Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

| Updated By: Zahir Yusuf

Updated on: Feb 19, 2023 | 2:28 PM

Canara Bank Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನೆರಾ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Canara Bank Recruitment 2023: ಕೆನರಾ ಬ್ಯಾಂಕ್ ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ
Canara Bank Recruitment 2023
Follow us on

Canara Bank Recruitment 2023: ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ರೆ ಕೆನರಾ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ. ಕೆನರಾ ಬ್ಯಾಂಕ್ ಒಟ್ಟು ಚೀಫ್ ಡಿಜಿಟಲ್ ಆಫೀಸರ್, ಚೀಫ್​ ಟೆಕ್ನಾಲಜಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆನರಾ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್ www.canarabank.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- 1 ಹುದ್ದೆ
  • ಚೀಫ್ ಡಿಜಿಟಲ್ ಆಫೀಸರ್(CDO)- 1 ಹುದ್ದೆ
  • ಚೀಫ್ ಟೆಕ್ನಾಲಜಿ ಆಫೀಸರ್(CTO)- 1 ಹುದ್ದೆ

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- ಈ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಚೀಫ್ ಡಿಜಿಟಲ್ ಆಫೀಸರ್ (CDO)- ಈ ಹುದ್ದೆಗಳಿಗೆ ಬಿಇ/ಬಿ.ಟೆಕ್ ಹಾಗೂ ಎಂಸಿಎ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಚೀಫ್ ಟೆಕ್ನಾಲಜಿ ಆಫೀಸರ್(CTO)- ಪದವಿ ಅಥವಾ ಬಿಇ/ಬಿ.ಟೆಕ್ ಅಥವಾ ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ವಯೋಮಿತಿ:

  • ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO)- ಈ ಹುದ್ದೆಗಳಿಗೆ 55 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಚೀಫ್ ಡಿಜಿಟಲ್ ಆಫೀಸರ್ (CDO)- ಈ ಹುದ್ದೆಗಳಿಗೆ 40 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಚೀಫ್ ಟೆಕ್ನಾಲಜಿ ಆಫೀಸರ್ (CTO)- ಈ ಹುದ್ದೆಗಳಿಗೆ 40 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಇದನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಲಾಗುತ್ತದೆ. ಆ ಬಳಿಕ ಸಂದರ್ಶನ ನಡೆಯಲಿದ್ದು, ಇದರಲ್ಲಿ ಪಾಸಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ- ಮಾರ್ಚ್​ 6, 2023

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

Published On - 2:12 pm, Sun, 19 February 23