ಖ್ಯಾತ ನಟಿಯ ಜೀವನ ಡೇಂಜರ್ನಲ್ಲಿದೆ ಎಂದ ನಿರ್ದೇಶಕ ಪೊಲೀಸರ ವಶಕ್ಕೆ
ಗುರುವಾರ (ಮೇ 5) ಸನಲ್ ಅವರು ತಿರುವನಂತಪುರಂನಲ್ಲಿದ್ದರು. ಅಲ್ಲಿಯೇ ಪೊಲೀಸರು ಸನಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ‘ಬ್ಲಾಕ್ಮೇಲ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಅಪಖ್ಯಾತಿ ತರುವ ಪ್ರಯತ್ನ ನಡೆದಿದೆ’ ಎಂದು ಮಂಜು ವಾರಿಯರ್ ಆರೋಪಿಸಿದ್ದರು.
ಮಲಯಾಳಂ (Malayalam) ನಿರ್ದೇಶಕ ಸನಲ್ ಕುಮಾರ್ ಶಶಿಧರನ್ (Sanal Kumar Sasidharan) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಮಂಜು ವಾರಿಯರ್ ಅವರ (Manju Warrier) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ವರದಿ ಆಗಿದೆ. ಪೊಲೀಸರು ವಶಕ್ಕೆ ಪಡೆಯುತ್ತಿರುವುದನ್ನು ಸನಲ್ ಅವರು ಫೇಸ್ಬುಕ್ನಲ್ಲಿ ಲೈವ್ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಮಂಜು ಅವರು ಸನಲ್ ವಿರುದ್ಧ ದೂರು ದಾಖಲು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಗುರುವಾರ (ಮೇ 5) ಸನಲ್ ಅವರು ತಿರುವನಂತಪುರಂನಲ್ಲಿದ್ದರು. ಅಲ್ಲಿಯೇ ಪೊಲೀಸರು ಸನಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ‘ಬ್ಲಾಕ್ಮೇಲ್ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಅಪಖ್ಯಾತಿ ತರುವ ಪ್ರಯತ್ನ ನಡೆದಿದೆ’ ಎಂದು ಮಂಜು ವಾರಿಯರ್ ಆರೋಪಿಸಿದ್ದರು. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ಸನಲ್ ಅವರು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಕೆಲವು ಚಿತ್ರಗಳು ಹಿಟ್ ಆಗಿವೆ. ‘ಕಯಟ್ಟಮ್’ ಸಿನಿಮಾದಲ್ಲಿ ಮಂಜು ವಾರಿಯರ್ ಜತೆ ಸನಲ್ ಕೆಲಸ ಮಾಡಿದ್ದರು. ಆ ಬಳಿಕ ಮಂಜು ವಾರಿಯರ್ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ. ‘ಮಂಜು ವಾರಿಯರ್ ಜೀವನ ಡೇಂಜರ್ನಲ್ಲಿ ಎಂದು ಸನಲ್ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು.
‘ತುಂಬಾ ಗಂಭೀರವಾದ ವಿಚಾರ. ಮಲಯಾಳಂನ ಖ್ಯಾತ ನಟಿ ಮಂಜು ವಾರಿಯರ್ ಅವರ ಜೀವಕ್ಕೆ ಅಪಾಯವಿದೆ. ಅವರು ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಶದಲ್ಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ನಾಲ್ಕು ದಿನಗಳಾಗಿವೆ. ಆದರೆ ಇದುವರೆಗೂ ಮಂಜು ವಾರಿಯರ್ ಆಗಲಿ ಅಥವಾ ಸಂಬಂಧಪಟ್ಟವರಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಂಜು ವಾರಿಯರ್ ಅವರ ಮೌನ ನನ್ನ ಅನುಮಾನವನ್ನು ಬಲಪಡಿಸುತ್ತದೆ’ ಎಂದು ಬರೆದುಕೊಂಡಿದ್ದರು.
‘ನಿನ್ನೆ ನಾನು wcc_cinemaಗೆ ಇಮೇಲ್ ಕಳುಹಿಸಿದ್ದೇನೆ. ಮಲಯಾಳಂ ಚಿತ್ರರಂಗದಲ್ಲಿ ಲಿಂಗ ಸಮಾನತೆಗಾಗಿ ಕೆಲಸ ಮಾಡುವ ಸಂಸ್ಥೆ ಇದು. ಅವರೂ ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ. ನಾನು ಈ ವಿಚಾರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದಾಗ ಅನೇಕ ಜನರು ಈ ಗಂಭೀರ ಸಮಸ್ಯೆಯನ್ನು ತಮಾಷೆಯಾಗಿ ನೋಡಲು ಪ್ರಯತ್ನಿಸಿದ್ದಾರೆ. ನಾನು ಎತ್ತಿರುವ ವಿಷಯ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದ ನಟಿಯ ಜೀವನ ಮತ್ತು ಸ್ವಾತಂತ್ರ್ಯದ ಬಗ್ಗೆ ಆಗಿದೆ. ಹೀಗಾಗಿ, ರಾಷ್ಟ್ರೀಯ ಮಾಧ್ಯಮಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ನಾನು ಕೋರುತ್ತೇನೆ’ ಎಂದು ಅವರು ಹೇಳಿದ್ದರು.
Published On - 3:15 pm, Thu, 5 May 22