Chethana Raj: ವೈದ್ಯರ ನಿರ್ಲಕ್ಷ್ಯದಿಂದಲೇ ಚೇತನಾ ರಾಜ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ ನಟಿಯ ತಂದೆ; ಯುಡಿಆರ್ ಪ್ರತಿ TV9​ಗೆ ಲಭ್ಯ

Chethana Raj Death: ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ನಟಿ ಚೇತನಾ ರಾಜ್​ ಸಾವಿನ ಪ್ರಕರಣದ ತನಿಖೆ ನಡೆಸಲಿದ್ದಾರೆ. ಎಫ್ಎಸ್ಎಲ್ ರಿಪೋರ್ಟ್, ಮರಣೋತ್ತರ ಪರೀಕ್ಷಾ ವರದಿ ಹಾಗೂ ವೈದ್ಯರ ಕಮಿಟಿ ನೀಡುವ ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಘಟನೆ ಸಂಬಂಧದ ಯುಡಿಆರ್ ಪ್ರತಿ ಟಿವಿನೈನ್​ಗೆ ಲಭ್ಯವಾಗಿದೆ.

Important Highlight‌
Chethana Raj: ವೈದ್ಯರ ನಿರ್ಲಕ್ಷ್ಯದಿಂದಲೇ ಚೇತನಾ ರಾಜ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ ನಟಿಯ ತಂದೆ; ಯುಡಿಆರ್ ಪ್ರತಿ TV9​ಗೆ ಲಭ್ಯ
ಕಿರುತೆರೆ ನಟಿ ಚೇತನಾ ರಾಜ್
Follow us
TV9 Digital Desk
| Updated By: shivaprasad.hs

Updated on:May 18, 2022 | 7:13 PM

ಬೆಂಗಳೂರು: ಯುವನಟಿ ಚೇತನಾ ರಾಜ್​​ (Chethana Raj) ಮೃತಪಟ್ಟಿರುವ ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಯುಡಿಆರ್ ಪ್ರತಿ ಟಿವಿ9​ಗೆ ಲಭ್ಯವಾಗಿದೆ. ಚೇತನಾ ಪರ ದೂರು ನೀಡಿರುವ ಅವರ ತಂದೆ ವರದರಾಜು, ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗಳು ಚೇತನಾ ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ. ಡಾ.ಸಾಹೇಬ್ ಗೌಡ ಶೆಟ್ಟಿ, ಡಾ.ಶೆಟ್ಟಿ ಕಾಸ್ಮಿಟಿಕ್ ಸೆಂಟರ್ ಮೇಲೆ ಗಂಭೀರ ಆರೋಪ ಮಾಡಲಾಗಿದ್ದು, ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಸಿಆರ್ ಪಿಸಿ 174(C) ಅಡಿ UDR (Unnatural Death Report) ದಾಖಲಾಗಿದೆ. ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಲಿದ್ದು, ಆರೋಪ ಸಾಬೀತಾದಲ್ಲಿ ಐಪಿಎಸ್ ಸೆಕ್ಷನ್ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಎಫ್ಎಸ್ಎಲ್ ರಿಪೋರ್ಟ್, ಮರಣೋತ್ತರ ಪರೀಕ್ಷಾ ವರದಿ ಹಾಗೂ ವೈದ್ಯರ ಕಮಿಟಿ ನೀಡುವ ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಚೇತನಾ ಮೃತದೇಹ ಶ್ವಾಸಕೋಶ ಸೇರಿದಂತೆ ಕೆಲ ಅಂಗಾಂಗಗಳ ಮಾದರಿ ಸಂಗ್ರಹಿಸಲಾಗಿದ್ದು, ಅದರ ಮಾದರಿಯನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಬ್ಬಂದಿ ಎಫ್ಎಸ್​ಎಲ್​ಗೆ ರವಾನೆ ಮಾಡಲಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್ಎಸ್​ಎಲ್ ರಿಪೋರ್ಟ್ ಈ ಪ್ರಕರಣದಲ್ಲಿ ಮಹತ್ವವಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಚೇತನಾ ಸಾವಿಗೆ ನಿಖರ ಕಾರಣವಾಗಿರುವ ಸಾಕ್ಷಿ ಲಭ್ಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ಇದನ್ನೂ ಓದಿ
Image
ರೋಷನ್​ ಕುಟುಂಬಕ್ಕೆ ಮತ್ತಷ್ಟು ಆಪ್ತರಾದ ಸಬಾ ಆಜಾದ್; ಹೃತಿಕ್ ಮಕ್ಕಳೊಂದಿಗೆ ಫೋಟೋಗೆ ಭರ್ಜರಿ ಪೋಸ್
Image
Rakhi Sawant: ತನಗಿಂತ 6 ವರ್ಷ ಕಿರಿಯ ಹುಡುಗನ ಜತೆ ಪ್ರೀತಿಯಲ್ಲಿ ಬಿದ್ದ ರಾಖಿ; ಮೈಸೂರು ಮೂಲದ ಹುಡುಗನ ಬಗ್ಗೆ ನಟಿ ಹೇಳಿದ್ದೇನು?
Image
ಫ್ಯಾಟ್​ ಸರ್ಜರಿ ವೈಫಲ್ಯದಿಂದ ನಟಿ ಚೇತನಾ ರಾಜ್​ ನಿಧನ: ಪುತ್ರಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಪ್ಪ-ಅಮ್ಮ
Image
Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಚೇತನಾರ ಪೋಷಕರು ನೀಡಿದ ದೂರಿನ ಪ್ರಕಾರ, ನಟಿ ಮೇ 16 ರಂದು ಫ್ಯಾಟ್​​ ಸರ್ಜರಿಗೆ ಒಳಗಾಗಿದ್ದರು. ಸ್ವಲ್ಪ ಸಮಯದ ನಂತರ ಅವರು ಉಸಿರಾಟದ ತೊಂದರೆ ಅನುಭವಿಸಿದ ಕಾರಣ ಕೂಡಲೇ ಅವರನ್ನು ಮಂಜುನಾಥ ನಗರದ ಕಾಡೆ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ದೂರಿನ ಆಧಾರದ ಮೇಲೆ ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ‘ಅಸ್ವಾಭಾವಿಕ ಮರಣ ವರದಿ’ಯ ಅಡಿಯಲ್ಲಿ (ಯುಡಿಆರ್) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ವಿನಾಯಕ ಪಾಟೀಲ್ ಮಾಹಿತಿ ನೀಡಿದ್ದರು. ಚೇತನಾ ಸರ್ಜರಿಗೆ ಒಳಗಾದ ಬಗ್ಗೆ ಪೋಷಕರಿಗೆ ಮಾಹಿತಿ ಇರಲಿಲ್ಲ. ನಟಿ ಸ್ನೇಹಿತರೊಂದಿಗೆ ಸರ್ಜರಿಗೆ ತೆರಳಿದ್ದರು ಎಂದು ವರದಿಯಾಗಿದೆ.

Fat ಸರ್ಜರಿ ಎಷ್ಟು ಅಪಾಯಕಾರಿ? | ಈ ಕುರಿತು ಮಾಹಿತಿ ನೀಡಿದ್ದಾರೆ ಡಾ.ಎಂ ರಮೇಶ್​:

ಇದನ್ನೂ ಓದಿ: ಫ್ಯಾಟ್​ ಸರ್ಜರಿ ವೈಫಲ್ಯದಿಂದ ನಟಿ ಚೇತನಾ ರಾಜ್​ ನಿಧನ: ಪುತ್ರಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಪ್ಪ-ಅಮ್ಮ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:11 pm, Wed, 18 May 22

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು