ಮೂಲಭೂತ ಸೌಕರ್ಯ ಕೊರತೆ: ಚಾಮರಾಜನಗರ ಜಿಲ್ಲೆಯಲ್ಲಿ 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿದ ಶಿಕ್ಷಣ ಇಲಾಖೆ
ಸರ್ಕಾರಿ ಕಟ್ಟಡಗಳ ದುರಸ್ಥಿ ಮೂಲಭೂತ ಸೌಕರ್ಯ ಕೊರತೆ ಹಿನ್ನಲೆ ಸರ್ಕಾರಿ ಶಾಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡುತ್ತಿಲ್ಲ. ಹಾಗಾಗಿ ಸರ್ಕಾರಿ ಶಾಲೆಯ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳನ್ನು ಬಂದ ಮಾಡಲಾಗಿದೆ ಎಂದು ಟಿವಿ9 ಗೆ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇಅರಸ್ ಮಾಹಿತಿ ನೀಡಿದ್ದಾರೆ.
ಚಾಮರಾಜನಗರ, ಆಗಸ್ಟ್ 17: ಮೂಲಭೂತ ಸೌಕರ್ಯ ಕೊರತೆ ಹಿನ್ನೆಲೆ ಗಡಿ ನಾಡು ಚಾಮರಾಜನಗರ ಜಿಲ್ಲೆಯಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳನ್ನು (government schools) ಶಿಕ್ಷಣ ಇಲಾಖೆ ಮುಚ್ಚಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇಅರಸ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಶೂನ್ಯ ದಾಖಲಾತಿ, ಕಟ್ಟಡಗಳ ದುರಸ್ಥಿಗಳಿಂದ ಸರ್ಕಾರಿ ಶಾಲೆಗಳ ಕಡೆ ವಿದ್ಯಾರ್ಥಿಗಳು ಮುಖ ಮಾಡದಂತಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. ಬಾಯಿ ಮಾತಿಗೆ ಸರ್ಕಾರಿ ಶಾಲೆ ಉಳಿಸಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ಅಳಿವಿನಂಚಿನಲ್ಲಿರುವ ಸರ್ಕಾರಿ ಶಾಲೆಗಳಿಗೆ ಪುನಶ್ಚೇತನ ಸಿಗುವುದು ಯಾವಾಗ ಎಂದು ಪ್ರಶ್ನಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ರೆಸ್ಪಾನ್ಸಿಬಿಲಿಟಿ ಫಂಡ್ ಬಳಕೆ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ರೆಸ್ಪಾನ್ಸಿಬಿಲಿಟಿ ಫಂಡ್ನ್ನು (ಸಿಎಸ್ಆರ್) ಸೂಕ್ತವಾಗಿ ಬಳಸಿಕೊಳ್ಳುವಲ್ಲಿ ಪ್ರಯತ್ನಿಸಲಾಗುವುದು. ಖಾಸಗಿ ಶಾಲೆಗಳು ರಾಜ್ಯದಲ್ಲಿನ ಒಂದೊಂದು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಬುಧವಾರ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತಾಗಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಮಾತುಕತೆ ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ; ಹೊಸ ಪರಿಕಲ್ಪನೆ ಜಾರಿಗೆ ಮುಂದಾಗಿದ್ದೇವೆ ಎಂದ ಡಿಕೆ ಶಿವಕುಮಾರ್
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಮೂರು ವರ್ಷಗಳಲ್ಲಿ 2000 ಕಾರ್ಪೊರೇಟ್ ಹಣಕಾಸು ಶಾಲೆಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ ಎಂದರು.
ಸರ್ಕಾರಿ ಶಾಲೆ ದತ್ತು ಸ್ವೀಕಾರ
‘ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಮೀಸಲಿಟ್ಟಿರುವ ಸಿಎಸ್ಆರ್ ನಿಧಿಯನ್ನು ಅನೇಕ ಸಂದರ್ಭಗಳಲ್ಲಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂಬುವುದು ನಮ್ಮ ಗಮನಕ್ಕೆ ಬಂದಿದೆ. ಹಾಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸರ್ಕಾರಿ ಶಾಲೆಯನ್ನು ಗುರುತಿಸಿ ದತ್ತು ತೆಗೆದುಕೊಳ್ಳಬೇಕು’.
ಇದನ್ನೂ ಓದಿ: ಎನ್ಇಪಿ ರದ್ದತಿ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ಟೀಕೆ
ಕಾರ್ಪೊರೇಟ್ ಸಂಸ್ಥೆಗಳು ಮತ್ತು ಖಾಸಗಿ ಶಾಲೆಗಳ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಮೂಲಕ ಈ ಹಣವನ್ನು ಸರಿಯಾಗಿ ಬಳಕೆ ಮಾಡಲು ನಾವು ಬಯಸುತ್ತೇವೆ. ಸಭೆಯಲ್ಲಿ ಈ ಕುರಿತಾಗಿ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.