ಬೆಂಗಳೂರು: ಇತ್ತೀಚಿಗೆ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಮಕ್ಕಳನ್ನು ದುಷ್ಕರ್ಮಿಗಳು ತಮ್ಮ ಕಾಮ ತೃಷೆಗಾಗಿ ಬಳಸಿಕೊಳ್ಳುತ್ತಿರುವುದು ಹೀನ ಸಂಗತಿಯಾಗಿದೆ. ಮಕ್ಕಳ (Children) ಮೇಲೆ ಲೈಂಗಿಕ ದೌರ್ಜಜ್ಯವೆಸಗಿ ಕೊಲೆ ಮಾಡಿದ ಪ್ರಕರಣಗಳೂ ವರದಿಯಾಗಿವೆ. ಮಕ್ಕಳ ಮೇಲೆ ದೃಷ್ಕೃತ್ಯವೆಸಗಿದ ಆರೋಪಿಗಳಿಗೆ ಪೋಕ್ಸೋ (Pocso) ಕಾಯ್ದೆಯಡಿ ಶಿಕ್ಷೆ ನೀಡಲಾಗುತ್ತದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗುತ್ತಿದೆ. ಒಂದೇ ತಿಂಗಳಲ್ಲಿ 24 ಪ್ರಕರಣಗಳು ದಾಖಲಾಗಿವೆ. ನೆರೆ ಮನೆಯವರು, ಸಂಬಂಧಿಕರೂ ಮಕ್ಕಳ ಮೇಲೆ ದೌರ್ಜ್ಯನೆವೆಸಗಿರುವುದೇ ಹೆಚ್ಚಾಗಿದೆ.
ಇದೊಂದಡೆಯಾದರೇ ಕೆಲ ತಿಂಗಳ ಹಿಂದೆ ಬಿಡುಗಡೆಯಾದ ವರದಿ ಪ್ರಕಾರ ಹದಿಹರೆಯದ ಯುವತಿಯರು ಪ್ರೇಮಕ್ಕೆ ಸಿಲುಕುತ್ತಿದ್ದು, ಇದರಿಂದ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಎಸ್ಎಸ್ಎಲ್ಸಿ, ಪಿಯುಸಿ ಓದುವ ಹಂತದಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣ, ಸಿನಿಮಾ ಇತ್ಯಾದಿ ಪ್ರೇರಣೆಯಿಂದ ಪ್ರೀತಿ, ಪ್ರೇಮ, ಪ್ರಣಯದಂತ ಮೋಸದ ಬಲೆಗೆ ಸಿಲುಕುತ್ತಾರೆ. ನಂತರ ಅತ್ಯಾಚಾರ, ಶೋಷಣೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಇದು ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.
2012 Protection of Children from Sexual Offences Act ಅನ್ನು (POCSO ACT) ಎಂದು ಕರೆಯಲಾಗುತ್ತಿದೆ. ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲತೆಯ ಅಪರಾಧಗಳಿಂದ ಮಕ್ಕಳ ರಕ್ಷಣೆಗಾಗಿ ದೃಢವಾದ ಕಾನೂನು ಚೌಕಟ್ಟನ್ನು ಒದಗಿಸಲು ಪೊಕ್ಸೊ ಕಾಯ್ದೆಯನ್ನು 2012ರಲ್ಲಿ ಜಾರಿಗೆ ತರಲಾಯಿತು. ಈ ಮೂಲಕ ಮಕ್ಕಳನ್ನು ಎಲ್ಲ ರೀತಿಯ ಲೈಂಗಿಕ ದೌರ್ಜನ್ಯ ಅಪರಾಧಗಳಿಂದ ಪಾರು ಮಾಡುವುದು ಕಾಯಿದೆಯ ಮುಖ್ಯ ಉದ್ದೇಶವಾಗಿದೆ. ಈ ಕಾಯಿದೆ ಯಾವುದೇ ಲಿಂಗತಾರತಮ್ಯ ಮಾಡುವುದಿಲ್ಲ ಬಾಲಕಿ ಮತ್ತು ಬಾಲಕ ಇಬ್ಬರನ್ನು ಲೌಂಗಿಕ ದೌರ್ಜನ್ಯದ ಸಂತ್ರಸ್ತರು ಎಂದು ಪರಿಗಣಿಸುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.