BSNL Recruitment 2023: ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) 11,705 ಜೂನಿಯರ್ ಟೆಲಿಕಾಂ ಆಫೀಸರ್ (Junior Telecom Officer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತ್ ಸಂಚಾರ ನಿಗಮ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಿ ಅಪ್ಲಿಕೇಶನ್ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಹುದ್ದೆಗಳ ಹೆಸರು ಮತ್ತು ಸಂಖ್ಯೆ:
ಜೂನಿಯರ್ ಟೆಲಿಕಾಂ ಆಫೀಸರ್- 11,705 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೂರಸಂಪರ್ಕ/ಎಲೆಕ್ಟ್ರಾನಿಕ್ಸ್/ರೇಡಿಯೊ/ಕಂಪ್ಯೂಟರ್/ಎಲೆಕ್ಟ್ರಿಕಲ್/ಐಟಿ/ಇನ್‌ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಎಲೆಕ್ಟ್ರಾನಿಕ್ಸ್/ಸಿಎಸ್‌ಇಯಲ್ಲಿ ಎಂ.ಎಸ್ಸಿ ಪದವಿಯನ್ನು ಮಾಡಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 20 ವರ್ಷದಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮಾಸಿಕ ವೇತನ:
ಈ ಹುದ್ದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 16,400 ರಿಂದ 40,500 ರೂ. ರವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
ಅರ್ಜಿ ಶುಲ್ಕ:
ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ, ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Registered Office- BSNL, New Delhi.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಜನವರಿ 31, 2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:22 pm, Wed, 4 January 23