Karnataka Rajyotsava 2021: ಸಾವಯವ ಕೃಷಿಕನಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಗುರುಲಿಂಗಪ್ಪ ಮೇಲ್ದೊಡ್ಡಿ ಮಾಡುವ ಸಾವಯವ ಕೃಷಿಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ, ಆಂಧ್ರ ಪ್ರದೇಶ, ಓಡಿಸಾ, ತೆಲಂಗಾಣ ಸೇರಿದಂತೆ ಐದಾರು ರಾಜ್ಯದಿಂದ ಕೃಷಿ ಅಧಿಕಾರಿಗಳು, ವಿಜ್ಜಾನಿಗಳು ಇವರ ಹೊಲಕ್ಕೆ ಭೇಟಿಕೊಟ್ಟು ಅಧ್ಯಯನ ನಡೆಸಿದ್ದಾರೆ.

Important Highlight‌
Karnataka Rajyotsava 2021: ಸಾವಯವ ಕೃಷಿಕನಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಗುರುಲಿಂಗಪ್ಪ ಮೇಲ್ದೊಡ್ಡಿ
Follow us
| Updated By: preethi shettigar

Updated on: Nov 01, 2021 | 9:25 AM

ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹುಡಗಿ ಗ್ರಾಮದ ರೈತ ಗುರುಲಿಂಗಪ್ಪ ಮೇಲ್ದೊಡ್ಡಿ ಅವರು 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ‍ಪ್ರಶಸ್ತಿಗೆ ಭಾಜನವಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಸರ್ಕಾರವು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಬಹು ಬೆಳೆ ಹಾಗೂ ದ್ವಿದಳ ಧಾನ್ಯ ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. 65 ವರ್ಷದ ಹಿರಿಯ ಜೀವಿಯಾದ ಇವರು ಪಿಯುಸಿವರೆಗೆ ಶಿಕ್ಷಣ ಒಡೆದುಕೊಂಡಿದ್ದು, ಕಳೆದ 45 ವರ್ಷದಿಂದ ಮಿಶ್ರ ಬೆಳೆಯಲ್ಲಿದೆ. ವಿಶೇಷವಾಗಿ ನಾಟಿ ತೊಗರಿಗೆ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕಳೆದ 20 ವರ್ಷದಿಂದ ಸಾವಯವ ಕೃಷಿಯಲ್ಲಿ ತೊಡಗಿಕೊಂಡಿದ್ದು, 11 ವರ್ಷದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಾವಯವ ಕೃಷಿಯ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.

ಕೃಷಿ ಅಧಿಕಾರಿಗಳು ಭೇಟಿ ಗುರುಲಿಂಗಪ್ಪ ಮೇಲ್ದೊಡ್ಡಿ ಮಾಡುವ ಸಾವಯವ ಕೃಷಿಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ, ಆಂಧ್ರ ಪ್ರದೇಶ, ಓಡಿಸಾ, ತೆಲಂಗಾಣ ಸೇರಿದಂತೆ ಐದಾರು ರಾಜ್ಯದಿಂದ ಕೃಷಿ ಅಧಿಕಾರಿಗಳು, ವಿಜ್ಜಾನಿಗಳು ಇವರ ಹೊಲಕ್ಕೆ ಭೇಟಿಕೊಟ್ಟು ಅಧ್ಯಯನ ನಡೆಸಿದ್ದಾರೆ.

ಗುರುಲಿಂಗಪ್ಪ ಮೇಲ್ದೊಡ್ಡಿ ಪಡೆದ ಪ್ರಶಸ್ತಿಗಳು ಗುರುಲಿಂಗಪ್ಪ ಮೇಲ್ದೊಡ್ಡಿ ಅವರ ಕೃಷಿ ಸೇವೆ ಪರಿಗಣಿಸಿ ರಾಜ್ಯ ಕೃಷಿ ಪಂಡಿತ್, ಸಾವಯವ ಕೃಷಿ ಪಂಡಿತ, ಧಾರವಾಡ ವಿಶ್ವವಿದ್ಯಾಲಯ ಶ್ರೇಷ್ಠ ಕೃಷಿ ಪ್ರಶಸ್ತಿ, 2013 ರಲ್ಲಿ ಗುಜರಾತ್​ನಲ್ಲಿ ಉತ್ತಮ ಕೃಷಿಕ ಪ್ರಶಸ್ತಿ, 2017 ಮುಂಬೈನಲ್ಲಿ ಆಸ್ಪಿ ಕಂಪನಿಯಿಂದ ನಿವೃತ್ತ ಕೃಷಿ ಆಯುಕ್ತ ಪ್ರೋ, ಕೆಎಲ್ ಚಂದಾ ಅವರು 1 ಲಕ್ಷ ರೂಪಾಯಿ ನಗದಿನೊಂದಿಗೆ ಉತ್ತಮ ರೈತ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ. ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಸ್ಪೀ) ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಸಲ್ಲಿಸಿದವರಿಗೆ ನೀಡುವ 2017ನೇ ಸಾಲಿನ ಎಲ್‌.ಎಂ.ಪಟೇಲ್‌ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ನಾಡಿನ ಸಮಸ್ತ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ

Karnataka Rajyotsava 2021: ಕನ್ನಡಕ್ಕಿದೆ ಪ್ರಾದೇಶಿಕತೆಯ ಛಾಪು; ಆಯಾ ಸ್ಥಳ, ಜನಾಂಗಕ್ಕೆ ಅನುಗುಣವಾಗಿ ಬದಲಾಗುತ್ತದೆ ಆಡುನುಡಿ

ತಾಜಾ ಸುದ್ದಿ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
bug9 ಮಾಡದೆ ನೋಡಿ! ಚಂದ್ರನ ಮೇಲೆ ಇಳಿಯೋಕು ಮುನ್ನ ವಿಕ್ರಮ್ ಲ್ಯಾಂಡರ್ ಸೆರೆ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ