IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಉದ್ಯೋಗ ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. IOCL ದೇಶಾದ್ಯಂತ ತನ್ನ ಕಚೇರಿಗಳಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಆಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 465
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಇಂಜಿನಿಯರ್ ಮತ್ತು ಡಿಪ್ಲೋಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಅಧಿಕೃತ ಅಧಿಸೂಚನೆಯಲ್ಲಿ ಈ ಬಗ್ಗೆ ಪರಿಶೀಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 24 ವರ್ಷಗಳ ನಡುವೆ ಇರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30 ನವೆಂಬರ್ 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.