Horoscope 23 August: ದಿನಭವಿಷ್ಯ, ಈ ರಾಶಿಯವರಿಗೆ ಸಾಮಾಜಿಕ ಕಾರ್ಯಗಳು ಪ್ರಶಂಸೆಯನ್ನು ತಂದುಕೊಡುವುದು

| Updated By: ವಿವೇಕ ಬಿರಾದಾರ

Updated on: Aug 23, 2023 | 12:10 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ಆಗಸ್ಟ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 23 August: ದಿನಭವಿಷ್ಯ, ಈ ರಾಶಿಯವರಿಗೆ ಸಾಮಾಜಿಕ ಕಾರ್ಯಗಳು ಪ್ರಶಂಸೆಯನ್ನು ತಂದುಕೊಡುವುದು
ಜ್ಯೋತಿಷ್ಯ
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:01 ರಿಂದ 12:35ರ ವರೆಗೆ.

ಮೇಷ ರಾಶಿ: ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು. ಅಂದುಕೊಂಡ ಕಾರ್ಯವು ಪೂರ್ಣವಾಗಿ ಆಗುವುದಿಲ್ಲ. ಮಾತುಗಳನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಸಂಪತ್ತಿನ‌ ನಿರ್ವಹಣೆಯನ್ನು ಮಾಡಲು ನೀವು ಸಮರ್ಥರಾಗುವಿರಿ. ಅಪರಿಚಿತರು ನಿಮ್ಮನ್ನು ಭೇಟಿಯಾಗಲಿದ್ದಾರೆ. ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಕೃಷಿಯಲ್ಲಿ ನಿಮಗೆ ಸ್ವಲ್ಪ ಆಸಕ್ತಿಯು ಬರುವುದು. ವಿದ್ಯಾರ್ಥಿಗಳ ಯಶಸ್ಸಿನಲ್ಲಿ ನಿಮ್ಮ ಪಾಲೂ ಇರುವುದು. ನಿಮ್ಮನ್ನು ನೇರವಾಗಿ ಕೇಳಿದ್ದಕ್ಕೆ ಮಾತ್ರ ಉತ್ತರಿಸುವುದು ಒಳ್ಳೆಯದು.

ವೃಷಭ ರಾಶಿ: ಬರುವ ಅಲ್ಪ ಆದಾಯವನ್ನು ನೀವು ರಕ್ಷಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬಕ್ಕೆ ನಿಮ್ಮ ಮೇಲೆ ಪ್ರೀತಿಯು ಅಧಿಕವಾಗಲಿದೆ. ಓಡಾಟದಿಂದ ಆಯಾಸಗೊಳ್ಳುವಿರಿ. ಬಂಧುಗಳಿಂದ ಸಲ್ಲದ ಮಾತುಗಳು ಕೇಳಿಬರಬಹುದು. ಆಸ್ತಿಯ ವಿಚಾರದಲ್ಲಿ ವಾದಗಳು ಆಗಬಹುದು. ಆಲಸ್ಯದಿಂದ ನಿಮ್ಮ ಎಲ್ಲ ಕೆಲಸಗಳೂ ಹಾಗೆಯೇ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಇಷ್ಟಪಡದೇ ಇರುವುದು ಉತ್ತಮ. ಅನಂತರ ಇದರಿಂದ ದುಃಖಿಸಬೇಕಾಗಬಹುದು. ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ಆರೋಗ್ಯವು ಹದ ತಪ್ಪುವ ಸಾಧ್ಯತೆ ಇದೆ.

ಮಿಥುನ ರಾಶಿ: ನಿಮ್ಮ ಕುಶಲ ಕಾರ್ಯಗಳು ಇತರರಿಗೂ ಗೊತ್ತಾದೀತು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ನಿಮ್ಮ ಕಡೆಯಿಂದ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮನ್ನು ಹಾಸ್ಯವಾಗಿ ಯಾರದರೂ ಕಾಣಬಹುದು. ನಿಮ್ಮ ಬಗ್ಗೆ ನಿಕವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರಿಗೆ ಗೊತ್ತಾಗುವುದು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಸಂಗಾತಿಯ ಜೊತೆ ಸಂತೋಷದಿಂದ ಇರುವಿರಿ. ಸಂಪತ್ತಿನ ಉಳಿತಾಯದ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ನಿಮಗೆ ಸಿಗದೇ ಇರುವ ಜವಾಬ್ದಾರಿಯ ಬಗ್ಗೆ ಸಿಮಗೆ ಸ್ವಲ್ಪ ಅಸಮಾಧನ ಇರಬಹುದು. ಮುಚ್ಚು ಮರೆ ಇಲ್ಲದೇ ಎಲ್ಲವನ್ನೂ ಆಪ್ತರ ಜೊತೆ ಹಂಚಿಕೊಳ್ಳುವ ಸಂಭವವಿದೆ.

ಕರ್ಕ ರಾಶಿ: ವಿದ್ಯಾರ್ಥಿಗಳ ಪ್ರಗತಿಯ ವಿಷಯವು ಮಂದಗತಿಯಲ್ಲಿಯೇ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕಷ್ಟವಾದೀತು. ಆದಾಯ ಮೂಲದ ಬಗ್ಗೆ ನಿಮಗೇ ಸಂತೃಪ್ತಿ ಇರದು. ನಿಮ್ಮದೇ ಸರಿ ಎಂಬ ಅಹಂ ಭಾವವು ಇನ್ನೊಬ್ಬರ ಮನಸ್ಸಿನ ಮೇಲೆ ಪರಿಣಾಮವನ್ನು ಉಂಟುಮಾಡೀತು. ನಿಮ್ಮ ಬಳಿ‌ ಕೇಳಿದರಷ್ಟೇ ಸಲಹೆಯನ್ನು ಕೊಡಿ.‌ ತಂದೆಯ ಕೋಪಕ್ಕೆ ನೀವು ಗುರಿಯಾಗಬಹುದು. ಕಛೇರಿಯಲ್ಲಿ ನಿಮಗೆ ಆಗದವರ ಸಂಗವು ನಿರ್ಮಾಣವಾಗಲಿದೆ. ಶುಭ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಸರ್ಕಾರದ ಕೆಲಸವು ಸ್ವಲ್ಪ ವೇಗವನ್ನು ಪಡೆದುಕೊಳ್ಳುವುದು. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳಬೇಕಾದೀತು.

ಸಿಂಹ ರಾಶಿ: ಸಾಲದಿಂದ ನೀವು ತಲೆ ಮರೆಸಿಕೊಳ್ಳುವ ಸ್ಥಿತಿಯೂ ಬರಬಹುದು.‌ ಅದಕ್ಕೆ ಬೇಕಾದ ಸಿದ್ಧತೆಯನ್ನು ಇಂದೇ ಮಾಡಿಕೊಳ್ಳುವುದು ಉತ್ತಮ. ದಾಂಪತ್ಯ ಜೀವನವು ಅನೇಕ‌ ತಿರುವಗಳನ್ನು ಪಡೆದುಕೊಂಡು ಮುಂದೆ ಸಾಗುವುದು. ವೃತ್ತಿಯ ಸ್ಥಳವು ನಿಮಗೆ ರೋಚಕ ಅನುಭವವನ್ನು ಕೊಡುವುದು. ಅನ್ನಿಸಿದ್ದನ್ನು ಮಾಡಲೂ ನಿಮಗೆ ಸ್ವಾತಂತ್ರ್ಯವು ಸಿಗದೇ ಹೋಗಬಹುದು. ಹಿರಿಯರನ್ನು ಗೌರವಿಸಿ ಆಶೀರ್ವಾದವನ್ನು ಪಡೆದುಕೊಳ್ಳಿ. ಪ್ರೇಮಪ್ರಕರಣವು ನಿಮಗೆ ಉಗುಳಲೂ ನುಂಗಲೂ ಆಗದ ತುತ್ತಾಗುವುದು. ಅದನ್ನು ನೀವು ಜಾಣ್ಮೆಯಿಂದ ಸರಿ ಮಾಡಿಕೊಳ್ಳಿ.

ಕನ್ಯಾ ರಾಶಿ: ಮನಸ್ಸಿನಲ್ಲಿ ಹತಾಶೆ, ಗೊಂದಲ, ಸಿಟ್ಟು ಎಲ್ಲವೂ ಕೂಡಿಕೊಂಡು ಯಾವುದನ್ನೂ ಮಾಡಲಾಗದ ಸ್ಥಿತಿಯು ನಿಮ್ಮದಾಗಲಿದೆ. ಕೈ ಹಾಕಿದ ಕೆಲಸವು ಕೈ ಸುಡುವುದು. ಯಾರ ಮಾತನ್ನೂ ಕೇಳುವ ವ್ಯವಧಾನವೂ ನಿಮ್ಮಲ್ಲಿ ಇಲ್ಲವಾಗುವುದು. ಎಲ್ಲರ ಮಾತಿಗೂ ನಿಮ್ಮ ಕೋಪವನ್ನು ಪ್ರದರ್ಶಿಸುವಿರಿ. ನಿಮ್ಮ ಎಲ್ಲ ನಿರ್ಧಾರಗಳೂ ನಿಮಗೇ ಕೆಡುಕುಂಟುಮಾಡುವಂತೆ ತೋರುವುದು. ನಿಮ್ಮದಲ್ಲದ ಕೆಲಸಕ್ಕೂ ನೀವೇ ಜವಾಬ್ದಾರರಾಗಬೇಕಾಗಬಹುದು. ನಿಮಗೆ ದೈವದ ಮೊರೆ ಬಿಟ್ಟರೆ ಮತ್ತಾವುದೂ ಕಾಣಸಿಗದು. ಸುಮ್ಮನೇ ಕುಳಿತರೇ ಹತ್ತಾರು ಆಲೋಚನೆಗಳು ಇನ್ನಷ್ಟು ನಿಮ್ಮ ಮನಸ್ಸನ್ನು ದುರ್ಬಲಗೊಳಿಸುವುದು.

ತುಲಾ ರಾಶಿ: ಸಂಗಾತಿಗೆ ನಿಮ್ಮ ಕಾರಣದಿಂದ ಉತ್ತಮ ಕೆಲಸವು ಸಿಗಲಿದೆ. ಕಛೇರಿಯಲ್ಲಿ ನೀವು ಪ್ರಶಂಸೆಗೆ ಪಾತ್ರರಾಗುವಿರಿ. ಕೆಟ್ಟ ಆಲೋಚನೆಗಳು ಬಂದರೂ ಅದನ್ನು ದೂರ ಮಾಡಿಕೊಳ್ಳುವ ತಂತ್ರವನ್ನು ನೀವು ತಿಲಕಿದಿರುವಿರಿ. ಹೂಡಿಕೆಯ ವಿಚಾರದಲ್ಲಿ ನೀವು ಹಿಂದುಳಿಯಬೇಕಾಗಬಹುದು. ದೂರದಲ್ಲಿ ಇರುವ ಮಕ್ಕಳಿಗೆ ಮನೆಯ ನೆನಪಾಗಬಹುದು. ಆಲಂಕಾರಿಕ ಉದ್ಯಮವನ್ನು ಮಾಡಿದರೆ ನಿಮಗೆ ಶ್ರೇಯಸ್ಸು ಆದಾಯ ಎಲ್ಲವೂ ಸಿಗಲಿದೆ. ಮನೆಯ ಕೆಲಸವು ಮುಗಿಯದಷ್ಟು ಇರಲಿದೆ‌. ನಿಮ್ಮನ್ನು ಯಶಸ್ಸನ್ನು ಕಂಡು ಅದನ್ನು ನಿಯಂತ್ರಿಸಲು ಸಹೋದ್ಯೋಗಿಗಳು ಮೇಲಧಿಕಾರಿಗೆ ದೂರನ್ನು ಕೊಡಬಹುದು. ಸ್ನೇಹಿತರ ಜೊತೆ ಹರಟೆಯಲ್ಲಿ ಕಾಲಕಳೆಯುವಿರಿ.

ವೃಶ್ಚಿಕ ರಾಶಿ: ವಾಸಸ್ಥಳದ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರಬಹುದು. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಮಾತೇ ನಡೆಯುತ್ತದೆ ಎಂದು ಇಟ್ಟುಕೊಳ್ಳಬಾರದು. ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಮಾಡಿಕೊಳ್ಳಿ. ವೃತ್ತಿಯ ಕೆಲಸಗಳ ನಡುವೆ ಮನೆಗೆಲಸವು ನಿಮಗೆ ಕಷ್ಟವಾದೀತು‌. ಪರಿಶ್ರಮವಿಲ್ಲದೇ ಆದಾಯವನ್ನು ಪಡೆದುಕೊಳ್ಳಲು ಬಯಸುವಿರಿ. ಮೇಲಧಿಕಾರಿಗಳ ಹೊಸ ಯೋಜನೆಯನ್ನು ನಿರ್ವಹಿಸುವುದು ನಿಮ್ಮ ತಲೆಗೆ ಬರಬಹುದು. ಸ್ತ್ರೀಯರ ಒಡನಾಟ ಅತಿಯಾಗಿ ಬೇಡ. ನೇರ ನುಡಿಗಳನ್ನು ನೀವು ಸಹಿಸುವುದು ಕಷ್ಟವಾದೀತು.

ಧನು ರಾಶಿ: ಸಹೋದರಿಯ ಸಹಾಯವು ನಿಮಗೆ ಸಿಗಲಿದ್ದು ನಿಮ್ಮ‌ ಜವಾಬ್ದಾರಿಯೂ ಹೆಚ್ಚಾಗಲಿದೆ. ಭೂಮಿಯ ವ್ಯವಹಾರವು ಸುಗಮವಾಗಿ ಸಾಗುವುದು. ಆರ್ಥಿಕ ಸಮಸ್ಯೆಯನ್ನು ನೀವು ದೂರ ಮಾಡಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣವನ್ನು ಹೊಂದಿಸುವಿರಿ. ನಿಮ್ಮ ಮಾತಿನಿಂದ ಸಂಗಾತಿಯು ಕೋಪಗೊಳ್ಳಬಹುದು. ಬಂಧುಗಳು ನಿಮ್ಮಿಂದ ಅರ್ಥಿಕ ಸಹಾಯವನ್ನು ಬಯಸಿದ್ದರೂ ಕೇಳಲು ಹಿಂದೇಟು ಹಾಕುವರು. ಕೃಷಿಯಲ್ಲಿ ನಿಮಗೆ ಆಸಕ್ತಿಯು ಹೋಗಬಹುದು. ಮಕ್ಕಳ ಜೊತೆಗೆ ಕಳೆಯುವ ನಿಮ್ಮ ಸಮಯವು ಬಹಳ ಆಪ್ತವಾಗಿರುವುದು. ಶುಭವಾರ್ತೆಯ ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು.

ಮಕರ ರಾಶಿ: ಮಾನಸಿಕ ಕಿರಿಕಿರಿಯನ್ನು ನೀವು ದೂರ ಮಾಡಿಕೊಳ್ಳಿ. ಬಹಳ ಜಾಣ್ಮೆಯಿಂದ ಕಾರ್ಯವನ್ನು ಸಾಧಿಸುವಿರಿ. ನಿರೀಕ್ಷಿತ ಸ್ಥಾನವನ್ನು ನೀವು ಪಡೆದುಕೊಳ್ಳುವಿರಿ. ಸಹೋದ್ಯೋಗಿಗಳ ಸಹಕಾರವು ನಿಮಗೆ ಸಿಗುವುದು. ನಿಮ್ಮ ಸಾಮರ್ಥ್ಯವು ಇತರರಿಗೂ ತಿಳಿಯವಹದು. ದೇವತಾರಾಧನೆಗೆ ತಿಳಿದವರ ಜೊತೆ ಚರ್ಚಿಸಿ. ಹಣವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ಬೇಡದ ಮಾತುಕತೆಯಲ್ಲಿ ಇಂದಿನ‌ ದಿನ‌ವು ಕಳೆಯುವುದು.‌ ನಿಮ್ಮದೇ ವಸ್ತುವಾದರೂ ನಿಮಗೆ ಬೇಕಾದ ಸಮಯಕ್ಕೆ ಲಭ್ಯವಾಗದು ಕಛೇರಿಯಲ್ಲಿ ಒತ್ತಡವಿರಲಿದ್ದು ಎಲ್ಲರನ್ನೂ ನೀವು ದೂರುವಿರಿ. ನಿಮ್ಮ ಸಂತೋಷಕ್ಕಾಗಿ ಇನ್ನೊಬ್ಬರ ಸಂತೋಷವನ್ನು ಹರಣ ಮಾಡುವಿರಿ.

ಕುಂಭ ರಾಶಿ: ನಿಮ್ಮವರು ನಿಮ್ಮ ಕೆಲಸವನ್ನು ಸರಿಯಾಗಿ ಮಾಡಲು ಬಿಡರು. ನಿಮ್ಮ ಮಾತು ಇನ್ನೊಬ್ಬರಿಗೆ ಬೇಸರವನ್ನು ತರಿಸೀತು. ಮಕ್ಕಳ ವಿಚಾರದಲ್ಲಿ ನೀವು ಸಹಕಾರ ಕೊಡುವಿರಿ. ವಸ್ತುಗಳ ಖರೀದಿಯಲ್ಲಿ ಜಾಗರೂಕತೆ ಇರಲಿ. ಪರೀಕ್ಷಿಸಿ ಖರೀದಿಸುವುದು ಉತ್ತಮ. ಹೊಸ ಉದ್ಯೋಗಕ್ಕೆ ನಿಮಗೆ ಅವಕಾಶವು ಪ್ರಾಪ್ತವಾಗಬಹುದು. ಉದ್ಯೋಗಕ್ಕೆ ಸೇರುವ ತಯಾರಿಯಲ್ಲಿ ನೀವು ಇರಬೇಕಾದೀತು. ಏಕಾಂತಕ್ಕೆ ನೀವು ಹೆಚ್ಚಿನ ಒತ್ತನ್ನು ಕೊಡುವಿರಿ. ಸಹೋದರರ ನಡುಯವೆ ವಾಗ್ವಾದವು ಆಗಬಹುದು. ವಿದ್ಯಾಭ್ಯಾಸವು ನಿಮಗೆ ಸಾಕು ಎನಿಸಬಹುದು. ಯಾರದೋ ಒತ್ತಾಯಕ್ಕೆ ನೀವು ಇಷ್ಟವಿಲ್ಲದ ಕೆಲಸಕ್ಕೆ ಸೇರಿಕೊಳ್ಳುವಿರಿ. ಶನಿಯ ಪ್ರಭಾವವು ನಿಮ್ಮ ಮೇಲೆ ಅತಿಯಾದ ಪರಿಣಾಮವನ್ನು ಬೀರುವುದು.

ಮೀನ ರಾಶಿ: ಬರಬೇಕಾದ ಹಣವನ್ನು ನೀವು ಪಡೆದುಕೊಳ್ಳುವಿರಿ. ನಿಮ್ಮ ಇಂದಿನ ಕೆಲಸಗಳು ಅಡೆತಡೆ ಇಲ್ಲದೇ ಸಾಗುವುದು. ವಾಹನ ಖರೀದಿಗೆ ಹಣವನ್ನು ಹೊಂದಿಸುವಿರಿ. ಅಪಘಾತ ಭೀತಿಯು ನಿಮ್ಮನ್ನು ಹೆಚ್ಚು ಕಾಡುವುದು. ನಿಮಗೆ ಸಂಬಂಧವಿಲ್ಲದೇ ಇರುವ ವಿಚಾರಕ್ಕೆ ಯೋಚಿಸುವಿರಿ. ನಿಮ್ಮ ಬುದ್ಧಿಯು ನಕಾರಾತ್ಮಕ ವಿಚಾರಗಳಿಗೆ ಹೆಚ್ಚು ಸ್ಪಂದಿಸುವುದು. ಸ್ನೇಹಕ್ಕೆ ನೀವು ಬೆಲೆಯನ್ನು ಕೊಡುವಿರಿ. ಬಂಧುಗಳ ಭೇಟಿಗೆ ದೂರಪ್ರಯಾಣವನ್ನು ಮಾಡಲಿದ್ದೀರಿ. ರಾಜಕೀಯ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ಮೇಲಧಿಕಾರಿಗಳ ಭೇಟಿಯಾಗವ ಸಾಧ್ಯತೆ ಇದೆ.

-ಲೋಹಿತಶರ್ಮಾ – 8762924271 (what’s app only)