ಬಳ್ಳಾರಿ: ಗೃಹ ಲಕ್ಷ್ಮಿ ಅರ್ಜಿ ಸಲ್ಲಿಕೆಗೆ 50 ರೂ. ಶುಲ್ಕ ಪಡೆದ ಆಪರೇಟರ್ ವಿರುದ್ಧ ಎಫ್‍ಐಆರ್
ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹ ಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ 50 ರೂ. ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಗಸ್ಟ್ 1 ರಂದು ಮಧ್ಯಾಹ್ನ 02 ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಬಳ್ಳಾರಿ, ಆಗಸ್ಟ್ 2: ಗೃಹ ಲಕ್ಷ್ಮಿ ಯೋಜನೆಯ (Gruha Lakshmi Scheme) ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪ್ರತಿ ಅರ್ಜಿದಾರರಿಂದ 50 ರೂ. ಹಣ ಪಡೆಯುತ್ತಿರುವುದು ಕಂಡುಬಂದಿದ್ದು, ಸಂಡೂರು ತಾಲೂಕಿನ ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಂಕಮನಾಳು ಗ್ರಾಮದ ಮಾರೆಮ್ಮ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು, ಉದ್ದೇಶ ಪೂರ್ವಕವಾಗಿ ಗೃಹ ಲಕ್ಷ್ಮಿ ಫಲಾನುಭವಿಗಳಿಂದ ಪ್ರತಿ ಅರ್ಜಿಗೆ 50 ರೂ. ಹಣ ಸ್ವೀಕರಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಗಸ್ಟ್ 1 ರಂದು ಮಧ್ಯಾಹ್ನ 02 ಕ್ಕೆ ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು.
ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳನಾಗಪ್ಪ, ಅಂಕಮನಾಳು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಬಿ ಕೊಟ್ರಪ್ಪ, ಚೋರನೂರು ಪಟ್ಟಣದ ಕಂದಾಯ ನಿರೀಕ್ಷಕ ಬಿ ವೀರೇಂದ್ರ ಕುಮಾರ ಅವರು ದಾಳಿ ನಡೆಸಿ ಅಕ್ರಮವನ್ನು ಪತ್ತೆ ಹಚ್ಚಿದ್ದರು.
ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಯಾವುದೇ ಶುಲ್ಕ ಪಡೆಯಬಾರದು ಎಂದು ಸರ್ಕಾರದ ಆದೇಶ ಇದ್ದರೂ ಹಣ ಸ್ವೀಕರಿಸಿ ಸರ್ಕಾರಕ್ಕೆ ನಂಬಿಕೆ ದ್ರೋಹಮಾಡಿ ಮೋಸ ಮಾಡಿರುತ್ತಾರೆ. ಹೀಗಾಗಿ ಇವರ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದೂರು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೈ ಶಾಸಕರಿಂದ ಬ್ಯಾನರ್ ಮೂಲಕ ಜಾಗೃತಿ
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ತುಂಬಲು ಅಲ್ಲಲ್ಲಿ ಶುಲ್ಕ ವಸೂಲಿ ಮುಂದುವರೆದಿದೆ. ಹೀಗಾಗಿ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಬ್ಯಾನರ್ ಅಳವಡಿಕೆ ಜಾಗೃತಿ ಮೂಡಿಸುತ್ತಿದ್ದಾರೆ. ಹಣ ಬೇಡಿಕೆಯ ಕುರಿತು ಸಾಕಷ್ಟು ಕಡೆಗಳಲ್ಲಿ ವಿಡಿಯೋ ವೈರಲ್ ಬೆನ್ನಲ್ಲೆ ಜಾಗೃತಿ ಅಭಿಯಾನ ಆರಂಬಿಸಿದ್ದು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಬ್ಯಾನರ್ ನಲ್ಲಿ ಮೊಬೈಲ್ ನಂಬರ್ ನೀಡಿ ನೇರವಾಗಿ ಕರೆ ಮಾಡಿ ದೂರು ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Gruha Lakshmi Scheme: ಗೃಹ ಲಕ್ಷ್ಮಿ ಯೋಜನೆ ನೋಂದಣಿಗೆ ಲಂಚ ಪಡೆಯುತ್ತಿರುವ ಬೆಂಗಳೂರು ಒನ್ ಸಿಬ್ಬಂದಿ
ಯಾರಾದರೂ ಹಣ ಕೇಳಿದ್ರೇ ನೇರವಾಗಿ ನನ್ನ ನಂಬರ್ ಗೆ ಕಾಲ್ ಮಾಡುವಂತೆ ಶಾಸಕರು ಬ್ಯಾನರ್ ಅಳವಡಿಕೆ ಮಾಡಿದ್ದು. ಹಣ ಕೇಳಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕ್ತೇವೆ. ಸೇವಾ ಕೇಂದ್ರ ಸೇರಿದಂತೆ ವಿವಿ ವಾರ್ಡ್ ಗಳಲ್ಲಿ ಸಿಬ್ಬಂದಿ ನಿಯೋಜನೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಾಗೃತಿ ಮೂಡಿಸುವ ಬ್ಯಾನರ್ ಅಳವಡಿಕೆ ಮಾಡಿರುವುದು ವಿಶೇಷವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ