ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಪೊಲೀಸರ ಕಟ್ಟುನಿಟ್ಟಿನ ಕ್ರಮ: ಅಪಘಾತ ಸಂಖ್ಯೆ ಇಳಿಮುಖ

ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳ(Accidents) ಸಂಖ್ಯೆ ಹೆಚ್ಚಳವಾಗಿ ಸಾವು ನೋವುಗಳ ಸಂಖ್ಯೆ ಕೂಡ ಹೆಚ್ಚಳವಾಗಿದ್ದರಿಂದ ಪೊಲೀಸರು ತೆಗೆದುಕೊಂಡ ದಿಟ್ಟ ಕ್ರಮ ಯಶಸ್ವಿಯಾಗಿದೆ. ಅಪಘಾತಗಳನ್ನ ತಡೆಗಟ್ಟಲು ಎನ್​ಹೆಚ್​ಎಐ ಹಾಗೂ ಪೊಲೀಸ್ ಇಲಾಖೆ ಹಲವು ಸುರಕ್ಷತಾ ಕ್ರಮಗಳನ್ನ ವಹಿಸಿದೆ. ಹೀಗಾಗಿ ಅಪಘಾತಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

Important Highlight‌
ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಪೊಲೀಸರ ಕಟ್ಟುನಿಟ್ಟಿನ ಕ್ರಮ: ಅಪಘಾತ ಸಂಖ್ಯೆ ಇಳಿಮುಖ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ
Follow us
Kiran HV
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2023 | 9:34 AM

ಬೆಂಗಳೂರು, (ಆಗಸ್ಟ್​ 22): ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ವೇ (Bengaluru Mysuru Expressway) ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ಸಂಚಾರ ಪೊಲೀಸರು ಕೈಕೊಂಡಿರುವ ಹಲವಾರು ಕಟ್ಟುನಿಟ್ಟಿನ ಕ್ರಮಗಳು ವರ್ಕೌಟ್ ಆಗಿದೆ. ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳು ಸಂಖ್ಯೆ ಇಳಿಮುಖವಾಗಿದೆ. ಹೌದು… ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜುಲೈನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ (casualties and deaths) ಜೂನ್ 28 ಇದ್ದು, ಜುಲೈನಲ್ಲಿ 8ಕ್ಕೆ ಇಳಿದಿದೆ. ಅದು ಇದೀಗ ಆಗಸ್ಟ್ 21ರ ವರೆಗೆ ಕೇವಲ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಪೊಲೀಸ್​ ಇಲಾಖೆ ಕೈಗೊಂಡ ದಿಟ್ಟ ಕ್ರಮಗಳಿಂದ ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿವೆ.

ಯಾವ ತಿಂಗಳಲ್ಲಿ ಎಷ್ಟು ಸಾವು?

ಏಪ್ರಿಲ್​ನಲ್ಲಿ 24 ಅಪಘಾತದಲ್ಲಿ ಮೃತಪಟ್ಟಿದ್ದರೆ, ಮೇ ತಿಂಗಳಲ್ಲಿ ಅಪಘಾತದಿಂದ 29 ಜನರು ಸಾವನ್ನಪ್ಪಿದ್ದರು. ಜೂನ್​ನಲ್ಲಿ ಈ ಹೆದ್ದಾರಿಯಲ್ಲಿ 28 ಜನರು ಉಸಿರು ಚೆಲ್ಲಿದ್ದರು. ಈ ತಿಂಗಳು ಆಗಸ್ಟ್​ 21ರ ವರೆಗೆ ನೋಡುವುದಾದರೆ ಅಪಘಾತದಲ್ಲಿ 4 ಸಾವಾಗಿವೆ. ಹೀಗಾಗಿ ಅಪಘಾತ ಪ್ರಕರಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸಂಚಾರ-ಸುರಕ್ಷತಾ ಪ್ರಾಧಿಕಾರದ ಎಡಿಜಿಪಿ ಅಲೋಕ್ ಕುಮಾರ್ ಅವರಯ ತಮ್ಮ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಜುಲೈ ತಿಂಗಳಲ್ಲಿ ಅಪಘಾತಗಳಿಂದ ಸಾವಿನ ಸಂಖ್ಯೆ ಇಳಿಕೆ -ಎಡಿಜಿಪಿ ಅಲೋಕ್ ಕುಮಾರ್

ಪೊಲೀಸ್​ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳು

ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳ(Accidents) ಸಂಖ್ಯೆ ಹೆಚ್ಚಳವಾಗಿ ಸಾವು ನೋವುಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಅಪಘಾತಗಳನ್ನ ತಡೆಗಟ್ಟಲು ಎನ್​ಹೆಚ್​ಎಐ ಹಾಗೂ ಪೊಲೀಸ್ ಇಲಾಖೆ ಹಲವು ಸುರಕ್ಷತಾ ಕ್ರಮಗಳನ್ನ ವಹಿಸಿದೆ.

ಆಗಸ್ಟ್ 1ರಿಂದ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ಯಾಕ್ಟರ್​ಗಳ ಸಂಚಾರಕ್ಕೆ ಬ್ರೇಕ್ ಹಾಕಿ, ಸರ್ವಿಸ್ ರಸ್ತೆಯಲ್ಲಿ ಸಂಚರಿಸುವಂತೆ ಆದೇಶ ಮಾಡಿತ್ತು. ಮತ್ತೊಂದೆಡೆ ವೇಗದ ಮಿತಿಗೆ ಕಡಿವಾಣ ಹಾಕಲು ಹೆದ್ದಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ANRP(Automatic Number Plate Recognition Camera) ಕ್ಯಾಮರಾವನ್ನ ಎರಡು ಕಡೆಗಳಲ್ಲಿ ಅವಳಡಿಕೆ ಮಾಡಲಾಗಿದೆ.

ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗಕ್ಕೆ ಕಡಿವಾಣ ಹಾಕುವ ‌ನಿಟ್ಟಿನಲ್ಲಿ ಈ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿತ್ತು. 100 ಕಿಲೋಮೀಟರ್​​​ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಈ ಕ್ಯಾಮರಾದಿಂದ ಹೆದ್ದಾರಿ ಪ್ರಾಧಿಕಾರದ ಕಂಟ್ರೋಲ್ ರೂಮ್ ಹಾಗೂ ಸ್ಥಳೀಯ ಪೊಲೀಸರಿಗೂ ಮಾಹಿತಿ ರವಾನೆಯಾಗುತ್ತಿತ್ತು. ಅದರ ಆಧಾರದ ಮೇಲೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಹೀಗೆ ಪೊಲೀಸ್ ಇಲಾಖೆ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವ ಮೂಲಕ ಅಪಘಾತಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು