ಕಲಬುರಗಿ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಮತ್ತೆ ಅರೆಸ್ಟ್​, ಯಾವ ಪ್ರಕರಣ?

ಕಲಬುರಗಿ ಜಿಲ್ಲಾ ಬಿಜೆಪಿ ನಾಯಕ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪದಡಿಯಲ್ಲಿ ಅರೆಸ್ಟ್ ಮಾಡಲಾಗಿದ್ದು, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಪೊಲೀಸರ ನಡೆ ಖಂಡಿಸಿ ಬೀದಿಗಿಳಿದಿದ್ದಾರೆ.

Important Highlight‌
ಕಲಬುರಗಿ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ಮತ್ತೆ ಅರೆಸ್ಟ್​, ಯಾವ ಪ್ರಕರಣ?
ಮಣಿಕಂಠ ರಾಠೋಡ್
Follow us
ಸಂಜಯ್ಯಾ ಚಿಕ್ಕಮಠ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:Aug 23, 2023 | 2:04 PM

ಕಲಬುರಗಿ, (ಆಗಸ್ಟ್ 23): ಕಲಬುರಗಿ (Kalaburagi) ಜಿಲ್ಲಾ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (manikanta rathod) ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪ ಪ್ರಕರಣದಡಿಯಲ್ಲಿ ಮಣಿಕಂಠ ರಾಠೋಡ್​ನನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿ ಸೋತಿದ್ದ ಮಣಿಕಂಠ ರಾಠೋಡ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಚಾರ ಆರೋಪದಡಿಯಲ್ಲಿ ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A 505(1)B ಅಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಮೇರೆಗೆ ಇಂದು (ಆಗಸ್ಟ್ 23) ಪೊಲೀಸರು ಮಣಿಕಂಠ ರಾಠೋಡ್​ನನ್ನು ಅರೆಸ್ಟ್ ಮಾಡಿದ್ದಾರೆ.

ಕಲಗುರ್ತಿ ಗ್ರಾಮದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು 1 ತಿಂಗಳಾಗಿದೆ. ಆರೋಪಿಗಳು ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಇದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ. ಪೊಲೀಸರು ಪ್ರಿಯಾಂಕ್ ಖರ್ಗೆ ಕೈಗೊಂಬೆಯಾಗಿದ್ದಾರೆ ಎಂದು ಪೊಲೀಸರ ವಿರುದ್ಧ ಮಣಿಕಂಠ ರಾಠೋಡ್ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ತಪ್ಪು ಸಂದೇಶ ರವಾನೆ ಆರೋಪದ ಮೇಲೆ ಮಣಿಕಂಠ ರಾಠೋಡ್ ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಯಾರಾದ್ರೂ ಹೆದರಿಸಿದ್ರೆ, ಬೆದರಿಸಿದ್ರೆ ಬಗ್ಗುವ ಮಗ ನಾನಲ್ಲ: ಮಣಿಕಂಠ ರಾಠೋಡ್​ಗೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ

ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಇನ್ನು ಮಣಿಕಂಠ ರಾಥೋಡ್​ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಳಿದಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದು, ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಗುರ್ತಿಯ ಯುವಕನ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆಂಬಲಿಗರು ಕಾರಣವಾಗಿದ್ದಾರೆ. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿಲ್ಲ ಎಂದು ಕಿಡಿಕಾರಿದರು.

ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಎಂಬಾತನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿತ್ತು. ಅಕ್ರಮ‌ ಪಡಿತರ ಅಕ್ಕಿ ಸಾಗಾಟ, ಜೀವ ಬೆದರಿಕೆ ಸೇರಿದಂತೆ ಮೂರು ಜಿಲ್ಲೆಯ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ್​ ಎದುರಿಸುತ್ತಿದ್ದಾನೆ. ಕೋರ್ಟ್‌ನಲ್ಲಿ ಜಾಮೀನು ಪಡೆದು ಹೊರ ಬಂದ ನಂತರವೂ ಮತ್ತೆ ಹಳೆ‌ ಕಾಯಕ ಮುಂದುವರೆಸಿದ್ದರಿಂದ ಕಲಬುರಗಿ ಜಿಲ್ಲಾ ಪೊಲಿಸ್​ ಗಡಿಪಾರು ಮಾಡಿತ್ತು.

ಇನ್ನಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:54 pm, Wed, 23 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು