ದೇವನಹಳ್ಳಿ, ಆಗಸ್ಟ್ 16: ಬೆಂಗಳೂರು ಏರ್ಪೋರ್ಟ್ನಲ್ಲಿ 30 ಚಿನ್ನದ ಬಿಸ್ಕೆಟ್ಗಳನ್ನು ಕೆಂಪೇಗೌಡ ಏರ್ಪೋರ್ಟ್ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ಗಳನ್ನು (gold biscuit) ಜಫ್ತಿ ಮಾಡಲಾಗಿದೆ.
ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್ಪೋರ್ಟ್ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.
Also read: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು
ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಈ ಘಟನೆ ನಡೆದಿದೆ.
ದೇವನಹಳ್ಳಿ (ಬೆಂಗಳೂರು), ಜುಲೈ 14: ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದರು.
ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ