ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ಕೇಳಿದ ಲೋಕಾಯುಕ್ತ
ಚೆನ್ನಗಿರಿ ಮಾಜಿ ಬಿಜೆಪಿ ಶಾಸಕ ಮಾಡಲ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರನ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷಿ ಸಂಗ್ರಹಿಸಿದ್ದು, ಇಬ್ಬರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಬೆಂಗಳೂರು, ಆಗಸ್ಟ್ 11: ಲಂಚ ಪಡೆದ ಆರೋಪ ಸಂಬಂಧ ಲೋಕಾಯುಕ್ತ (Lokayukta) ಅಧಿಕಾರಿಗಳಿಂದ ಬಂಧಿತರಾಗಿರುವ ಚನ್ನಗಿರಿ ಮಾಜಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಮತ್ತು ಅವರ ಪುತ್ರ ಪ್ರಶಾಂತ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ. ಅದರಂತೆ ಸರ್ಕಾರದ ಉನ್ನತ ಸ್ಥಾನಗಳಲ್ಲಿದ್ದ ತಂದೆ ಹಾಗೂ ಮಗನ ವಿರುದ್ಧ ಕೈಗೊಳ್ಳಬೇಕಾದ ಕಾನೂನು ಪ್ರಕ್ರಿಯೆ ಬಗ್ಗೆ ಪತ್ರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.
Prevention of corruption act (19) ಅಡಿ permission sanction order ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಮಾಡಾಳ್ ವಿರೂಪಾಕ್ಷಗೆ ಸಂಬಂಧಿಸಿದಂತೆ ಸ್ಪೀಕರ್ ಹಾಗೂ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ಗೆ ಸಂಬಂಧಿಸಿದಂತೆ ಡಿಪಿಆರ್ ಸೆಕ್ರೆಟರಿಗೆ ಪತ್ರ ನೀಡಲಾಗಿದೆ. ಸದ್ಯ ಪತ್ರಕ್ಕೆ ಉತ್ತರ ನೀಡಲು ಇನ್ನು ಮೂರು ತಿಂಗಳ ಅವಕಾಶವಿದೆ. ಹೀಗಾಗಿ ಅನುಮತಿ ಬಂದ ನಂತರವಷ್ಟೇ ಇಬ್ಬರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ.
ಇದನ್ನೂ ಓದಿ: ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ
ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದ ಪ್ರಶಾಂತ್ ಮಾರ್ಚ್ 3ರಂದು ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ ಅಧ್ಯಕ್ಷರಾಗಿದ್ದ ತಂದೆಯ ಪರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದರ ಮುಂದುವರಿದ ಭಾಗವಾಗಿ ಡಾಲರ್ಸ್ ಕಾಲೋನಿಯ ನಿವಾಸ ಸೇರಿದಂತೆ ಮಾಡಲ್ ವಿರೂಪಾಕ್ಷಪ್ಪ ಮನೆ ಕಚೇರಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆಸಿತ್ತು.
ಈ ವೇಳೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಆರು ಕೋಟಿಗೂ ಅಧಿಕ ನಗುದು ಹಣ ಪತ್ತೆಯಾಗಿತ್ತು. ಇದಾದ ಬಳಿಕ ಕೆಎಎಸ್ ಅಧಿಕಾರಿ ಪ್ರಶಾಂತ್ ಬಂಧಿಸಿದ್ದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸಿಕ್ಕ ಸಾಕ್ಷಿಗಳನ್ನು ಆದರಿಸಿ ಮಾಡಲ್ ವಿರೂಪಾಕ್ಷಪ್ಪ ಅವರನ್ನು ಸಹ ಬಂಧಿಸಿದ್ದರು.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಂಡರ್ ಲಂಚ ಹಾಗೂ ಭ್ರಷ್ಟಾಚಾರ ವಿಚಾರವಾಗಿ ಹಲವು ವ್ಯಕ್ತಿಗಳ ವಿಚಾರಣೆ ಹಾಗೂ ಸಾಕ್ಷಿಗಳ ಸಂಗ್ರಹಿಸಿ ಆರೋಪಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಚಾರ್ಜ್ಶೀಟ್ ಸಿದ್ಧಪಡಿಸಿದ್ದು, ಸ್ಪೀಕರ್ ಹಾಗೂ ಡಿಪಿಆರ್ ಸೆಕ್ರೆಟರಿ ಅನುಮತಿಗಾಗಿ ಕಾದು ಕುಳಿತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ