ಬಳ್ಳಾರಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: 5 ಮನೆಗಳ್ಳತನ ಮಾಡಿದ ಕಳ್ಳರಿಬ್ಬರ ಬಂಧನ

ಮನೆಗಳ್ಳರಿಬ್ಬರನ್ನು ಪೊಲೀಸರು బంಧಿಸಿದ್ದು, ಅವರಿಂದ 3,15 ಲಕ್ಷ ರೂ. ಮೌಲ್ಯದ 250ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಐದು ಮನೆಗಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Important Highlight‌
ಬಳ್ಳಾರಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: 5 ಮನೆಗಳ್ಳತನ ಮಾಡಿದ ಕಳ್ಳರಿಬ್ಬರ ಬಂಧನ
ಬಂಧಿತರಿಂದ ವಶಕ್ಕೆ ಪಡೆದ ಚಿನ್ನಾಭರಣಗಳು
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 30, 2023 | 6:51 PM

ಬಳ್ಳಾರಿ, ಜುಲೈ 30: ಮನೆಗಳ್ಳರಿಬ್ಬರನ್ನು ಪೊಲೀಸರು బంಧಿಸಿದ್ದು (arrested) , ಅವರಿಂದ 3,15 ಲಕ್ಷ ರೂ. ಮೌಲ್ಯದ 250ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಐದು ಮನೆಗಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶ್ವಸಿಯಾಗಿದ್ದಾರೆ. ದುರ್ಗಾ ಎಂಬ ಮಹಿಳೆ ತಮ್ಮ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ಜುಲೈ 13ರಂದು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಾರ್ಯಾಚರಣೆ ಆರಂಭಿಸಿದ್ದ ಪೊಲೀಸರು ಮಹ್ಮದ್ ಸುಹೇಲ್ ಹಾಗೂ ಮಹ್ಮದ್ ಜುಬೇರ್ ಎನ್ನುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರ ಬಳಿ‌ ಮೋಟಾರ್ ಬೈಕ್, ಒಂದು ಮೊಬೈಲ್ ಸಿಕ್ಕಿದ್ದು. ಈ ಮನೆಗಳ್ಳತನ ಪ್ರಕರಣದ ತನಿಖೆಗಾಗಿ ಸಿರುಗುಪ್ಪ ಡಿವೈಎಸ್‌ಪಿ ವೆಂಕಟೇಶ್, ಬಳ್ಳಾರಿ ಗ್ರಾಮೀಣ ಇನ್‌ಸ್ಪೆಕ್ಟರ್ ಬಿ. ನಿರಂಜನ್ ನೇತೃತ್ವದಲ್ಲಿ ಹೆಡ್ ಕಾನ್‌ಸ್ಟೆಬಲ್‌ಗಳಾದ ಖಾಜಾ ಮೊಹಿದ್ದೀನ್, ಶ್ರೀನಿವಾಸ್, ಸುಧಾಕರ್, ನಾಗರಾಜ್, ಯೂನುಸ್, ಕೆ. ಬೀರಪ್ಪ, ಶರಣಪ್ಪ ಹಾಗೂ ಕಾನ್‌ಸ್ಟೆಬಲ್‌ಗಳಾದ ರಮೇಶ್‌ಬಾಬು, ಮಂಜುನಾಥ್‌, ಚೇತನ್, ಗಂಗೂಲಿ, ರಸೂಲ್, ಪರುಶರಾಮ ಮತ್ತು ಗಣೇಶ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ತಾಳೂರು ರಸ್ತೆಯ ನಿವಾಸಿ ದುರ್ಗಾ ಎನ್ನುವವರ ಮನೆಯಲ್ಲಿ‌ 13 ರಂದು ಕಳ್ಳತನ ಮಾಡಿದ್ದರು. ಅಲ್ಲದೇ ಇದೇ ತಂಡ ಗುಗ್ಗರಹಟ್ಟಿಯ ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿರುವುದು ತನಿಖೆಯ ವೇಳೆ ಬಯಲಾಗಿದೆ. ಹೀಗಾಗಿ ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ಸೆರೆಯಾಗಿತ್ತು. ಇದರ ಸುಳಿವಿನ ಮೇರೆಗೆ ಪೊಲೀಸರು 12 ದಿನಗಳಲ್ಲಿ 5 ಪ್ರಕರಣಗಳನ್ನ ಭೇದಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಇದನ್ನೂ ಓದಿ: Yadgir News: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಪಲ್ಟಿ: ಚಾಲಕನಿಗೆ ಗಾಯ

ಕಳ್ಳತನ ಪ್ರಕರಣವನ್ನ ಯಶ್ವಸಿಯಾಗಿ ಭೇದಿಸಿದ ಪೊಲೀಸ ತನಿಖಾ ತಂಡಕ್ಕೆ ಜಿಲ್ಲಾ‌ ಪೊಲೀಸ ವರಿಷ್ಠಾಧಿಕಾರಿ ರಂಜಿತಕುಮಾರ್ ಬಂಡಾರು ಬಹುಮಾನ ಘೋಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:49 pm, Sun, 30 July 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು