ಬೆಂಗಳೂರು, ಆ.15: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸೂರ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bengaluru) ಹೊರವಲಯದ ಆನೇಕಲ್(Anekal) ತಾಲ್ಲೂಕಿನ ಚಂದಾಪುರ-ದೊಮ್ಮಸಂದ್ರ ಮುಖ್ಯರಸ್ತೆಯ ರೈಲ್ವೆ ಸ್ಟೇಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆನೇಕಲ್ನ ಚನ್ನಕೇಶವ ನಗರದ ಅಭಿ(19), ತರಣ್(20), ಸೂರ್ಯ(21), ಹರ್ಷ (21) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು ಗಾಂಜಾವನ್ನು ತಂದು ಸಣ್ಣ ಸಣ್ಣ ಪ್ಯಾಕೆಟ್ಗಳನ್ನಾಗಿ ಮಾಡಿ ಚಂದಾಪುರದ ಹೀಲಲಿಗೆ ಸಮೀಪದ ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದರು.
ಹೌದು, ಕಾಲೇಜು ಯುವಕ ಯುವತಿಯರಿಗೆ ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಸೂರ್ಯನಗರ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಪ್ರಯತ್ನಿಸಿದ್ದು, ಇದೀಗ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಗಾಂಜಾ ಮಾರಾಟ; ಅರೋಪಿಯನ್ನ ಬಂಧಿಸಿದ ಪೊಲೀಸರು, 5 ಕೆಜಿಗೂ ಅಧಿಕ ಗಾಂಜಾ ಜಪ್ತಿ
ಆಗಸ್ಟ್ 09 ರಂದು ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿ, 510 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿತ್ತು. ಮಂಗಳೂರು, ರಾಯಚೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಬೆನ್ನಲ್ಲೇ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಘಟನೆಗಳು ಬೆಳಕಿಗೆ ಬಂದಿತ್ತು. ಹೌದು, ಆಗಸ್ಟ್ 8 ರಂದು ಹುಬ್ಬಳ್ಳಿಯಲ್ಲಿ ಓರ್ವ ಡ್ರಗ್ ಪೆಡ್ಲರ್ನನ್ನು ಬಂಧಿಸಿದ್ದರು. ಇದಾದ ಮಾರನೇ ದಿನವೇ ಧಾರವಾಡದ ತಡಸಿನಕೊಪ್ಪ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ವಿದ್ಯಾಗಿರಿ ಪೊಲೀಸರು ಬಂಧಿಸಿದ್ದರು. ದರ್ಶನ ದುಗ್ಗಾಣಿ, ಗುರುರಾಜ ಯರೇಸೀಮಿ, ಮಂಜುನಾಥ ಮಾನೆ ಬಂಧಿತ ಆರೋಪಿಗಳು.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ