Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

| Updated By: Zahir Yusuf

Updated on: Jan 31, 2023 | 2:41 PM

Income Tax Recruitment 2023: ಈ ನೇಮಕಾತಿ ಅಡಿಯಲ್ಲಿ ಆದಾಯ ತೆರಿಗೆ ಇನ್ಸ್ ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Income Tax Recruitment 2023
Follow us on

Income Tax Recruitment 2023: ಸರ್ಕಾರಿ ನೌಕರಿಯನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಆದಾಯ ತೆರಿಗೆ ಇಲಾಖೆಯು ವಿವಿಧ ಹುದ್ದೆಗಳಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಆದಾಯ ತೆರಿಗೆ ಇನ್ಸ್ ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್​ಸೈಟ್ tnincometax.gov.in​  ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆ- 28 ಹುದ್ದೆಗಳು
  • ಆದಾಯ ತೆರಿಗೆ ಸಹಾಯ ಹುದ್ದೆ- 28 ಹುದ್ದೆಗಳು
  • ಎಂಟಿಎಸ್- 16 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 72 ಹುದ್ದೆಗಳು

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ
  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಪದವಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ತೆರಿಗೆ ಸಹಾಯಕ ಹುದ್ದೆಗಳಿಗೆ ಪದವಿ ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ ಪೋಸ್ಟ್‌ ಅಥವಾ ಎಂಟಿಎಸ್​ ಹುದ್ದೆಗಳಿಗೆ 10ನೇ ಪಾಸ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಈ ಅರ್ಹತೆಗಳೊಂದಿಗೆ ಕ್ರೀಡಾ ಸಾಧನೆಯ ಪ್ರಮಾಣ ಪತ್ರಗಳನ್ನು ಹೊಂದಿರಬೇಕಾಗುತ್ತದೆ.

ವೇತನ:

ಆದಾಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 9300-34800 ರೂ.ವರೆಗೆ ವೇತನವನ್ನು ನೀಡಲಾಗುತ್ತದೆ. ಹಾಗೆಯೇ ತೆರಿಗೆ ಸಹಾಯಕ ಮತ್ತು MTS ಪೋಸ್ಟ್‌ಗಳಿಗೆ ತಿಂಗಳಿಗೆ 5200 ರಿಂದ 20200 ರೂ.ವರೆಗೆ ವೇತನ ಸಿಗಲಿದೆ.

ವಯೋಮಿತಿ:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆ- 18 ರಿಂದ 30 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಆದಾಯ ತೆರಿಗೆ ಸಹಾಯ ಹುದ್ದೆ- 18 ರಿಂದ 27 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
  • ಎಂಟಿಎಸ್ ಹುದ್ದೆ- 18 ರಿಂದ 27 ವರ್ಷಗಳವರೆಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read: Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 6, 2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.