Karnataka Dam Water Level: ಆ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

|

Updated on: Aug 20, 2023 | 6:28 AM

ಕರ್ನಾಟಕದ ಜಲಾಶಯಗಳ ಆಗಸ್ಟ್ 20ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಸೂಫಾ ಡ್ಯಾಂ
Follow us on

ಕಳೆದ 20 ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಇದೀಗ ಮತ್ತೆ ಚುರುಕುಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಶನಿವಾರ ಮತ್ತೆ ಮಳೆಯಾಗಿದೆ (Karnataka Rain). ಈ ಮಧ್ಯೆ, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಆಗಸ್ಟ್‌ 18ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 123.08 120.25 901 901
ತುಂಗಭದ್ರಾ ಜಲಾಶಯ (Tungabhadra Dam) 497.71 105.79 85.96 105.79 587 10379
ಮಲಪ್ರಭಾ ಜಲಾಶಯ (Malaprabha Dam) 633.8 37.73 22.91 34.85 194 194
ಕೆ.ಆರ್.ಎಸ್ (KRS Dam) 38.04 49.45 29.43 48.17 2349 15576
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 73.63 132.38 4382 5899
ಕಬಿನಿ ಜಲಾಶಯ (Kabini Dam) 696.13 19.52 15.82 19.13 1764 7325
ಭದ್ರಾ ಜಲಾಶಯ (Bhadra Dam) 657.73 71.54 48.88 69.04 1014 3224
ಘಟಪ್ರಭಾ ಜಲಾಶಯ (Ghataprabha Dam) 662.91 51 43.48 50.20 2205 3952
ಹೇಮಾವತಿ ಜಲಾಶಯ (Hemavathi Dam) 890.58 37.1 29.46 37.06 1989 6256
ವರಾಹಿ ಜಲಾಶಯ (Varahi Dam) 594.36 31.1 10.74 19.99 909 1640
ಹಾರಂಗಿ ಜಲಾಶಯ (Harangi Dam)​​ 871.38 8.5 8.21 7.73 1277 1793
ಸೂಫಾ (Supa Dam) 564 145.33 79.68 86.47 3594

ಕಳೆದ ಎರಡೂರು ವಾರಗಳಿಂದ ರಾಜ್ಯಾದ್ಯಂತ ಮಳೆ ನಾಪತ್ತೆಯಾಗಿದ್ದು, ರೈತರಲ್ಲಿ ಆತಂಕ ಮನೆಮಾಡಿತ್ತು. ಇದರ ನಡುವೆಯೇ ಇದೀಗ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆ ಸುರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ