NCB Recruitment 2023: ಮಾಸಿಕ ವೇತನ 34 ಸಾವಿರ ರೂ: ಪದವೀಧರರಿಗೆ ಇಲ್ಲಿದೆ ಉದ್ಯೋಗಾವಕಾಶ
NCB Recruitment 2023: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಈ ಹುದ್ದೆಗಳಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
NCB Recruitment 2023: ನಿಮಗೆ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದೆಯಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಿಭಾಗದ 52 ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅಂದರೆ ಅಂಚೆಯ ಮೂಲಕ ಅರ್ಜಿಗಳನ್ನು ಕಳುಹಿಸಬೇಕು. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಸಂಸ್ಥೆಯ ಹೆಸರು : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ( NCB )
- ಹುದ್ದೆಗಳ ಸಂಖ್ಯೆ: 52
- ಉದ್ಯೋಗ ಸ್ಥಳ: ಭಾರತ
- ಹುದ್ದೆಯ ಹೆಸರು: ಇಂಟೆಲಿಜೆನ್ಸ್ ಆಫೀಸರ್
ಶೈಕ್ಷಣಿಕ ಅರ್ಹತೆ:
NCBಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 9300 ರಿಂದ 34800 ರೂ.ವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ದಾಟಿರಬಾರದು.
ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 21, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ:
Deputy Director General (HQ), Narcotics Control Bureau, West Block No.1, Wing No.5, R.K.Puram, New Delhi-110066
ಅರ್ಜಿ ಡೌನ್ಲೋಡ್ ಮಾಡುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.