಂದ ಗೆದ್ದವರಿದ್ದಾರೆ. ಆದರೆ 34 ಕ್ಷೇತ್ರಗಳಲ್ಲಿನ ಗೆಲುವಿನ ಅಂತರವು ಕೆಲ 100ಗಳಲ್ಲಿದೆ, ಇಂತಹ ಸಾಕಷ್ಟು ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ಬಿಆರ್​ಎಸ್​ ಅನ್ನು ಕೂಡ ಸೇರಿದ್ದಾರೆ, ಆದಾಗ್ಯೂ ಅಧಿಕಾರವನ್ನು ಉಳಿಸಿಕೊಳ್ಳಲು ಈ ಕ್ಷೇತ್ರಗಳಲ್ಲಿ ಗೆಲುವು ಅನಿವಾರ್ಯ ಎನ್ನುವುದನ್ನು ಕೆ ಚಂದ್ರಶೇಖರ್ ರಾವ್ ಮನಗಂಡಿದ್ದಾರೆ.

ಸಚಿವ ಜಿ ಜಗದೀಶ್ ರೆಡ್ಡಿ ಸುಮಾರು 5,967 ಮತಗಳ ಬಹುಮತದಿಂದ ಜಯಗಳಿಸಿದ್ದರೆ, ಇಂದ್ರ ಕಿರಣ್ ರೆಡ್ಡಿ 9,271 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸಚಿವ ಕೊಪ್ಪುಳ ಈಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇವಲ 446 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಶಾಸಕರಾದ ಗಂಪ ಗೋವರ್ಧನ್, ಎನ್.ದಿವಾಕರ್ ರಾವ್ ಅವರು ಕ್ರಮವಾಗಿ 4,557 ಮತಗಳು ಮತ್ತು 4,838 ಮತಗಳಿಂದ ಜಯಗಳಿಸಿದ್ದರು. ಅನೇಕರು ಕಾಂಗ್ರೆಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಡಿಮೆ ಅಂತರದಲ್ಲಿ ಗೆದ್ದರು ನಂತರ BRS ಗೆ ಸೇರ್ಪಡೆಗೊಂಡರು.

ಮತ್ತಷ್ಟು ಓದಿ: Karnataka Assembly Election 2023: ಇಂದು ಒಂದೇ ದಿನ ಇಬ್ಬರು ಬಿಜೆಪಿ, ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸರದಿಯಲ್ಲಿ ಮತ್ತೋರ್ವ ಶಾಸಕ

ಈಗಾಗಲೇ ಈ ಕ್ಷೇತ್ರಗಳ ಬಗ್ಗೆ ಪ್ರತ್ಯೇಕ ಸಮೀಕ್ಷೆ ನಡೆಸಿ ಗೆಲುವಿನ ಸಾಧ್ಯಾಸಾಧ್ಯತೆ ಹಾಗೂ ಹಾಲಿ ಅಭ್ಯರ್ಥಿಗಳ ಪ್ರಭಾವವನ್ನು ಅಂದಾಜಿಸಲಾಗಿದೆ. ಈ ಸಮೀಕ್ಷೆ ಆಧರಿಸಿ ಟಿಕೆಟ್ ನೀಡಲು ಕೆಸಿಆರ್ ನಿರ್ಧರಿಸಿದ್ದಾರೆ, ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಸಿಆರ್ ಹೇಳಿದ್ದರೂ, ಈ ಸಮೀಕ್ಷಾ ವರದಿ ಆಧರಿಸಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಕೆಸಿಆರ್ ನಡೆಸಿದ ಸಮೀಕ್ಷೆ ಪ್ರಕಾರ ಸುಮಾರು 19 ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಸಕ್ರಿಯರಾಗಿಲ್ಲ ಎಂಬುದು ತಿಳಿದುಬಂದಿದೆ. ಹಾಗೆಯೇ ಇನ್ನೂ ಕೆಲವು ಶಾಸಕರು ಪಕ್ಷ ಹಾಗೂ ಕ್ಷೇತ್ರದ ಬದಲಾಗಿ ವೈಯಕ್ತಿಕ ವ್ಯವಹಾರದ ವಿಸ್ತರಣೆಯಲ್ಲಿ ತೊಡಗಿದ್ದಾರೆ, ಇಂಥವರಿಗೂ ಟಿಕೆಟ್ ನೀಡದಿರಲು ಕೆಸಿಆರ್ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲ ವರದಿ: Pavitra Bhashyam

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇತರೆ ಚುನಾವಣಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Fri, 31 March 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ