ಆಡಳಿತ ವೈಫಲ್ಯ, ಸಾರ್ವಜನಿಕರಿಂದ ದೂರು: ಜಿಲ್ಲಾ ಸರ್ಜನ್​ ಅಮಾನತ್ತಿಗೆ ಆದೇಶಿಸಿದ ಸಚಿವ ದಿನೇಶ್ ಗುಂಡೂರಾವ್

Chitradurga News: ಆಡಳಿತ ವೈಫಲ್ಯ ಮತ್ತು ಸಾರ್ವಜನಿಕರಿಂದ ದೂರು ಹಿನ್ನೆಲೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್​ನನ್ನು ಅಮಾನತ್ತುಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಆದೇಶ ಹೊರಡಿಸಿದ್ದಾರೆ.

Important Highlight‌
ಆಡಳಿತ ವೈಫಲ್ಯ, ಸಾರ್ವಜನಿಕರಿಂದ ದೂರು: ಜಿಲ್ಲಾ ಸರ್ಜನ್​ ಅಮಾನತ್ತಿಗೆ ಆದೇಶಿಸಿದ ಸಚಿವ ದಿನೇಶ್ ಗುಂಡೂರಾವ್
ಅಮಾನತ್ತಾದ ಜಿಲ್ಲಾ ಸರ್ಜನ್ ಡಾ.ಬಸವರಾಜ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2023 | 6:41 PM

ಚಿತ್ರದುರ್ಗ, ಆಗಸ್ಟ್​ 05: ಆಡಳಿತ ವೈಫಲ್ಯ ಮತ್ತು ಸಾರ್ವಜನಿಕರಿಂದ ದೂರು ಹಿನ್ನೆಲೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್​ನನ್ನು ಅಮಾನತ್ತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಡಾ. ಬಸವರಾಜ ಅಮಾನತ್ತಾದ ಸರ್ಜನ್​. ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಹೆರಿಗೆ ವಾರ್ಡ್, ಎಕ್ಸ್​ ರೇ ಸೇರಿ ಹಲವೆಡೆ ಲಂಚಕ್ಕೆ ಬೇಡಿಕೆ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದಾರೆ.

ಬಳಿಕ ಡಿಸಿ ದಿವ್ಯಪ್ರಭುರಿಂದ ಮಾಹಿತಿ ಪಡೆದ ಸಚಿವ ದಿನೇಶ್ ಗುಂಡೂರಾವ್, ಹಲವು ದೂರುಗಳು, ಆಡಳಿತ ವೈಫಲ್ಯ ಕಂಡು ಬಂದಿದ್ದರಿಂದ ಸರ್ಜನ್ ಡಾ. ಬಸವರಾಜ ಅಮಾನತ್ತಿಗೆ ಸಚಿವರು ಸೂಚಿಸಿದ್ದಾರೆ.

ಭ್ರಷ್ಟಾಚಾರ ಸಹಿಸಲ್ಲ: ಗರಂ ಆದ ಸಚಿವ ದಿನೇಶ ಗುಂಡೂರಾವ್

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ 5 ಜನ ತೀರಿ ಹೋಗಿದ್ದಾರೆ. ನೀರಿನ ಕಲುಷಿತದಿಂದ ತೀರಿ ಹೋಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ಮಾಡಲು ಹೇಳಿದ್ದೇವೆ. ಜಿಲ್ಲಾಸ್ಪತ್ರೆಗೂ ಕೂಡ ಭೇಟಿ ಕೊಟ್ಟಿದ್ದೆ. ಅಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿತ್ತು. ಹಾಗಾಗಿ ಅಲ್ಲಿನ ಸರ್ಜನ್​ನ್ನು ಅಮಾನತು ಮಾಡಲು ಹೇಳಿದ್ದೇನೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಆಸ್ಪತ್ರೆಗೆ ತಂಡ ಕಳುಹಿಸಲು ಹೇಳಿದ್ದೇನೆ. ಅಲ್ಲಿ ಇಷ್ಟು ದೂರು ಬರಲು ಕಾರಣ ಏನು ಎಂದು ವರದಿ ಕೊಡಲು ಹೇಳಿದ್ದೇನೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಬಗ್ಗೆ ಸಾಕಷ್ಟು ದೂರು ಬಂದಿದ್ದವು. ರೋಗಿಗಳು ಸಂಬಂಧಿಕರು ಸಾಕಷ್ಟು ಆರೋಪ ಮಾಡಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡಿದ್ದಾರೆ.

ಐವರ ಸಾವು ಸಂಭವಿಸಿದ್ದಲ್ಲ, ಸರ್ಕಾರದ ಕೊಲೆಯಿದು: ಪ್ರಮೋದ್ ಮುತಾಲಿಕ್

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಸರ್ಕಾರದ ಬೇಜವಾಬ್ದಾರಿ ಕಾಣಿಸುತ್ತಿದೆ. ಘಟನೆಯಾಗಿ ಒಂದು ವಾರದ ಬಳಿಕ ಆರೋಗ್ಯ ಸಚಿವರು ಭೇಟಿ ನೀಡಿಲ್ಲ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಸೌಕರ್ಯವಿಲ್ಲ. ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆಯ ಆಗರ ಆಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಸರ್ಕಾರಕ್ಕೆ ಐನೂರು ಜನರಿಗೆ ಚಿಕಿತ್ಸೆ ಕೊಡುವ ಶಕ್ತಿಯಿಲ್ಲವೇ? ಬಸವೇಶ್ವರ ಆಸ್ಪತ್ರೆಗೆ ವೈದ್ಯಕೀಯ ಸಿಬ್ಬಂದಿ ನೀಡಬೇಕು. ಐವರ ಸಾವು ಸಂಭವಿಸಿದ್ದಲ್ಲ, ಸರ್ಕಾರದ ಕೊಲೆಯಿದು. ಮೃತರ ಕುಟುಂಬಕ್ಕೆ ತಲಾ 25ಲಕ್ಷ ರೂ. ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು