ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸಿ: ಸರ್ಕಾರಿ ನೌಕರರಿಗೆ ಬೀದರ್ ಡಿಸಿ ಸುತ್ತೋಲೆ

| Updated By: Rakesh Nayak Manchi

Updated on: Aug 07, 2023 | 7:00 PM

ಬೀದರ್ ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಡುತ್ತಿರುವರ ಸಂಖ್ಯೆ ಹೆಚ್ಚಳ ಹಿನ್ನೆಲೆ ಸರ್ಕಾರಿ ನೌಕರರಿಗೆ ಸುತ್ತೋಲೆ ಹೊರಡಿಸಿದ ಜಿಲ್ಲಾಧಿಕಾರಿ, ಸಂಚಾರ ನಿಯಮ ಪಾಲಿಸಿ ಎಂದು ಸೂಚಿಸಿದ್ದಾರೆ.

ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸಿ: ಸರ್ಕಾರಿ ನೌಕರರಿಗೆ ಬೀದರ್ ಡಿಸಿ ಸುತ್ತೋಲೆ
ಸಂಚಾರ ನಿಯಮ ಪಾಲನೆ ಮಾಡುವಂತೆ ಸರ್ಕಾರಿ ನೌಕರರಿಗೆ ಬೀದರ್ ಡಿಸಿ ಸುತ್ತೋಲೆ
Image Credit source: iStock Photo
Follow us on

ಬೀದರ್, ಆಗಸ್ಟ್ 7: ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ (Road Accident) ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರಿ ನೌಕರರಿಗೆ ಸುತ್ತೋಲೆ ಹೊರಡಿಸಿದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ (Govinda Reddy), ಬೈಕ್ ಚಲಾಯಿಸುವಾಗ ಹೆಲ್ಮೆಟ್ ಧರಿಸುವಂತೆ ಹಾಗೂ ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಹಾಕುವಂತೆ ಸೂಚಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. 2022 ರಲ್ಲಿ ಜಿಲ್ಲೆಯಲ್ಲಿ 332 ರಸ್ತೆ ಅಪಘಾತಗಳು ಸಂಭವಿಸಿದ್ದು, 197 ಜನರ ಸಾವನ್ನಪ್ಪಿದ್ದಾರೆ. ಈ ಎರಡು ವರ್ಷದಲ್ಲಿ 11 ಮಂದಿ ಸರ್ಕಾರಿ ನೌಕರರು ಸಾವನ್ನಪ್ಪಿದ್ದಾರೆ. ಈ ಕಾರಣಕ್ಕಾಗಿ ಜಿಲ್ಲಾಧಿಕಾರಿಯವರು ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: 8ರಿಂದ 10ನೇ ತರಗತಿವರೆಗೆ ಒಬ್ಬರೇ ಶಿಕ್ಷಕ: ಶಿಕ್ಷಕರನ್ನ ನೇಮಕಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದ ವಿದ್ಯಾರ್ಥಿಗಳು

ಸುತ್ತೋಲೆಯಲ್ಲಿ ಏನಿದೆ?

ವಿಶ್ವದಲ್ಲಿ ಭಾರತವು ರಸ್ತೆ ಅಪಘಾತದಲ್ಲಿ ಮೊದಲನೇ ಸ್ಥಾನದಲ್ಲಿದೆ. ಅದೇ ರೀತಿ ದೇಶದಲ್ಲಿ ಕರ್ನಾಟಕವು 3ನೇ ಸ್ಥಾನದಲ್ಲಿದೆ. ಬೀದರ್ ಜಿಲ್ಲಾದ್ಯಂತ 2022ರಲ್ಲಿ 332 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, 2023ರ ಜುಲೈ ಅಂತ್ಯದ ವರೆಗೆ 197 ಮಂದಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ 2022ರಲ್ಲಿ 15 ಮತ್ತು 2023ರಲ್ಲಿ 11 ಮಂದಿ ಸರ್ಕಾರದ ವಿವಿಧ ಇಲಾಖೆಯ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ.

ಸಂಚಾರ ಮತ್ತು ರಸ್ತೆ ಸುರಕ್ಷತಾ ನಿಯಮಗಳು ಪಾಲನೆ ಮಾಡದೇ ಇರುವುದು, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸುವುದು ಸಾವಿಗೆ ಕಾರಣವಾಗಿದೆ. ಹೀಗಾಗಿ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಬೇಕಾಗಿದ್ದು, ಈ ವರ್ಷದ ಡಿಸೆಂಬರ್ ವರೆಗೆ ಬೀದರ್ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ