ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸ್ವಾತಂತ್ರ್ಯ ವೀರ್ ಸಾವರ್ಕರ್ಗೆ ಜೈ ಘೋಷಣೆ ಹಾಕಿಸಿದ್ದಕ್ಕೆ ಶಿಕ್ಷಕಿ ಕ್ಷಮೆ ಕೇಳುವಂತೆ ಕೆಲ ಪೋಷಕರು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಸಿ ಕ್ಷಮೆಯಾಚಿಸಿದ್ದಾರೆ.
ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ (Independence Day) ಮಕ್ಕಳಿಂದ ಸ್ವಾತಂತ್ರ್ಯ ವೀರ್ ಸಾವರ್ಕರ್ಗೆ (Savarkar) ಜೈ ಘೋಷಣೆ ಹಾಕಿಸಿದ್ದಕ್ಕೆ ಶಿಕ್ಷಕಿ ಕ್ಷಮೆ ಕೇಳುವಂತೆ ಕೆಲ ಪೋಷಕರು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಪೋಷಕರ ಮತ್ತು ಶಿಕ್ಷಕರ ಸಭೆ ನಡೆಸಿ ಕ್ಷಮೆಯಾಚಿಸಿದ್ದಾರೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕಿದ್ದರು.
ಈ ವೇಳೆ ಶಿಕ್ಷಕಿಯೊಬ್ಬರು ವೀರ್ ಸಾವರ್ಕರ್ ಅವರಿಗೂ ಜೈ ಕಾರದ ಘೋಷಣೆ ಹಾಕಿಸಿದ್ದಾರೆ. ಈ ಜೈಕಾರವನ್ನು ಅಲ್ಲಿಯೇ ಇದ್ದ ಓರ್ವ ವ್ಯಕ್ತಿ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಕೆಲ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಮುಖ್ಯಶಿಕ್ಷಕಿ ಪೋಷಕರು ಮತ್ತು ಶಿಕ್ಷಕರ ಸಭೆ ಕರೆದಿದ್ದಾರೆ.
ಇದನ್ನೂ ಓದಿ: ಮಂಗಳೂರು: ಆಸ್ಪತ್ರೆಯಲ್ಲಿ ದೈಹಿಕ ಸಂಪರ್ಕ ನಡೆಸುವುದನ್ನು ನೋಡಿದ ಅಪ್ರಾಪ್ತೆ ಮೇಲೆ ಅತ್ಯಾಚಾರ!
ಜೈಕಾರ ಹಾಕಿಸಿದ್ದ ಶಿಕ್ಷಕಿ ವಿರುದ್ಧ ಸಭೆಯಲ್ಲಿ ಪೋಷಕರು ಹಾಗೂ ಕೆಲ ರಾಜಕೀಯ ಮುಖಂಡರು ಗಲಾಟೆ ಮಾಡಿದ್ದಾರೆ. ಕೊನೆಗೆ ಶಿಕ್ಷಕಿ ಪೋಷಕರ ಬಳಿ ಕ್ಷಮೆ ಯಾಚಿಸಿದ್ದಾರೆ. ಆದರೆ ವಿಡಿಯೋ ಮಾಡಿ ಹರಿಬಿಟ್ಟವರ ವಿರುದ್ಧ ಶಾಲಾ ಮುಖ್ಯಶಿಕ್ಷಕಿ ಅಸಮಾಧಾನ ವ್ಯಕ್ತಪಡಿಸಿದ್ದು, ವಿಡಿಯೋ ಮಾಡಿ ಹರಿ ಬಿಟ್ಟವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ