ಮಂಗಳೂರು, (ಆಗಸ್ಟ್ 21): ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದ ಮಂಗಳೂರಿನ (Mangaluru) ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು(Student) ಪೊಲೀಸರು ಬಂಧಿಸಿದ್ದಾರೆ. ಕೇರಳದ ಇಡುಕಿ ಮೂಲದ ಆರೋಪಿ ಬೆನೆಡಿಕ್ಟ್ ಸಾಬು ಬಂಧಿತ ವಿದ್ಯಾರ್ಥಿ. 6 ತಿಂಗಳ ಹಿಂದೆ ಜಿಎನ್ಎಂ ಕೋರ್ಸ್ಗೆ ಸೇರಿದ್ದ ಬೆನೆಡಿಕ್ಟ್ ಸಾಬು, ಕೇರಳದ ಕೃಷಿ ಅಧಿಕಾರಿ ಎಂದು ಪ್ರಿನ್ಸಿಪಾಲ್ ಬಳಿ ಹೇಳಿದ್ದ. ಬಳಿಕ ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ಅಲ್ಲದೇ ಸದ್ಯ RAW ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳಿಕೊಂಡಿದ್ದ. ಬಳಿಕ ಕಾಲೇಜಿನಲ್ಲಿ ಡ್ರಗ್ಸ್ ಅವೇರ್ನೆಸ್ ಕಾರ್ಯಕ್ರಮದ ವೇಳೆ ಬೆನೆಡಿಕ್ಟ್ ಸಾಬು ಅಸಲಿ ಮುಖ ಬೆಳಕಿಗೆ ಬಂದಿದೆ.
ಮೊದಲು ತಾನು ಕೇರಳ ಅಗ್ರಿಕ ರ್ ಇಲಾಖೆಯ ಅಧಿಕಾರಿ ಎಂದು ಕಾಲೇಜಿನ ಪ್ರಿನ್ಸಿಪಾಲ್ ಗೆ ತಿಳಿಸಿದ್ದ ವಿದ್ಯಾರ್ಥಿ, ನಂತರ ಕೇರಳ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಎಂದು ಹೇಳಿ ಕೊಂಡಿದ್ದ. ಆದ್ರೆ, ಕಾಲೇಜಿನಲ್ಲಿ ನಲ್ಲಿ ಪೊಲೀಸ್ ಇಲಾಖೆಯಿಂದ ಆಯೋಸಲಾಗಿದ್ದ ಡ್ರಗ್ ಜಾಗೃತಿ ಕಾರ್ಯಕ್ರಮದ ವೇಳೆ ಬೆನೆಡಿಕ್ಟ್ ಸಾಬು ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿದೆ. ಕಾರ್ಯಕ್ರಮ ಮುಗಿದ ಬಳಿಕ ಪೊಲೀಸರು ವಿದ್ಯಾರ್ಥಿ ಬೆನೆಡಿಕ್ಟ್ ಸಾಬುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.
ಪೊಲೀಸರಿಗೂ ಸಹ ತಾನು RAW ಅಧಿಕಾರಿ ಎಂದು ಹೇಳಿಕೊಂಡಿದ್ದ. ಸಾಲದಕ್ಕೆ ಪೊಲೀಸ್ ಸಮವಸ್ತ್ರವನ್ನು ಹೊಲಿಸಿಕೊಂಡಿದ್ದ. ಇದರಿಂದ ಅನುಮಾನಗೊಂಡು ಉರ್ವಾ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆನೆಡಿಕ್ಟ್ ಸಾಬು ಮುಖವಾಡ ಬಟಾಬಯಲಾಗಿದೆ, ಬಂಧಿತನಿಂದ ನಕಲಿ ಐಡಿ ಕಾರ್ಡ್ಗಳು, ಪೊಲೀಸ್ ಸಮವಸ್ತ್ರ, ಮೊಬೈಲ್, ಲ್ಯಾಪ್ಟಾಪ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ