Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ

Indian Navy Agniveer SSR Recruitment 2022: ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 08 ರಿಂದ ಶುರುವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

Important Highlight‌
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Indian Navy SSR Recruitment 2022
Follow us
TV9 Digital Desk
| Updated By: Zahir Yusuf

Updated on: Nov 27, 2022 | 8:15 AM

Indian Navy SSR Recruitment 2022: ಭಾರತೀಯ ನೌಕಾಪಡೆಯು ಸೀನಿಯರ್ ಸೆಕೆಂಡರಿ ನೇಮಕಾತಿ (SSR) ಮೂಲಕ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 08 ರಿಂದ ಶುರುವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 1400

ಅರ್ಹತಾ ಮಾನದಂಡಗಳು: ಎಸ್ಎಸ್ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಗಣಿತ ಮತ್ತು ಭೌತಶಾಸ್ತ್ರ ವಿಷಯದೊಂದಿಗೆ 12ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಮೇ 1, 2002 ರಿಂದ ಅಕ್ಟೋಬರ್ 31, 2005 ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿರಬೇಕು.

ಅರ್ಜಿ ಶುಲ್ಕ: ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 550/- ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:

  • – ಶಾರ್ಟ್‌ಲಿಸ್ಟಿಂಗ್ (ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ)
  • – ಲಿಖಿತ ಪರೀಕ್ಷೆ
  • – PFT ಮತ್ತು ಪ್ರಾಥಮಿಕ ವೈದ್ಯಕೀಯ
  • – ಅಂತಿಮ ನೇಮಕಾತಿ ವೈದ್ಯಕೀಯ ಪರೀಕ್ಷೆ

ಈ ಮೇಲಿನ ಅರ್ಹತೆಯ ಆಧಾರದ ಮೇಲೆ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆಯನ್ನು ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ಡಿಸೆಂಬರ್ 8, 2022
  • ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 17, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು