ತ್ರಿಪುರಾ: ಫೆಬ್ರವರಿ 16 ರಂದು ತ್ರಿಪುರಾ (Tripura) ವಿಧಾನಸಭಾ ಚುನಾವಣೆ (Tripura Assembly Election) ನಡೆಯಲಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳು ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿವೆ. ಈ ಹಿನ್ನೆಲೆ ಇಂದು (ಫೆ.3) ತ್ರಿಪುರಾ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಭೇಟಿ ನೀಡಲಿದ್ದು, 2 ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 55 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಉಳಿದ 5 ಕ್ಷೇತ್ರಗಳಲ್ಲಿ ಐಪಿಎಫ್ಟಿ ಸ್ಪರ್ಧಿಸಲಿದೆ. ಬಿಜೆಪಿ ಮತ್ತು ಐಪಿಎಫ್ಟಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.
ಜೆಪಿ ನಡ್ಡಾ ರಾಜ್ಯದ ಕುಮಾರ್ಘಾಟ್ ಮತ್ತು ಅಮರಪುರ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ತ್ರಿಪುರಾ ಘಟಕದ ಮಾಧ್ಯಮ ಉಸ್ತುವಾರಿ ಸುನೀತ್ ಸರ್ಕಾರ್ ಗುರುವಾರ ಹೇಳಿದ್ದಾರೆ. ಅಲ್ಲದೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಸುವೇಂದು ಅಧಿಕಾರಿ ಮತ್ತು ಬಂಗಾಳದ ಹಲವಾರು ಪಕ್ಷದ ನಾಯಕರು ಕೂಡ ಬಿಜೆಪಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರಚಾರದ ಸಲುವಾಗಿ ಫೆಬ್ರವರಿ 6 ರಂದು ತ್ರಿಪುರಾಗೆ ಭೇಟಿ ನೀಡುವ ಸಾಧ್ಯತೆಯಿದೆ. ಹಾಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಬ್ರವರಿ 7 ರಂದು ಭೇಟಿ ನೀಡಲಿದ್ದಾರೆ
ಈ ಮಧ್ಯೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ತೃಣಮೂಲ ಕಾಂಗ್ರೆಸ್)ನ ಪಶ್ಚಿಮ ಬಂಗಾಳ ಮುಖ್ಯಮಂಯತ್ರಿ ಮಮತಾ ಬ್ಯಾನರ್ಜಿ ಕೂಡ ಫೆಬ್ರವರಿ 6 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 7 ರಂದು ಟಿಎಂಸಿ ಅಭ್ಯರ್ಥಿ ಮತ ಯಾಚನೆಗೆ ಮಮತಾ ಬ್ಯಾನರ್ಜಿ ರೋಡ್ ಶೋ ನಡೆಸಲಿದ್ದಾರೆ. ಇವರನ್ನು ಹೊರತುಪಡಿಸಿ, ಸಂಸದ ಮಹುವಾ ಮೊಯಿತ್ರಾ, ಪಶ್ಚಿಮ ಬಂಗಾಳ ಸಚಿವ ಫಿರ್ಹಾದ್ ಹಕೀಮ್ ಸೇರಿದಂತೆ 37 ಸ್ಟಾರ್ ಪ್ರಚಾರಕರು ಟಿಎಂಸಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತ್ರಿಪುರಾಗೆ ತೆರಳಲಿದ್ದಾರೆ.
ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ