ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಆಗಸ್ಟ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ರೇವತಿ, ಯೋಗ: ಅತಿಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 05: 23 ರಿಂದ 06:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 03:48 ರಿಂದ 05:23ರ ವರೆಗೆ.
ಇಂದು ಭಾನುವಾರ ಆಗಿದ್ದು, ಸಂಖ್ಯಾಶಾಸ್ತ್ರದ ಪ್ರಕಾರ ಈ ಕೆಳಗಿನ ದಿನಾಂಕದಂದು 02, 11, 20, 29, 04, 13, 22, 06, 15, 14, 07, 16, 09, 18, 27ಹುಟ್ಟಿದವರಿಗೆ ಇಂದು ಬಹಳ ಅನುಕೂಲವಾಗಿರಲಿದೆ. ಜೊತೆಗೆ ನಮ್ಮ ಜೀವನದಲ್ಲಿ ಬಣ್ಣ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ಹೌದು ಇಂದು(ಆ.6)ಬಿಳಿ, ನೀಲಿ, ಹಸಿರು ಬಣ್ಣಗಳ ಬಳಕೆಯಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಇಂದಿನ ದಿನ ಭವಿಷ್ಯವನ್ನ ಖ್ಯಾತ ಜ್ಯೋತಿಷಿ ಪಂಡಿತ್ ದಿನೇಶ್ ಗುರೂಜಿ ಅವರಿಂದ ತಿಳಿದುಕೊಳ್ಳಿ.