ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು; ಕೈ ಮುಖಂಡ ಮಿಥುನ್ ರೈ ಮತ್ತು ಬೆಂಬಲಿಗರಿಂದ ಗಲಾಟೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್​ನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ. ಅದರಂತೆ, ಎರಡೂ ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲಾಗಿದ್ದು, ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಮುಖಭಂಗವಾಗಿದೆ.

Important Highlight‌
ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು; ಕೈ ಮುಖಂಡ ಮಿಥುನ್ ರೈ ಮತ್ತು ಬೆಂಬಲಿಗರಿಂದ ಗಲಾಟೆ
ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಗೆದ್ದ ಬಿಜೆಪಿ ಬೆಂಬಲಿತ ಸದಸ್ಯರು, ಕಾಂಗ್ರೆಸ್ ಬೆಂಬಲಿಗರಿಂದ ಗಲಾಟೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Aug 11, 2023 | 9:49 PM

ಮಂಗಳೂರು, ಆಗಸ್ಟ್ 11: ಗೊಂದಲದ ಗೂಡಾಗಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಲ್ಕಿ ತಾಲೂಕಿನ ಹಳೆಯಂಗಡಿ (Haleyangadi) ಗ್ರಾಮ ಪಂಚಾಯತ್​ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯೆಯ ಸದಸ್ಯತ್ವ ರದ್ದು ಮಾಡಿರುವುದರಿಂದ ಬಿಜೆಪಿ (BJP) ಬೆಂಬಲಿತ ಸದಸ್ಯರು ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಇತ್ತ, ಮುಖಭಂಗ ಅನುಭವಿಸಿದ ಕಾಂಗ್ರೆಸ್ (Congress) ಮುಖಂಡ ಮಿಥುನ್ ರೈ (Mithun Rai) ಮತ್ತು ಬೆಂಬಲಿಗರು ಗಲಾಟೆ ನಡೆಸಿದ್ದಾರೆ.

ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್​​ಗಳಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು 11 ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು 11 ಮಂದಿ ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದ ಚೀಟಿ ಎತ್ತುವ‌ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರದ ಪಟ್ಟ ಒಲಿದಿತ್ತು.

ಬಿಜೆಪಿ ಬೆಂಬಲಿತರ ಎರಡೂವರೆ ವರ್ಷಗಳ ಅಧಿಕಾರದ ಬಳಿಕ ಈ ಬಾರಿ ಬದಲಾದ ವಿದ್ಯಮಾನಗಳಲ್ಲಿ ಬಿಜೆಪಿ ಬೆಂಬಲಿತ ಓರ್ವ ಸದಸ್ಯೆ ಕಾಂಗ್ರೆಸ್ ಬೆಂಬಲಿತ ಸದಸ್ಯರ ಜೊತೆ ಗುರುತಿಸಿಕೊಂಡಿದ್ದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?

ಬದಲಾದ ವಿದ್ಯಾಮಾನದಲ್ಲಿಯೂ ಸಮಬಲವಾಗಿದ್ದು ಮಾತ್ರವಲ್ಲದೆ, ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಬ್ರಷ್ಟಾಚಾರ ಆರೋಪದ ಕಾರಣ ಅವರ ಸದಸ್ಯತ್ವ ರದ್ದಾಗಿತ್ತು. ಕೋರ್ಟ್ ತೀರ್ಪಿನ ಪ್ರಕಾರ, ಆ ಮಹಿಳೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ಕಾರ್ಯಕರ್ತರ ವಾದವಾದವಾದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೇಸ್ ಕಾರ್ಯಕರ್ತರ ವಾದವಾಗಿತ್ತು.

ಈ ಕಾರಣದಿಂದ ಇಂದು ಬೆಳಗ್ಗೆ ಸ್ಥಳದಲ್ಲಿ ಕಾಂಗ್ರೇಸ್ ಬಿಜೆಪಿ ಸದಸ್ಯರು ಜಮಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮದ್ಯಾಹ್ನ 12 ಗಂಟೆಗೆ ಚುನಾವಣಾ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಮಾಹಿತಿ ಪಡೆದು ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯೆಯನ್ನು ಹೊರಗಿಟ್ಟು ಚುನಾವಣಾ ಪ್ರಕ್ರಿಯೆ ನಡೆಸಿದರು.

ಅದರಂತೆ ಬಿಜೆಪಿ ಬೆಂಬಲಿತರು ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಲಾರಂಭಿಸಿದರು. ಇನ್ನೊಂದೆಡೆ ಕಾಂಗ್ರೇಸ್ ಬೆಂಬಲಿತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಮಧ್ಯೆ ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿ ಪರೀಸ್ಥಿಯನ್ನು ಹತ್ತೋಟಿಗೆ ತಂದರು. ಮದ್ಯಾಹ್ನದಿಂದಲ್ಲೇ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಿಥುನ್ ರೈ ಸ್ಥಳದಲ್ಲಿ ಇದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು