Indian Navy SSR Recruitment 2022: ಭಾರತೀಯ ನೌಕಾಪಡೆಯು ಸೀನಿಯರ್ ಸೆಕೆಂಡರಿ ನೇಮಕಾತಿ (SSR) ಮೂಲಕ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 08 ರಿಂದ ಶುರುವಾಗಲಿದ್ದು, ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 1400
ಅರ್ಹತಾ ಮಾನದಂಡಗಳು:
ಎಸ್ಎಸ್ಆರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಗಣಿತ ಮತ್ತು ಭೌತಶಾಸ್ತ್ರ ವಿಷಯದೊಂದಿಗೆ 12ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಮೇ 1, 2002 ರಿಂದ ಅಕ್ಟೋಬರ್ 31, 2005 ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿರಬೇಕು.
ಅರ್ಜಿ ಶುಲ್ಕ:
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 550/- ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಮೇಲಿನ ಅರ್ಹತೆಯ ಆಧಾರದ ಮೇಲೆ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆಯನ್ನು ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.