ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ರಾಜ್ಯದಲ್ಲಿ ಹೃದಯಾಘಾತದಿಂದ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು ದುರ್ದೈವದ ಸಂಗತಿ. ಇತ್ತೀಚಿಗೆ ಬಾಲಕಿಯೊಬ್ಬಳು ಮೃತಪಟ್ಟಿದ್ದು ಸುದ್ದಿಯಾಗಿತ್ತು. ಈ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಡಾ. ಪುನಿತ್ ರಾಜಕುಮಾರ್​ ಯೋಜನೆಯನ್ನು 2023-24 ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು.

Important Highlight‌
ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ
ಪುನಿತ್​ ರಾಜಕುಮಾರ್​ (ಎಡಚಿತ್ರ) ಎಇಡಿ ಸಾಧನ (ಬಲಚಿತ್ರ)
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Aug 20, 2023 | 2:23 PM

ಬೆಂಗಳೂರು (ಆ.20): ರಾಜ್ಯದಲ್ಲಿ ಹೃದಯಾಘಾದಿಂದ (Heart Attack) ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು ದುರ್ದೈವದ ಸಂಗತಿ. ಇತ್ತೀಚಿಗೆ ಬಾಲಕಿಯೊಬ್ಬಳು ಮೃತಪಟ್ಟಿದ್ದು ಸುದ್ದಿಯಾಗಿತ್ತು. ಈ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಡಾ. ಪುನಿತ್ ರಾಜಕುಮಾರ್ (Puneeth Rajkumar)​ ಯೋಜನೆಯನ್ನು 2023-24 ಸಾಲಿನ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಘೋಷಿಸಿದ್ದರು. ಇದೀಗ ಈ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಎಲ್ಲ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

ಈ ಯೋಜನೆಗೆ ಮೊದಲ ಹಂತವಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಜಯದೇವ ಆಸ್ಪತ್ರೆಯ ಅಡಿಯಲ್ಲಿ 45 ತಾಲೂಕು ಆಸ್ಪತ್ರೆಗಳನ್ನು ತರಲಾಗಿದೆ. ಈ ವ್ಯಾಪ್ತಿಯ 45 ಆಸ್ಪತ್ರೆಗಳಲ್ಲಿ ಏನಾದರೂ ಹೃದಯಾಘಾತವಾದರೇ ಅಥವಾ ಹೃದಯ ಸಂಬಂಧಿ ತುರ್ತು ಸಮಸ್ಯೆ ಕಂಡು ಬಂದರೇ ತಜ್ಞ ವೈದ್ಯರು ವಿಡಿಯೋ ಕಾನ್ಪರೇನ್ಸ್ ಮೂಲಕ ರೋಗಿಯನ್ನು ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ಬಗ್ಗೆ ಸ್ಥಳೀಯ ವೈದ್ಯರಿಗೆ ಸಲಹೆ ನೀಡುತ್ತಾರೆ.

ಇದನ್ನೂ ಓದಿ: ಮಂಗಳೂರು: ಸ್ಪಂದನಾ ವಿಜಯ್‌ ಬೆನ್ನಲ್ಲೇ ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಹೃದಯಘಾತದಿಂದ ರೋಗಿ ಆಸ್ಪತ್ರೆಗೆ ದಾಖಲಾದ ನಂತರ ತಜ್ಞ ವೈದ್ಯರ ತಂಡ ಆ ರೋಗಿಯ ಹಿಸ್ಟರಿ ಪಡೆಯುತ್ತಾರೆ. ನಂತರ ಸ್ಥಳದಲ್ಲಿರುವ ವೈದ್ಯರು ತುರ್ತಾಗಿ ಹೇಗೆ ಚಿಕಿತ್ಸೆ ನೀಡಬೇಕು ? ಯಾವ ಇಂಜೆಕ್ಷನ್​ ಕೊಡಬೇಕು ? ಯಾವೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಬೇಕು ಅಂತ ಸೂಚನೆ ನೀಡುತ್ತಾರೆ.

Automated External Defibrillators ಅಂದ್ರೆ ಏನು..?

ಈ AED ಸ್ವಯಂಚಾಲಿತ ಎಲೆಕ್ಟ್ರಾನಿಕ್ ಸಾಧನವಾಗಿದೆ. ಹೃದಯಘಾತದ ಸಮಯದಲ್ಲಿ AED ಸಾಧನ ಮಾರಣಾಂತಿಕ ಹೃದಯಾಘಾತ ತೀವ್ರತೆ ಅಳೆಯುತ್ತದೆ. ಹೃದಯಘಾತದ ತೀವ್ರತೆ ತಿಳಿದು ಸ್ವಯಂಚಾಲಿತವಾಗಿ ತುರ್ತು ಚಿಕಿತ್ಸೆ ನೀಡುತ್ತದೆ. ಕೆಲವು ಸಂದರ್ಭದಲ್ಲಿ AED ಹೃದಯಘಾತ ತಕ್ಕಂತೆ ಎಲೆಕ್ಟ್ರಿಕ್ ಶಾಕ್ ಅಥವಾ ಡಿಫಿಬ್ರಿಲೇಶನ್ ನೀಡಲು ಸಾಹಯ ಮಾಡುತ್ತೆ. ಇಲ್ಲಿ ತುರ್ತು ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ಪಡೆದು ನಂತರ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬಹುದಾಗಿದೆ. ಪ್ರಾರಂಭಿಕ ಹಂತದಲ್ಲಿ 45 ಆಸ್ಪತ್ರೆಗಳಲ್ಲಿ Automated External Defibrillators (AED) ಗಳನ್ನು ಆಸ್ಪತ್ರೆಗಳಲ್ಲಿ ಅಳವಡಿಸಲು ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಸ್ಥಳಗಳಲ್ಲೂ AED ಸಾಧನ ಅಳವಡಿಕೆ

ಹಠಾತ್ ಹೃದಯಾಘಾತ ತಡೆಯಲು  ನಟ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಯೋಜನೆಗೆ ಚಾಲನೆ ನೀಡಲು ಮುಂದಾಗಿದ್ದೇವೆ.  ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ “ಅಪ್ಪು ಯೋಜನೆ” ಜಾರಿಗೆ ಮಾಡುತ್ತೇವೆ. ಮೊದಲ ಹಂತದಲ್ಲಿ ಜಯದೇವ ಆಸ್ಪತ್ರೆಯನ್ನ ಈ ಯೋಜನೆಗೆ ಹಬ್ ಮಾಡಲಾಗಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲ ಸಾರ್ವಜನಿಕ ಸ್ಥಳಗಳಲ್ಲಿಯೂ Automated External Defibrillators (AED ) ಅಳವಡಿಕೆ ಮಾಡಲಾಗುತ್ತೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಏರಪೋರ್ಟ್ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ AED ಅಳವಡಿಕೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದರೇ ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ನೀಡಲಾಗುತ್ತೆ. ಗೋಲ್ಡನ್ ಟೈಮ್​​ನಲ್ಲಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಶೀಫ್ಟ್ ಮಾಡುತ್ತೇವೆ. ರೋಗಿಯನ್ನು ಉಳಿಸಲು ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಹೃದಯಘಾತದ ಸಮಯದಲ್ಲಿ ಆಸ್ಪತ್ರೆಗೆ ಶಿಫ್ಟ್ ವೇಳೆಯಲ್ಲಿಯೇ ಮೃತರಾಗುತ್ತಿದ್ದಾರೆ. ಬಜೆಟ್​ನಲ್ಲಿ ಹೇಳಿದ್ದಂತೆ ಈ ಯೋಜನೆ ಜಾರಿ ಮಾಡಲಾಗುತ್ತೆ. ಎರಡು ವಾರಗಳಲ್ಲಿ ಈ ಬಗ್ಗೆ ಟೆಂಡರ್ ಕರೆದು ಯೋಜನೆ ಜಾರಿ ಮಾಡುತ್ತೇವೆ. ಸಾರ್ವಜನಿಕ ಸ್ಥಳಗಳಲ್ಲಿಯೂ ಎಇಡಿ ಸಾಧನದ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವುದಕ್ಕೆ ಮುಂದಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:43 am, Sun, 20 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು