ಭಾರತೀಯ ವಾಯುಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

| Updated By: Zahir Yusuf

Updated on: Aug 23, 2023 | 2:49 PM

IAF Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹಾಗೆಯೇ ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಭಾರತೀಯ ವಾಯುಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
IAF Recruitment 2023
Follow us on

IAF Recruitment 2023: ಭಾರತೀಯ ವಾಯುಪಡೆಯ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಏರ್ ಫೋರ್ಸ್ ( IAF )ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಯ ಹೆಸರು: ಅಗ್ನಿವೀರ್​ ವಾಯು

ಶೈಕ್ಷಣಿಕ ಅರ್ಹತೆ:

IAF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸ್ಟ್ರೀಮ್ ಸೂಕ್ತತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.30000 ರಿಂದ 40000/- ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ನೇರ ಸಂದರ್ಶನ ನಡೆಯುವ ದಿನಾಂಕ: 16-ಸೆಪ್ಟೆಂಬರ್-2023
  • ನೇಮಕಾತಿ ರ್ಯಾಲಿಯ ದಿನಾಂಕ : 12 ರಿಂದ 17 ಸೆಪ್ಟೆಂಬರ್ 2023
  • ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ: 12 ರಿಂದ 16 ಸೆಪ್ಟೆಂಬರ್ 2023
  • ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-ಸೆಪ್ಟೆಂಬರ್-2023

ಇದನ್ನೂ ಓದಿ: ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

ಅಧಿಸೂಚನೆಯ ಲಿಂಕ್‌ಗಳು:

ಅಗ್ನಿವೀರ್​ವಾಯು (Non-Combatant): ಇಲ್ಲಿ ಕ್ಲಿಕ್ ಮಾಡಿ
ಅಗ್ನಿವೀರ್​ವಾಯು (Musician): ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: indianairforce.nic.in