ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅಂದ್ರೆ ನೋವಾಗುತ್ತೆ, ಸಿದ್ದರಾಮಯ್ಯನವರೇ ಎಂದು ಹೇಳಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಅವಕಾಶ ಬಂದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬಹುದು. ಜನ ಇಷ್ಟಪಟ್ಟರೆ, ಸಿದ್ದರಾಮಯ್ಯರ ನೋವನ್ನು ಅರ್ಥ ಮಾಡಿಕೊಂಡರೆ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂದು ಕರೆಯುವುದು ಉತ್ತಮ.

Important Highlight‌
ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅಂದ್ರೆ ನೋವಾಗುತ್ತೆ, ಸಿದ್ದರಾಮಯ್ಯನವರೇ ಎಂದು ಹೇಳಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ರಮೇಶ್ ಕುಮಾರ್​ ಮತ್ತು ಸಿದ್ದರಾಮಯ್ಯ
Follow us
Skanda
| Updated By: preethi shettigar

Updated on: Apr 04, 2021 | 1:55 PM

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಹೇಳುವುದನ್ನು ಕೇಳಿದರೆ ಮನಸ್ಸಿಗೆ ನೋವಾಗುತ್ತೆ. ಅವರು ಮಾಜಿ ಅಲ್ಲ. ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಉಪ್ಪಿನಕಾಯಿ ಹಾಕಿ ನೆಕ್ತೀರಾ? ಒಂದು ವೇಳೆ ಅವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆದರೆ ಅದು ಅವರಿಗೆ ಮಾಡುವ ಅಪಮಾನ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಎಂದು ಕರೆಯಿರಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಅವಕಾಶ ಬಂದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬಹುದು. ಜನ ಇಷ್ಟಪಟ್ಟರೆ, ಸಿದ್ದರಾಮಯ್ಯರ ನೋವನ್ನು ಅರ್ಥ ಮಾಡಿಕೊಂಡರೆ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂದು ಕರೆಯುವುದು ಉತ್ತಮವೆಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದಾಂತವಲ್ಲ ಹಾವೇರಿ: ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವ ಒತ್ತಾಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿದ ತಕ್ಷಣವೇ ಅದು ವೇದಾಂತವಲ್ಲ. ಈ ಹಿಂದೆ ಹೆಚ್.ವೈ.ಮೇಟಿ ಕೇಸ್​ನಲ್ಲಿ ಎಫ್ಐಆರ್ ಕೂಡ ಆಗಿರಲಿಲ್ಲ. ನಮ್ಮ ಸರ್ಕಾರ ಎಸ್ಐಟಿ ತನಿಖೆಗೆ ಸೂಚನೆ ಕೊಟ್ಟಿದೆ ಎಂದು ಹೇಳಿದರು. ಸಂತ್ರಸ್ತೆ ಬಂದ ಬಳಿಕ ಪ್ರಕರಣ ಕೂಡ ದಾಖಲಿಸಿದ್ದಾರೆ. ಅವಶ್ಯಕತೆ ಕಂಡುಬಂದರೆ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಸಾಬೀತಾದರೆ, ಖಂಡಿತವಾಗಿ ರಮೇಶ್ ಜಾರಕಿಹೊಳಿಯನ್ನು ಬಂಧಿಸುತ್ತಾರೆ ಎಂದು ಹೇಳಿದ ಸಚಿವ ಬಿ.ಸಿ.ಪಾಟೀಲ್, ಚಿತ್ರರಂಗಕ್ಕೆ ಕೊರೊನಾ ನಿಯಮದಲ್ಲಿ ಸಡಿಲಿಕೆ ಕೊಟ್ಟಿರುವುದಕ್ಕೆ ಸಮರ್ಥನೆ ಮಾಡಿಕೊಂಡರು. ಚಿತ್ರರಂಗಕ್ಕೆ ನಿಯಮಗಳ ಸಡಿಲಿಕೆ ಅತಿ ಅವಶ್ಯಕ ಇದೆ. ಎಲ್ಲರೂ ಕೂಡ ಮಾಸ್ಕ್ ಧರಿಸಬೇಕು ಎನ್ನುವ ಸೂಚನೆ ಕೊಟ್ಟಿದ್ದಾರೆ. ಆದರೆ ಕೊರೊನಾ ನಿಯಮಗಳನ್ನು ಕಳೆದ ವರ್ಷದಂತೆ ಜನರು ಪಾಲನೆ ಮಾಡುತ್ತಿಲ್ಲ. ಜನರ ಜವಾಬ್ದಾರಿಯೂ ಬಹಳಷ್ಟಿದೆ. ಒಂದು ವಾರದ ಮಟ್ಟಿಗೆ ಸಿನಿಮಾ ಮಂದಿರ ಬಿಟ್ಟಿದ್ದಾರೆ. ಜನರೂ ಈ ಬಗ್ಗೆ ಜಾಗೃತರಾಗಿರಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ನಾನು ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗಲ್ಲ, ಏಕೆಂದರೆ ದೇವರು ನನ್ನಲ್ಲೇ ಇದ್ದಾನೆ: ಸಿದ್ದರಾಮಯ್ಯ

‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’.. ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ತೂರಿ ಪ್ರಾರ್ಥನೆ

(Calling Siddaramaiah as Ex Chief Minister is disgrace to him says Ex speaker Ramesh Kumar)

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ: ಆರ್ ಅಶೋಕ