ಮಳೆಯಿಂದಾಗಿ ಹಾವೇರಿಯಲ್ಲಿ ಹದಗೆಟ್ಟ ಸಾರ್ವಜನಿಕ ಶೌಚಾಲಯಗಳು: ಅಧಿಕಾರಿಗಳ ವಿರುದ್ದ ಜನರ ಹಿಡಿಶಾಪ

ಜಿಲ್ಲೆಯಲ್ಲಿ ಸರಿಯಾದ ನಿರ್ವಹಣೆ ಮಾಡದ ಹಿನ್ನಲೆ ಸಾರ್ವಜನಿಕ ಶೌಚಾಲಯಗಳು ಹದಗೆಟ್ಟಿದ್ದು, ಜನರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

Important Highlight‌
ಮಳೆಯಿಂದಾಗಿ ಹಾವೇರಿಯಲ್ಲಿ ಹದಗೆಟ್ಟ ಸಾರ್ವಜನಿಕ ಶೌಚಾಲಯಗಳು: ಅಧಿಕಾರಿಗಳ ವಿರುದ್ದ ಜನರ ಹಿಡಿಶಾಪ
ಪ್ರಾತಿನಿಧಿಕ ಚಿತ್ರ
Follow us
Suraj Mahaveer Utture
| Updated By: Kiran Hanumant Madar

Updated on:Jul 25, 2023 | 12:12 PM

ಹಾವೇರಿ,ಜು.25: ಜಿಲ್ಲೆಯಲ್ಲಿ ಸರಿಯಾದ ನಿರ್ವಹಣೆ ಮಾಡದ ಹಿನ್ನಲೆ ಸಾರ್ವಜನಿಕ ಶೌಚಾಲಯಗಳು(Public Toilets) ಹದಗೆಟ್ಟಿದ್ದು, ಜನರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಗರದಲ್ಲಿ ಹೆಚ್ಚಾಗಿ ಸಾರ್ವಜನಿಕ ಶೌಚಾಲಯಗಳಿಲ್ಲ, ಇದೀಗ ಇರುವ ಶೌಚಾಲಯಗಳನ್ನೂ ನಿರ್ಲಕ್ಷಿಸಲಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಶೌಚಾಲಯ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೊಂದರೆ ಅನುಭವಿಸುತ್ತಿರುವ ನಗರಕ್ಕೆ ಬರುವ ಮಹಿಳೆಯರು, ಕಾಲೇಜು ಯುವತಿಯರು

ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸ್ವಚ್ಛತೆ ಕಾಪಾಡಲು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿವೆ. ಜೊತೆಗೆ ‘ಸ್ವಚ್ಛ ಭಾರತ್ ಮಿಷನ್’ ಅಡಿಯಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಆದರೆ, ಹಾವೇರಿ ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸರಿಯಾದ ಶೌಚಾಲಯದ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಹಾವೇರಿಗೆ ಬರುವ ಮಹಿಳೆಯರು ಹಾಗೂ ಕಾಲೇಜು ಯುವತಿಯರು ತೊಂದರೆ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ:ಸಾರ್ವಜನಿಕ ಶೌಚಾಲಯಕ್ಕೆ ಸಂಬಂಧಪಟ್ಟ ಹೈಕೋರ್ಟ್ ನಿರ್ದೇಶನಕ್ಕೆ ಬಿಬಿಎಂಪಿ ಸಿದ್ಧತೆ ಹೇಗಿದೆ ಗೊತ್ತಾ?

ಈ ಕುರಿತು ಸರ್ಕಾರಿ ನೌಕರರಾದ ಸೌಜನ್ಯ ಪಾಟೀಲ್​ ಎಂಬುವವರು ಮಾತನಾಡಿ ‘ಕೆಲವೊಮ್ಮೆ ಶೌಚಾಲಯ ಬಳಸಲು ಹಾವೇರಿ ಬಸ್ ಟರ್ಮಿನಲ್​ಗೆ ಭೇಟಿ ನೀಡಬೇಕಾಗುತ್ತದೆ. ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಶೌಚಾಲಯ ನಿರ್ಮಿಸಿ, ನಿರ್ವಹಣೆ ಮಾಡಬೇಕು’ ಎಂದು ಆಗ್ರಹಿಸಿದರು. ಇನ್ನು ನಗರದ ಮಾಕನ್ ಗಲ್ಲಿ, ನಾಗೇಂದ್ರನಮಟ್ಟಿ, ಪುರದ ಓಣಿ, ಮುಲ್ಲಾನ ಟ್ಯಾಂಕ್ ಬಳಿ ಮತ್ತಿತರ ಕಡೆಗಳಲ್ಲಿ ಶೌಚಾಲಯಗಳಿದ್ದು, ನಿರ್ವಹಣೆಯ ಕೊರತೆಯಿಂದ ಉಪಯೋಗಿಸಲಾಗುತ್ತಿಲ್ಲ.

ಜಿಲ್ಲೆಯಲ್ಲಿ ನಿರಂತರ ಮಳೆಗೆ ಸೋರುತ್ತಿರುವ ಹಾವೇರಿ ಜಿಲ್ಲಾಸ್ಪತ್ರೆ

ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಹಾವೇರಿ ಜಿಲ್ಲಾಸ್ಪತ್ರೆಯ2 ನೇ ಮಹಡಿಯಲ್ಲಿರುವ ಮಕ್ಕಳ ವಾರ್ಡ್ ಸೋರುತ್ತಿದೆ. ಶೀತ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ಬಂದರೆ, ಅದರ ಮಳೆ ಹನಿಯ ಕಾಟ ಎದುರಾಗಿದೆ. ಇನ್ನು ಸೋರುತ್ತಿರುವ ಜಾಗಗಳಲ್ಲಿ ಬಕೆಟ್ ಇಟ್ಟು, ಸಿಬ್ಬಂದಿಗಳು ನೀರು ಹೊರ ಹಾಕುತ್ತಿದ್ದಾರೆ. ಇದರಿಂದ ರೋಗ ವಾಸಿಗೆ ಬಂದ ರೋಗಿಗಳಿಗೆ ಮತ್ತೊಷ್ಟು ರೋಗ ಹರಡುವ ಭೀತಿ ಎದುರಾಗಿದೆ. ಜೊತೆಗೆ ನಿನ್ನೆ ರಾತ್ರಿಯಲ್ಲಾ ಹನಿಗಳು ಸೋರುತ್ತಿದ್ದರಿಂದ ಆಸ್ಪತ್ರೆಯಲ್ಲಿದ್ದ ಪೋಷಕರು ನಿದ್ರೆಯಿಲ್ಲದೆ ತಮ್ಮ ಮಕ್ಕಳನ್ನ ಪೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Tue, 25 July 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು