ದೇವನಹಳ್ಳಿ, ಆಗಸ್ಟ್ 15: ಬೈಕ್ ವ್ಹೀಲಿಂಗ್ (Bike Wheeling) ಮಾಡುತ್ತಿದ್ದಾಗ ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ (Bengaluru) ಕೋಲಾರದ ಕಾಫೀ ಡೇ ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
20ಕ್ಕೂ ಹೆಚ್ಚು ಯುವಕ ಯುವತಿಯರ ಗುಂಪೊಂದು ಬೆಂಗಳೂರಿನಿಂದ ಕೋಲಾರದ ಕಾಫೀ ಡೇ ಕಡೆ ಬೈಕ್ಗಳ ಮೂಲಕ ಹೋಗುತ್ತಿದ್ದರು. ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿಕೊಂಡು ಜಾಲಿ ರೈಡ್ ಮಾಡುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ತಲುಪುತ್ತಿದ್ದಂತೆ ವ್ಹೀಲಿಂಗ್ ಮಾಡುತ್ತಿದ್ದಾಗ ಎರಡು ಬೈಕ್ಗಳು ಪರಸ್ಪರ ತಾಗಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ
ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಮತ್ತು ಯುವತಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಜೊತೆಯಲ್ಲಿದ್ದ ಸ್ನೇಹಿತರು ಬೈಕ್ ಸಹಿತ ಪರಾರಿಯಾಗಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಹಾವಳಿ ಬೆಳಗ್ಗೆಯಿಂದಲೇ ಆರಂಭವಾಗಿದೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್ಗಳ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ