ಬೆಂಗಳೂರು, (ಆಗಸ್ಟ್ 22): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysuru Expressway) ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟುವುದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹಾಗೂ ಸಂಚಾರ ಪೊಲೀಸರು ಕೈಕೊಂಡಿರುವ ಹಲವಾರು ಕಟ್ಟುನಿಟ್ಟಿನ ಕ್ರಮಗಳು ವರ್ಕೌಟ್ ಆಗಿದೆ. ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳು ಸಂಖ್ಯೆ ಇಳಿಮುಖವಾಗಿದೆ. ಹೌದು… ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಜುಲೈನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದ್ದವರ ಸಂಖ್ಯೆ (casualties and deaths) ಜೂನ್ 28 ಇದ್ದು, ಜುಲೈನಲ್ಲಿ 8ಕ್ಕೆ ಇಳಿದಿದೆ. ಅದು ಇದೀಗ ಆಗಸ್ಟ್ 21ರ ವರೆಗೆ ಕೇವಲ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಪೊಲೀಸ್ ಇಲಾಖೆ ಕೈಗೊಂಡ ದಿಟ್ಟ ಕ್ರಮಗಳಿಂದ ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿವೆ.
ಏಪ್ರಿಲ್ನಲ್ಲಿ 24 ಅಪಘಾತದಲ್ಲಿ ಮೃತಪಟ್ಟಿದ್ದರೆ, ಮೇ ತಿಂಗಳಲ್ಲಿ ಅಪಘಾತದಿಂದ 29 ಜನರು ಸಾವನ್ನಪ್ಪಿದ್ದರು. ಜೂನ್ನಲ್ಲಿ ಈ ಹೆದ್ದಾರಿಯಲ್ಲಿ 28 ಜನರು ಉಸಿರು ಚೆಲ್ಲಿದ್ದರು. ಈ ತಿಂಗಳು ಆಗಸ್ಟ್ 21ರ ವರೆಗೆ ನೋಡುವುದಾದರೆ ಅಪಘಾತದಲ್ಲಿ 4 ಸಾವಾಗಿವೆ. ಹೀಗಾಗಿ ಅಪಘಾತ ಪ್ರಕರಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸಂಚಾರ-ಸುರಕ್ಷತಾ ಪ್ರಾಧಿಕಾರದ ಎಡಿಜಿಪಿ ಅಲೋಕ್ ಕುಮಾರ್ ಅವರಯ ತಮ್ಮ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳ(Accidents) ಸಂಖ್ಯೆ ಹೆಚ್ಚಳವಾಗಿ ಸಾವು ನೋವುಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಅಪಘಾತಗಳನ್ನ ತಡೆಗಟ್ಟಲು ಎನ್ಹೆಚ್ಎಐ ಹಾಗೂ ಪೊಲೀಸ್ ಇಲಾಖೆ ಹಲವು ಸುರಕ್ಷತಾ ಕ್ರಮಗಳನ್ನ ವಹಿಸಿದೆ.
ಆಗಸ್ಟ್ 1ರಿಂದ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ಯಾಕ್ಟರ್ಗಳ ಸಂಚಾರಕ್ಕೆ ಬ್ರೇಕ್ ಹಾಕಿ, ಸರ್ವಿಸ್ ರಸ್ತೆಯಲ್ಲಿ ಸಂಚರಿಸುವಂತೆ ಆದೇಶ ಮಾಡಿತ್ತು. ಮತ್ತೊಂದೆಡೆ ವೇಗದ ಮಿತಿಗೆ ಕಡಿವಾಣ ಹಾಕಲು ಹೆದ್ದಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ANRP(Automatic Number Plate Recognition Camera) ಕ್ಯಾಮರಾವನ್ನ ಎರಡು ಕಡೆಗಳಲ್ಲಿ ಅವಳಡಿಕೆ ಮಾಡಲಾಗಿದೆ.
ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ವೇಗಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿತ್ತು. 100 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಈ ಕ್ಯಾಮರಾದಿಂದ ಹೆದ್ದಾರಿ ಪ್ರಾಧಿಕಾರದ ಕಂಟ್ರೋಲ್ ರೂಮ್ ಹಾಗೂ ಸ್ಥಳೀಯ ಪೊಲೀಸರಿಗೂ ಮಾಹಿತಿ ರವಾನೆಯಾಗುತ್ತಿತ್ತು. ಅದರ ಆಧಾರದ ಮೇಲೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಹೀಗೆ ಪೊಲೀಸ್ ಇಲಾಖೆ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವ ಮೂಲಕ ಅಪಘಾತಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ