Jr NTR Birthday: ಜ್ಯೂ.ಎನ್​ಟಿಆರ್​ ಜನ್ಮದಿನ; ಈ ನಟನ ಬಗ್ಗೆ ನಿಮಗೆ ಗೊತ್ತಿರದ ಐದು ಅಪರೂಪದ ವಿಚಾರಗಳು

ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಬರ್ತ್​ಡೇ ಪ್ರಯುಕ್ತ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಮೂಲಕ ಕೊರಟಾಲ ಶಿವ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ.

Important Highlight‌
Jr NTR Birthday: ಜ್ಯೂ.ಎನ್​ಟಿಆರ್​ ಜನ್ಮದಿನ; ಈ ನಟನ ಬಗ್ಗೆ ನಿಮಗೆ ಗೊತ್ತಿರದ ಐದು ಅಪರೂಪದ ವಿಚಾರಗಳು
ಜ್ಯೂ.ಎನ್​ಟಿಆರ್
Follow us
TV9 Digital Desk
| Updated By: Rajesh Duggumane

Updated on: May 20, 2022 | 6:00 AM

ಜ್ಯೂ.ಎನ್​ಟಿಆರ್ ಅವರು (JR. NTR) ಇಂದು (ಮೇ 20) 39ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಈ ನಟನಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಕಳೆದ ಎರಡು ವರ್ಷ ಕೊವಿಡ್ ಕಾರಣದಿಂದ ಜ್ಯೂ.ಎನ್​ಟಿಆರ್ ಬರ್ತ್​ಡೇ (JR. NTR Birthday) ಆಚರಿಸಿಕೊಂಡಿರಲಿಲ್ಲ. ಈ ಬಾರಿ ಕೊವಿಡ್ ಇಲ್ಲ. ಹೀಗಾಗಿ, ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಾಕಷ್ಟು ಕಡೆಗಳಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿವೆ.

ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಬರ್ತ್​ಡೇ ಪ್ರಯುಕ್ತ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಮೂಲಕ ಕೊರಟಾಲ ಶಿವ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ. ಈ ಚಿತ್ರಕ್ಕೆ ಯಾವ ಟೈಟಲ್ ಇಡಲಾಗುತ್ತದೆ ಅನ್ನೋದು ಸದ್ಯದ ಕುತೂಹಲ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದೆ. ಜ್ಯೂ.ಎನ್​ಟಿಆರ್​ ಬರ್ತ್​ಡೇ ಪ್ರಯುಕ್ತ ‘ಆರ್​ಆರ್​ಆರ್​’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಜ್ಯೂ.ಎನ್​ಟಿಆರ್ ಓರ್ವ ಅದ್ಭುತ ನಟ. ‘ಆರ್​ಆರ್​ಆರ್’ ಸಿನಿಮಾದಿಂದ ಅವರ ಖ್ಯಾತಿ ಹೆಚ್ಚಿದೆ. ತಾವು ಅದ್ಭುತ ನಟ ಎಂಬುದನ್ನು ಅವರು ಅನೇಕ ಬಾರಿ ಸಾಬೀತು ಮಾಡಿದ್ದಾರೆ. ಅವರ ಬಗ್ಗೆ ಗೊತ್ತಿಲ್ಲದ ಅನೇಕ ವಿಚಾರಗಳಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

  • ಕೂಚಿಪುಡಿ ಡ್ಯಾನ್ಸರ್​: ಕೂಚಿಪುಡಿ ನೃತ್ಯದ ಬಗ್ಗೆ ಎಲ್ಲರೂ ಕೇಳಿರುತ್ತೀರಿ. ಜ್ಯೂ.ಎನ್​ಟಿಆರ್​ ಈ ನೃತ್ಯವನ್ನು ಕಲಿತಿದ್ದಾರೆ. ಟಾಲಿವುಡ್​ನ ಓರ್ವ ಅದ್ಭುತ ಡ್ಯಾನ್ಸರ್​ ಅವರು ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ‘ಆರ್​ಆರ್​ಆರ್​’ ಸಿನಿಮಾದ ‘ಹಳ್ಳಿ ನಾಟು..’ ಹಾಡಿನಲ್ಲಿ ಅವರು ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ. ಅವರ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ.
  • ರಾಜಮೌಳಿ-ಜ್ಯೂ.ಎನ್​ಟಿಆರ್​ ಕಾಂಬಿನೇಷನ್​: 2001ರಲ್ಲಿ ತೆರೆಗೆ ಬಂದ ‘ಸ್ಟೂಡೆಂಟ್ ನಂಬರ್​ 1’ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ರಾಜಮೌಳಿ. ‘ಸಿಂಹಾದ್ರಿ’ ಸಿನಿಮಾದಲ್ಲಿ ರಾಜಮೌಳಿ ಹಾಗೂ ಜ್ಯೂ.ಎನ್​ಟಿಆರ್ ಒಟ್ಟಾಗಿ ಕೆಲಸ ಮಾಡಿದರು. ಇದು ಕೂಡ ಹಿಟ್ ಆಯಿತು. ಇತ್ತೀಚೆಗೆ ತೆರೆಗೆ ಬಂದ ‘ಆರ್​ಆರ್​ಆರ್’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಈ ಸಿನಿಮಾಗೆ ರಾಜಮೌಳಿ ನಿರ್ದೇಶನ ಇದೆ.
  • ಆಡಿಯೋ ರಿಲೀಸ್​ಗೆ 10 ಲಕ್ಷ ಮಂದಿ: ಜ್ಯೂ.ಎನ್​ಟಿಆರ್​ ನಟನೆಯ ‘ಆಂಧ್ರವಾಲಾ’ ಚಿತ್ರ 2004ರಲ್ಲಿ ತೆರೆಗೆ ಬಂತು. ಈ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ 10 ಲಕ್ಷ ಜನರು ಸೇರಿದ್ದರು. ಭಾರತೀಯ ರೈಲ್ವೇ ಈ ಕಾರ್ಯಕ್ರಮಕ್ಕೆ ಹತ್ತು ವಿಶೇಷ ರೈಲುಗಳನ್ನು ಬಿಟ್ಟಿತ್ತು. ಇದು ಒಂದು ವಿಶಿಷ್ಠ ದಾಖಲೆ ಆಗಿ ಉಳಿದುಕೊಂಡಿದೆ.
  • ಲಕ್ಕಿ ಸಂಖ್ಯೆ: ಜ್ಯೂ.ಎನ್​ಟಿಆರ್​ ಅವರ ಲಕ್ಕಿ ಸಂಖ್ಯೆ 9. ಅವರ ಬೈಕ್​, ಕಾರ್​ ಹಾಗೂ ಇತರ ವಾಹನಗಳ ನಂಬರ್​ ಪ್ಲೇಟ್​ಗೆ ಇದೇ ಸಂಖ್ಯೆ ಇದೆ ಅನ್ನೋದು ವಿಶೇಷ.
  • ಕನ್ನಡದ ಬಗ್ಗೆ ಗೌರವ: ಜ್ಯೂ.ಎನ್​ಟಿಆರ್ ಅವರಿಗೆ ಕನ್ನಡದ ಬಗ್ಗೆ ವಿಶೇಷ ಗೌರವ ಇದೆ. ಅವರು ಸಮಯ ಸಿಕ್ಕಾಗಲೆಲ್ಲ ಕನ್ನಡದಲ್ಲಿ ಮಾತನಾಡುತ್ತಾರೆ. ಈ ಕಾರಣಕ್ಕೆ ಅವರಿಗೆ ಕರ್ನಾಟಕದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು