ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ತು ದೊಡ್ಡ ಬೆಂಬಲ; ರಕ್ಷಿತ್ ಫ್ಯಾನ್ಸ್​ಗೆ ಗುಡ್​ ನ್ಯೂಸ್

| Updated By: Rajesh Duggumane

Updated on: May 09, 2022 | 3:07 PM

ರಕ್ಷಿತ್ ಶೆಟ್ಟಿ ಸದಾ ಹೊಸಹೊಸ ಪ್ರಯತ್ನದ ಮೂಲಕ ಗಮನ ಸೆಳೆಯುತ್ತಾರೆ. ಅವರು ವೃತ್ತಿ ಬದುಕಿನ ಪ್ರತಿ ಹಂತದಲ್ಲೂ ಹೊಸಹೊಸ ಸಿನಿಮಾಗಳನ್ನು ನೀಡುತ್ತಲೇ ಬಂದವರು. ಈಗ ‘777 ಚಾರ್ಲಿ’ ಸಿನಿಮಾ ಮೂಲಕ ಹೊಸ ರೀತಿಯ ಕಥೆ ಹೇಳಲು ಬರುತ್ತಿದ್ದಾರೆ.

ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ತು ದೊಡ್ಡ ಬೆಂಬಲ; ರಕ್ಷಿತ್ ಫ್ಯಾನ್ಸ್​ಗೆ ಗುಡ್​ ನ್ಯೂಸ್
ರಕ್ಷಿತ್
Follow us on

ರಕ್ಷಿತ್‌ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ (777 Charlie) ತೆರೆಗೆ ಬರಲು ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಈ ಸಿನಿಮಾ ಕಣ್ತುಂಬಿಕೊಳ್ಳೋಕೆ ಶ್ವಾನ ಪ್ರಿಯರು ಹಾಗೂ ರಕ್ಷಿತ್ ಶೆಟ್ಟಿ (Rakshit Shetty) ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಪರಭಾಷೆಯಲ್ಲಿ ಸಿನಿಮಾ ರಿಲೀಸ್ ಮಾಡುವಾಗ ಒಳ್ಳೆಯ ವಿತರಕರು ಸಿಕ್ಕರೆ ಚಿತ್ರಕ್ಕೆ ಹೆಚ್ಚು ಮೈಲೇಜ್ ಸಿಗುತ್ತದೆ. ಈಗ ‘777 ಚಾರ್ಲಿ’ ಸಿನಿಮಾಗೆ ಹಿಂದಿಯಲ್ಲಿ ಉತ್ತಮ ಬೆಂಬಲ ಸಿಕ್ಕಿದೆ. ಇದು ಸಿನಿಮಾ ತಂಡದ ಖುಷಿಯನ್ನು ಹೆಚ್ಚಿಸಿದೆ.

ರಕ್ಷಿತ್ ಶೆಟ್ಟಿ ಸದಾ ಹೊಸಹೊಸ ಪ್ರಯತ್ನದ ಮೂಲಕ ಗಮನ ಸೆಳೆಯುತ್ತಾರೆ. ಅವರು ವೃತ್ತಿ ಬದುಕಿನ ಪ್ರತಿ ಹಂತದಲ್ಲೂ ಹೊಸಹೊಸ ಸಿನಿಮಾಗಳನ್ನು ನೀಡುತ್ತಲೇ ಬಂದವರು. ಈಗ ‘777 ಚಾರ್ಲಿ’ ಸಿನಿಮಾ ಮೂಲಕ ಹೊಸ ರೀತಿಯ ಕಥೆ ಹೇಳಲು ಬರುತ್ತಿದ್ದಾರೆ. ಈ ಸಿನಿಮಾದಲ್ಲಿ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ.

ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರ ಈಗಾಗಲೇ ಟೀಸರ್‌ ಮೂಲಕ ಗಮನ ಸೆಳೆದಿದೆ. ಪರಭಾಷೆಯ ಸ್ಟಾರ್‌ ನಟರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದು, ಸಿನಿಮಾವನ್ನು ಅರ್ಪಿಸಲು ಮುಂದೆ ಬಂದಿದ್ದಾರೆ. ತೆಲುಗಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲಯಾಳಂನಲ್ಲಿ ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ. ಅದೇ ರೀತಿ ಹಿಂದಿಯಲ್ಲಿ ಖ್ಯಾತ ಸಂಸ್ಥೆ ಯುಎಫ್‌ಒ (UFO) ವಿತರಣೆ ಮಾಡಲಿದೆ.

ಇದನ್ನೂ ಓದಿ
‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?
ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದಿಂದ ಹೊಸ ಅಪ್​ಡೇಟ್​; ಇದು ಫ್ಯಾನ್ಸ್​ ಖುಷಿಪಡೋ ವಿಚಾರ
777 Charlie: ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡೆಯಿಂದ ಹೊಸ ಅಪ್​ಡೇಟ್​
‘777 ಚಾರ್ಲಿ’ ಬಗ್ಗೆ ಹೊಸ ಅಪ್​ಡೇಟ್​; ಡಿಸೆಂಬರ್​ 31ಕ್ಕೆ ಸಿನಿಮಾ ರಿಲೀಸ್​ ಆಗಲ್ಲ ಎಂದ ರಕ್ಷಿತ್ ಶೆಟ್ಟಿ

ಶ್ವಾನದ ಕಥೆ ಸಿನಿಮಾದ ಹೈಲೈಟ್​. ಚಿತ್ರದ ಸಾಂಗ್ ಹಾಗೂ ಟೀಸರ್ ಈಗಾಗಲೇ ಗಮನ ಸೆಳೆದಿದೆ. ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ‘ಪರಂವಃ ಸ್ಟುಡಿಯೋಸ್’ ಅಡಿಯಲ್ಲಿ ಸಿನಿಮಾವನ್ನು ನಿರ್ಮಿಸಿದ್ದಾರೆ. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ.

ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ಬರೆದಿದ್ದಾರೆ. ಹಿಂದಿಯಲ್ಲಿ ಹಾಡುಗಳಿಗೆ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ಒದಗಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.