ದಾವಣಗೆರೆ, ಆಗಸ್ಟ್ 7: ಶಾಸಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರವು ದಾವಣಗೆರೆ (Davanagere) ಎಸ್ಪಿ ಡಾ.ಕೆ.ಅರುಣ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದೆ. ಹೊನ್ನಾಳಿ ಶಾಸಕ ಡಿಜಿ ಶಾಂತನಗೌಡ ಅವರು ಎಸ್ಪಿಯನ್ನು ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಒತ್ತಾಯಿಸಿದ್ದರು. ಅದರಂತೆ, ಕುಲಬುರ್ಗಿ (Kalaburagi) ಪೊಲೀಸ್ ತರಬೇತಿ ಶಾಲೆ ಪ್ರಾಚಾರ್ಯರಾಗಿ ಅರುಣ್ ಅವರನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
2014 ರ ಕರ್ನಾಟಕ ಕೆಡರ್ ಐಪಿಎಸ್ ಅಧಿಕಾರಿ ಡಾ. ಅರುಣ್, ಈ ಹಿಂದೆ ಚಿತ್ರದುರ್ಗ, ವಿಜಯನಗರ, ಕಲಬುರ್ಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ ಎಪ್ರೀಲ್ ಅಂತ್ಯದಲ್ಲಿ ದಾವಣಗೆರೆ ಎಸ್ಪಿಯಾಗಿ ವರ್ಗಾವಣೆಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಮತ್ತೆ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಹೈಡ್ರಾಮ: ಬಿಜೆಪಿ ಬೆಂಬಲಿತ ಸದಸ್ಯರಿಂದ ಅಹೋರಾತ್ರಿ ಧರಣಿ
ಇತ್ತೀಚೆಗಷ್ಟೇ, ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಟಿ ಅವರನ್ನು ಬಳ್ಳಾರಿಗೆ ವರ್ಗಾವಣೆ ಮಾಡಲಾಗಿತ್ತು. ವೆಂಕಟೇಶ್ ಅವನರನ್ನು ತಮ್ಮ ಜಿಲ್ಲೆಗೆ ಡಿಸಿಯನ್ನಾಗಿ ಮಾಡಲು ಜಿಲ್ಲಾ ಉಸ್ತುವಾರಿ ಬಿ ನಾಗೇಂದ್ರ ಅವರು ಒಲವು ಹೊಂದಿದ್ದರು. ಆದರೆ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡ ಹಿನ್ನೆಲೆ ವರ್ಗಾವಣೆಗೆ ತಡೆ ನೀಡಲಾಗಿತ್ತು. ವರ್ಗಾವಣೆ ಸಂಬಂಧ ಇಂತಹ ಅನೇಕ ಘಟನೆಗಳು ನಡೆದಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ