ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ -60 ರೆವೆನ್ಯೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆ

ಸರ್ಕಾರ 15 ತಹಶಿಲ್ದಾರ್ ಗಳ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಕ್ರಮದ ತನಿಖೆಗೆ ಸೂಚನೆ ನೀಡಿದ್ದು ಮೊದಲ ಹಂತವಾಗಿ ಮೂಡಿಗೆರೆ ಕಡೂರಿನಲ್ಲಿ ತನಿಖೆ ಆರಂಭವಾಗಿದ್ದು. ಜಿಲ್ಲೆಯಾದ್ಯಂತ ತನಿಖೆ ನಡೆಯಲಿದೆ. ವಿಶೇಷ ತಂಡ ಒಂದೊಂದೇ ತಾಲೂಕಿನಲ್ಲಿ ನಡೆದಿರುವ ಅಕ್ರಮದ ದಾಖಲೆಗಳನ್ನ ಸಂಗ್ರಹ ಮಾಡಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ ಮಾಡಲಿದೆ. ರಾಜ್ಯದ ಅತಿ ದೊಡ್ಡ ಕಂದಾಯ ಭೂಮಿ ಹಗರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, 60 ಕಂದಾಯ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

Important Highlight‌
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ -60 ರೆವೆನ್ಯೂ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂದಾಯ ಭೂಮಿ ಹಗರಣ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on:Aug 22, 2023 | 11:09 AM

ಚಿಕ್ಕಮಗಳೂರು: ರಾಜ್ಯದಲ್ಲೇ ಅತಿದೊಡ್ಡ ಕಂದಾಯ ಭೂಮಿ ಅಕ್ರಮದ ಬಗ್ಗೆ ತನಿಖೆ‌ ಆರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ರಾಜ್ಯದ ಅತಿ ದೊಡ್ಡ ಸಾವಿರಾರು ಕೋಟಿ ಮೌಲ್ಯದ ಸಾವಿರಾರು ಎಕರೆ ಕಂದಾಯ ಭೂ ಹಗರಣದ (land encroachment Investigation) ತನಿಖೆಗೆ ರಾಜ್ಯ ಸರ್ಕಾರ 15 ತಹಶಿಲ್ದಾರ್ ಗಳ ನೇತೃತ್ವದ (revenue officials) ವಿಶೇಷ ತಂಡ ರಚನೆ ಮಾಡಿತ್ತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಹಂತವಾಗಿ ಕಡೂರು ಮೂಡಿಗೆರೆ ತಾಲೂಕಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ವಿಶೇಷ ತಂಡ ತನಿಖೆ ಆರಂಭ ಮಾಡಿದ್ದು, ಕಡೂರು ತಾಲೂಕಿನಲ್ಲಿ ನಡೆದಿರುವ ಕಂದಾಯ ಭೂಮಿಯ ಅಕ್ರಮದ ಬ್ರಹ್ಮಾಂಡ ಭ್ರಷ್ಟಾಚಾರದ ತನಿಖಾ ವರದಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಕೈ ಸೇರಿದೆ (Chikkamagalur revenue land encroachment).

ಕಡೂರು ತಾಲೂಕಿನಲ್ಲಿ ನಡೆದ ಕಂದಾಯ ಭೂಮಿಯ ಬ್ರಹ್ಮಾಂಡ ಭ್ರಷ್ಟಾಚಾರದ ತನಿಖೆಯ ವರದಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಕೈ ಸೇರಿದೆ. 15 ತಹಶಿಲ್ದಾರ್ಗಳ ನೇತೃತ್ವದ ವಿಶೇಷ ತನಿಖಾ ತಂಡ ಕಡೂರು ತಾಲೂಕಿನಲ್ಲಿ ನಡೆದ ಅಕ್ರಮದ ಬಗ್ಗೆ ವರದಿ ಸಿದ್ದ ಪಡಿಸಿದ್ದು ಅಕ್ರಮದಲ್ಲಿ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಸೇರಿದಂತೆ 60 ಸರ್ಕಾರಿ ಅಧಿಕಾರಿಗಳು ಭಾಗಿಯಾಗಿರುವ ಅಂಶ ಬೆಳಕಿಗೆ ಬಂದಿದೆ. ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಅಯ್ಯನಕೆರೆ ,ಮದಗದಕೆರೆ ಸುತ್ತಮುತ್ತಲಿನಲ್ಲಿ ಮೂರು ಸಾವಿರಾರು ಎಕರೆ ಗೋಮಾಳ, ಕಂದಾಯ ಭೂಮಿಯನ್ನ ಪ್ರಭಾವಿ ವ್ಯಕ್ತಿಗಳು ಹಿರಿಯ ಸರ್ಕಾರಿ ಅಧಿಕಾರಿಗಳ‌ ಹೆಸರಿಗೆ ಪರಭಾರೆ ಮಾಡಿ ನಕಲಿ ದಾಖಲೆ ಸೃಷ್ಟಿ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.ತನಿಖಾ ವರದಿಯನ್ನ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸರ್ಕಾರಕ್ಕೆ ಕಳಿಸಿ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ದೂರು ನೀಡಿ ಕಾನೂನು ಕ್ರಮಕ್ಕೆ ಸಿದ್ದತೆ ನಡೆಸಿದ್ದು. ಕಡೂರು ತಾಲೂಕಿನ ಹಿಂದಿನ ತಹಶಿಲ್ದಾರ್ ಉಮೇಶ್ ವಿರುದ್ಧ ಡಿ.ಸಿ ಸೂಚನೆ ಮೇರೆಗೆ ಪ್ರಕರಣ ದಾಖಲಾಗಿದೆ.

ರಾಜ್ಯದ ಅತಿ ದೊಡ್ಡ ಕಂದಾಯ ಭೂಮಿ ಹಗರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ, ಏನಿದು ಹಗರಣ:

ಕಾಫಿನಾಡು ಚಿಕ್ಕಮಗಳೂರು ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ ಮಲೆನಾಡು ‌, ಅರೆ ಮಲೆನಾಡು, ಬಯಲು ಸೀಮೆ ಭಾಗದಿಂದ ಕೂಡಿದ್ದು . ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭೂಮಿಗೆ ಚಿನ್ನದ ಬೆಲೆ ಇದೆ. ಸರ್ಕಾರಿ ಕಂದಾಯ ಭೂಮಿ ಗೋಮಾಳಗಳ ಮೇಲೆ ಕಣ್ಣಿಟ್ಟು ಪ್ರಭಾವಿಗಳು, ರಾಜಕೀಯ ಮುಖಂಡರು, ಹಿರಿಯ ಸರ್ಕಾರಿ ಅಧಿಕಾರಿಗಳು ತಾಲೂಕು ಕಂದಾಯ ಅಧಿಕಾರಿಗಳ ಸಹಾಯ ಪಡೆದು ನಕಲಿ‌ ದಾಖಲೆ ಸೃಷ್ಟಿ ಮಾಡಿ ಸಾವಿರರು ಎಕರೆ ಭೂಮಿಯನ್ನ ಫಾರಂ 50,53,57 ರಲ್ಲಿ ತಮ್ಮ ಹೆಸರಿಗೆ ಖಾತೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕಂದಾಯ ಅಧಿಕಾರಿಗಳು ಸರ್ಕಾರ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿದ್ರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ಮೌಲ್ಯದ ಭೂಮಿಯೇ ಕೈ ತಪ್ಪಿದೆ.

ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಕಂದಾಯ ಭೂಮಿ ಹಗರಣ

ಕಡೂರು ತಾಲೂಕಿನಲ್ಲಿ ನಿತ್ಯವೂ ನಿರಂತರವಾಗಿ ಗ್ರಾಮಗಳಲ್ಲಿ ಗೋಮಾಳ ಭೂಮಿ ಒತ್ತುವರಿ ಬಗ್ಗೆ ದೂರುಗಳು ಜಿಲ್ಲಾಡಳಿತಕ್ಕೆ ಬಂದ ಹಿನ್ನೆಲೆ ಕಡೂರು ತಾಲೂಕಿನಲ್ಲಿ ತನಿಖೆ ನಡೆಸಿದಾಗ ಗೋಮಾಳ ಭೂಮಿ ಜೊತೆ ಕಂದಾಯ ಭೂಮಿಗಳಿಗೂ ಫಾರಂ ನಂಬರ್ 50,53 ,57 ರಲ್ಲಿ ಖಾತೆ ಆಗಿರುವುದು ಬೆಳಕಿಗೆ ಬಂದಿತ್ತು. ಹಿಂದಿನ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ವರದಿ ಸಿದ್ದ ಪಡಿಸಿ ಸರ್ಕಾರಕ್ಕೆ ಕಳಿಸಿದ್ರು. ಇದ್ರಿಂದ ಎಚ್ಚೆತ್ತುಕೊಂಡ ಸರ್ಕಾರ ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು.

ಚಿಕ್ಕಮಗಳೂರು ಜಿಲ್ಲೆ ಕಂದಾಯ ಭೂಮಿ ಹಗರಣ- ಸರ್ಕಾರಿ ಶಾಲೆ‌, ಕಟ್ಟಡ ನಿರ್ಮಾಣಕ್ಕೂ ಸರ್ಕಾರಿ ಭೂಮಿ ಕೊರತೆ:

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗ್ರಾಮಗಳಲ್ಲಿ ಸರ್ಕಾರಿ ಕಟ್ಟಡ ,ಶಾಲೆ ಆಸ್ಪತ್ರೆ ನಿರ್ಮಾಣಕ್ಕೂ ಭೂಮಿ ಇಲ್ಲದಂತ ಸ್ಥಿತಿ ನಿರ್ಮಾಣವಾಗಿದ್ದು. ಕಂದಾಯ , ಗೋಮಾಳ ಭೂಮಿಯನ್ನ ಪ್ರಭಾವಿ ವ್ಯಕ್ತಿಗಳು ಸೇರಿದಂತೆ ರಾಜಕೀಯ ಮುಖಂಡರು ಹಿರಿಯ ಅಧಿಕಾರಿಗಳು ಗುಳುಂ ಮಾಡಿದ್ದಾರೆ. ಸತ್ತ ವ್ಯಕ್ತಿ, ವಿದೇಶಗಳಲ್ಲಿ ನೆಲೆಸಿರುವವರ ಹೆಸರಿನಲ್ಲೂ ಖಾತೆಗಳನ್ನ ಕಂದಾಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ಭೂಮಿ ಪರಭಾರೆ ಮಾಡಿದ್ದು ಸರ್ಕಾರ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದೆ.

ಕಂದಾಯ ಭೂಮಿ ಹಗರಣ- ಹಂತ ಹಂತವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತನಿಖೆ

ಸರ್ಕಾರ 15 ತಹಶಿಲ್ದಾರ್ ಗಳ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಕ್ರಮದ ತನಿಖೆಗೆ ಸೂಚನೆ ನೀಡಿದ್ದು ಮೊದಲ ಹಂತವಾಗಿ ಮೂಡಿಗೆರೆ ಕಡೂರಿನಲ್ಲಿ ತನಿಖೆ ಆರಂಭವಾಗಿದ್ದು. ಜಿಲ್ಲೆಯಾದ್ಯಂತ ತನಿಖೆ ನಡೆಯಲಿದೆ. ವಿಶೇಷ ತಂಡ ಒಂದೊಂದೇ ತಾಲೂಕಿನಲ್ಲಿ ನಡೆದಿರುವ ಅಕ್ರಮದ ದಾಖಲೆಗಳನ್ನ ಸಂಗ್ರಹ ಮಾಡಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಕೆ ಮಾಡಲಿದೆ.

ಚಿಕ್ಕಮಗಳೂರು ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 am, Tue, 22 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು