ಹುಬ್ಬಳ್ಳಿ, ಆಗಸ್ಟ್ 21: ಪಕ್ಷಕ್ಕೆ ಸೇರಿಸಿಕೊಳ್ಳಲು ಶುರುಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಯಾರೂ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದರು. ನಗರದಲ್ಲಿ ಮಾಧ್ಯವದರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ನಮ್ಮ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡು ಬರುವವರು ಇದ್ದರೆ ಬರಬಹುದು. ದ್ವೇಷದ ರಾಜಕಾರಣ ಮಾಡುವವರು ಬಿಜೆಪಿಯವರು ಎಂದು ವಾಗ್ದಾಳಿ ಮಾಡಿದ್ದಾರೆ.
ಬಡವರು, ಮಧ್ಯಮ ವರ್ಗದವರಿಗೆ ಒಂದೇ ಒಂದು ಯೋಜನೆ ತಂದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಕ್ಕೆ ಕಡಿವಾಣ ಹಾಕುತ್ತಿದ್ದೇವೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪೆನ್ಡ್ರೈವ್ನಲ್ಲಿ ಏನೂ ಹುರುಳಿಲ್ಲ. ಬುಟ್ಟಿಯಲ್ಲಿ ಹಾವಿಟ್ಟು ಹಾವಿದೆ ಹಾವಿದೇ ಎಂದು ಹೆದರಿಸುವ ಮೂಲಕ ಕುಮಾರಸ್ವಾಮಿ ಹತಾಶರಾಗಿದ್ದಾರೆ. ವರ್ಗಾವಣೆ ಎಲ್ಲ ಸರ್ಕಾರದ ಅವಧಿಯಲ್ಲಿಯೂ ಆಗಿದೆ. ಸರಿಯಾದ ದಾಖಲಾತಿ ನೀಡದೇ ಹರಾಜು ಪ್ರಕ್ರಿಯೆ ಎಂದು ಹೇಳುವುದು ಸರಿಯಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರ ಪರ್ವದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಹಾಲಿ ಶಾಸಕ ಶಿವರಾಮ್ ಹೆಬ್ಬಾರ್, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.
ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೂಡ ಬಿಜೆಪಿ ತೊರದು ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ವಿಧಾನಸೌಧದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೇ ಹೊತ್ತಲ್ಲಿ ಸೋಮಶೇಖರ್, ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿಯಾಗಿದ್ದು, ಇದಾದ ಬಳಿಕ ನಿನ್ನೆ ಬೆಂಬಲಿಗರ ಸಭೆ ನಡೆಸಿದ್ದು, ಆಪರೇಷನ್ ಹಸ್ತಕ್ಕೆ ಪುಷ್ಟಿ ನೀಡಿದಂತಿದೆ.
ಇದನ್ನೂ ಓದಿ: ಆಪರೇಷನ್ ಹಸ್ತ ಭೀತಿ; ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು?
ಸೋಮಶೇಖರ್ ಕಾಂಗ್ರೆಸ್ ಹಾದಿಯಲ್ಲೇ ಇದ್ದಾರೆ ಎಂಬುದಕ್ಕೆ ಪುರಾವೆ ನೀಡಿದಂತಿದೆ. ಇಂಟ್ರಸ್ಟಿಂಗ್ ಅಂದರೆ ಸೋಮಶೇಖರ್ ಕರೆದಿದ್ದ ಸಭೆಯಲ್ಲಿ ನೆಲಮಂಗಲದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಕೂಡ ಪ್ರತ್ಯಕ್ಷವಾಗಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.