ಚಿಕ್ಕಬಳ್ಳಾಪುರ; ಸತ್ಯಸಾಯಿ ಆಶ್ರಮದಲ್ಲಿ 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವ

Agriculture Technology; ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

Important Highlight‌
Follow us
Mangala RR
| Updated By: ಗಣಪತಿ ಶರ್ಮ

Updated on:Aug 12, 2023 | 6:14 PM

ಬೆಂಗಳೂರು, ಆಗಸ್ಟ್ 12: ಗ್ರಾಮೀಣ ಭಾಗಗಳ ಬೆಳವಣಿಗೆಯ ದೃಷ್ಟಿಯನ್ನಿಟ್ಟುಕೊಂಡು ಚಿಕ್ಕಬಳ್ಳಾಪುರದ (Chikkaballapur) ಮುದ್ದೇನಹಳ್ಳಿಯಲ್ಲಿರುವ ಶ್ರೀ ಸತ್ಯಸಾಯಿ ಆಶ್ರಮದಲ್ಲಿ (Sathya Sai Ashram) 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಅದ್ಧೂರಿಯಾಗಿ ಉತ್ಸವ (Startup Festival) ನಡೆಯಿತು. ಈ ಉತ್ಸವದಲ್ಲಿ 10 ಸಾವಿರ ಸ್ಟಾರ್ಟ್ ​​​ಅಪ್​​, 500ಕ್ಕೂ ಹೆಚ್ಚು ಹೂಡಿಕೆದಾರರು ಭಾಗಿಯಾದರು. ರೈತ ದೇಶದ ಬೆನ್ನೆಲುಬು. ಹಳ್ಳಿಗಳು ದೇಶದ ಜೀವಾಳ. ಭಾರತ ಅಭಿವೃದ್ಧಿ ಹೊಂದಬೇಕಾದ್ರೆ ಗ್ರಾಮೋದ್ಯೋಗದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಉತ್ಸವ ಹಮ್ಮಿಕೊಳ್ಳಲಾಗಿತ್ತು.

2 ದಿನಗಳ ಕಾಲ ನಡೆದ ಉತ್ಸವದಲ್ಲಿ ಬ್ರಿಟನ್, ಜಪಾನ್ ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದರು. ಇಷ್ಟೇ ಅಲ್ಲದೆ, 10ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಹಾಗೂ 500ಕ್ಕೂ ಹೆಚ್ಚು ಹೂಡಿಕೆದಾರರು ಪಾಲ್ಗೊಂಡರು.

ಸತ್ಯಸಾಯಿ ವಿವಿಯ ಸಂಸ್ಥಾಪಕರಾದ ಸದ್ಗುರು ಮಧುಸೂದನ್ ಅವರು ಎಕ್ಸಿಬೀಷನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಗ್ರಾಮ ಸ್ವರಾಜ್ ಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

ಭಾರತದಲ್ಲಿ ಕೃಷಿ ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದೆ. ಹೀಗಾಗಿ ಇದಕ್ಕೆ ಬೇಕಾದ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.

ಹಳ್ಳಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನಡೆದ ಉತ್ಸವದಿಂದ ಗ್ರಾಮಗಳಲ್ಲಿ ಹೊಸ ಬೆಳಕು ಮೂಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sat, 12 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು