ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಿದೆ. ಹೀಗಾಗಿ ಕಾಂಗ್ರೆಸ್ ಚುನಾವಣೆಗೆ ಅಖಾಡ ರೆಡಿ ಮಾಡುತ್ತಿದೆ. ಅದರಂತೆ ದೆಹಲಿಯಲ್ಲಿ 37 ಸಚಿವರು ಹಾಗೂ ಹಿರಿಯರ ಜೊತೆ ನಾನಾ ಸಭೆ ನಡೆದಿದೆ. ಇದೀಗ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಕೈ ಹೈಕಮಾಂಡ್, ಮುಂದಿನ ವಾರ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತೃತ್ವದಲ್ಲಿ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುತ್ತದೆ. ಇನ್ನು ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಿ ಎಂದು ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರಿಗೆ ಎಐಸಿಸಿ ನಾಯಕರು ಸೂಚನೆ ಕೊಟ್ಟಿದ್ದಾರೆ. ಪಾರದರ್ಶಕ ಆಡಳಿತ ನೀಡಬೇಕು, ಹೈಕಮಾಂಡ್ ನಿಗಾ ವಹಿಸಲಿದೆ ಎಂದು ಸಚಿವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದಿನಿಂದ ಆ.15ರವರೆಗೆ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್, ಟ್ರ್ಯಾಕ್ಟರ್ಗೆ ನಿರ್ಬಂಧ ವಿಧಿಸಲಾಗಿದೆ. ವೇಗದ ಮಿತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೂರು ದಿನಗಳ ಕೆಳಗೆ ಅಳವಡಿಸಿದ್ದ ಅತ್ಯಾಧುನಿಕ ತಂತ್ರಜ್ಞಾನವುಳ್ಳ ANRPಗಳು ಮೂರೇ ದಿನಕ್ಕೆ ಬಂದ್ ಆಗಿವೆ. ಟೊಮೆಟೊ ದುಬಾರಿ ಆಗ್ತಿದ್ದಂತೆ ರೈತರಿಂದಲೂ ಫುಲ್ ಡಿಮ್ಯಾಂಡ್ ಹೆಚ್ಚಾಗಿದ್ದು, ಟೊಮೆಟೊ ಸಸಿಗಳಿಗೆ ಬುಕಿಂಗ್ ನಡೆಯುತ್ತಿದೆ. ಸಸಿಗಳನ್ನ ಕೊಳ್ಳಲು ರೈತರು ಪೈಪೋಟಿ ನಡೆಸುತ್ತಿದ್ದಾರೆ. ಇದರ ಜೊತೆಗೆ ಅಪಘಾತ, ಮಳೆಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.
ಮಾನ್ಯ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಜೆ.ಪಿ.ಭವನ, ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಆಯೋಜಿಸಿದ್ದಾರೆ.
ಪೊಲೀಸ್ ಇಲಾಖೆ ಎರವಲು ಸೇವೆ ಮೂರು ವರ್ಷಕ್ಕೆ ಸೀಮಿತ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಪಿಎಸ್ಐ ಮತ್ತು ಸಿಬ್ಬಂದಿ ಎರವಲು ಸೇವೆ 3 ವರ್ಷಕ್ಕೆ ಸೀಮಿತ. ಮೂರು ವರ್ಷ ಮುಗಿದ ಬಳಿಕ ಮಾತೃ ಘಟಕಕ್ಕೆ ವರ್ಗಾವಣೆ ಮಾಡಲಾಗುವುದು. ವಿಶೇಷ ಕಾರಣ ಅಥವಾ ಸಂದರ್ಭದಲ್ಲಿ ಹೆಚ್ಚುವರಿ ಅವಧಿಗೆ ವಿಸ್ತರಣೆ ಮಾಡಲಾಗುವುದು.
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಸಿಲಿಂಡರ್ ಮಾದರಿ ವಸ್ತು ಪತ್ತೆ ಆಗಿದ್ದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ದೊಡ್ಡ ಸಿಲಿಂಡರ್ ಮಾದರಿ ವಸ್ತು ಕಂಡು ಜನ ಆತಂಕಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಸಿಲಿಂಡರ್ ಮಾದರಿ ವಸ್ತು ಪರಿಶೀಲನೆ ಮಾಡಿದ್ದಾರೆ.
ಕೋಟೆನಾಡು ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ದುರಂತವೇ ನಡೆದು ಹೋಗಿದೆ. ಇಂದು ಕವಾಡಿಗರಹಟ್ಟಿಯ ಆಕ್ರೋಶ ಸ್ಪೋಟಿಸಿದೆ. ಮತ್ತೊಂದು ಕಡೆ ಲ್ಯಾಬ್ ರಿಪೋರ್ಟ್ ಬಹಿರಂಗ ಆಗಿದೆ. ಇವೆಲ್ಲದರ ಮಧ್ಯೆ ಇಂದೇ 5 ಲಕ್ಷ ರೂ. ಪರಿಹಾರದ ಚೆಕ್ ನೀಡುವಂತೆ ಡಿಸಿಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸೂಚನೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಮಾಡಿದ್ದಾರೆ.
ಕಲುಷಿತ ನೀರು ಸೇವಿಸಿ ದುರಂತ: 5 ಲಕ್ಷ ರೂ ಪರಿಹಾರ ನೀಡುವಂತೆ ಡಿಸಿಗೆ ಸೂಚಿಸಿದ ಸಚಿವ ಆರ್ಬಿ ತಿಮ್ಮಾಪುರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಆದರೆ ಕೋರ್ಟ್ ಆದೇಶವಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಲಾಲ್ಬಾಗ್ನಲ್ಲಿ 214ನೇ ಫಲಪುಷ್ಪ ಪ್ರದರ್ಶವನ್ನು ಶುಕ್ರವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲವರ್ ಶೋ ಆಯೋಜನೆ ಮಾಡಿದ್ದು, ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಾಯಿತು. ಜತೆಗೆ ಸಿಎಂರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕ ಬಿಡುಗಡೆ ಮಾಡಿದರು.
‘ಸುಪ್ರೀಂ’ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಇರಬೇಕೆಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದಿದ್ದಾರೆ.
ನಾಳೆ ವಿಶೇಷ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಲಿದೆ ಎಂದು ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಎ.ನಾರಾಯಣಸ್ವಾಮಿ ಹೇಳಿದರು. FSL ವರದಿ, ಮರಣೋತ್ತರ ಪರೀಕ್ಷೆ ವರದಿ ನೋಡಿ ಕ್ರಮ ಕೈಗೊಳ್ಳಲಾಗುವುದು. ವಿಷ ಬೆರೆಸಿದ್ದರೆ ವಾಂತಿ ಮಾತ್ರ ಆಗುತ್ತದೆ, ಸಾವು ಸಂಭವಿಸುತ್ತದೆ. ಕಲುಷಿತ ನೀರಾಗಿದ್ರೆ ವಾಂತಿ ಭೇದಿ ಆಗುತ್ತದೆ, ಸಾವು ಸಂಭವಿಸಲ್ಲ. ಈ ಘಟನೆ ಬಗ್ಗೆ ಉನ್ನತಮಟ್ಟದ ತನಿಖೆ ಆಗಲಿ ಎಂದರು.
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸಾಂತ್ವನ ಹೇಳಿದ್ದು, ವೈಯಕ್ತಿಕವಾಗಿ ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜನರ ಆಯ್ಕೆಯನ್ನು ಪ್ರಶ್ನಿಸಿ ಹೊರಟಿದ್ದವರಿಗೆ ತಕ್ಕ ಉತ್ತರ ಸಿಕ್ಕಿದೆ. ಇಡೀ ದೇಶದಲ್ಲಿ ಸುಪ್ರೀಂಕೋರ್ಟ್ ದೊಡ್ಡದು. ಅನ್ಯಾಯ ಆದ ಕಡೆ ಸರಿ ಪಡಿಸುವ ಶಕ್ತಿ ಈ ಪೀಠಕ್ಕೆ ಇದೆ. ಇದಕ್ಕೆ ಈ ತೀರ್ಪು ಸಾಕ್ಷಿಯಾಗಿದೆ ಎಂದರು.
ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಸಿಗುತ್ತೆ ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಆರ್ಥಿಕವಾಗಿ ಸದೃಡವಾಗಬೇಕಾದರೆ ಜನರ ಕೈಬಲಪಡಿಸಬೇಕು. ನಾವು ಅವರ ಕೈಬಲಪಡಿಸಿದರೆ ಅವರು ಹೆಚ್ಚು ದುಡಿಯುತ್ತಾರೆ. ಮತ್ತೆ ಹೆಚ್ಚು ತೆರಿಗೆ ಸರ್ಕಾರಕ್ಕೆ ಬರುತ್ತದೆ ಎಂದಿದ್ದಾರೆ.
ಸತ್ಯಕ್ಕೆ ಗೆಲುವು ಸಿಕ್ಕೇ ಸಿಗುತ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನನಗೆ ಬೆಂಬಲ ನೀಡಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.
ಹಾಲಿನಲ್ಲಿ ಕಲಬೆರಕೆ ವಿಚಾರ ತಿಳಿದು ನನಗೆ ಬಹಳ ನೋವು ತಂದಿದೆ ಎಂದು ತುಮಕೂರಿನಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ನಂದಿನಿ ಹಾಲು ಹೊರತಾಗಿ ಬೇರೆ ಎಲ್ಲವೂ ಸ್ಲೋ ಪಾಯ್ಸನ್ ಆಗಿದೆ. ತುಮಕೂರು ಪಾಲಿಕೆ ಕಮಿಷನರ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
ಲೋಕಸಭೆ ಚುನಾವಣೆ ಸ್ಪರ್ಧೆಗೆ ಸೂಚಿಸಿದರೆ ಸ್ಪರ್ಧಿಸಲು ಸಿದ್ಧ ಎಂದು ತುಮಕೂರಿನಲ್ಲಿ ಸಹಕಾರ ಖಾತೆ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ಹೈಕಮಾಂಡ್ನಿಂದ ಇನ್ನೂ ಯಾವ ರೀತಿಯ ಸೂಚನೆ ಬಂದಿಲ್ಲ. 34 ಸಚಿವರಿಗೂ ಪ್ರತಿ ಲೋಕಸಭೆ ಕ್ಷೇತ್ರದ ಉಸ್ತುವಾರಿ ಕೊಡುತ್ತಾರೆ. ಹಾಸನದಲ್ಲಿ ನನ್ನ ನೇತೃತ್ವದಲ್ಲಿ ನಡೆಯುತ್ತೆ ಎನ್ನುವ ನಂಬಿಕೆ ಇದೆ ಎಂದರು.
ದೆಹಲಿ: ಅಹಿಂದ್ ಹೆಸರಲ್ಲಿ ಸಿದ್ದರಾಮಯ್ಯ ಮತ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನದೆಹಲಿಯಲ್ಲಿ ಹೇಳಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬೇರೆ ಕಡೆ ಬಳಕೆ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ವಾಪಸ್ ಪಡೆದಿದ್ದಾರೆ. ದಲಿತರ ಕಲ್ಯಾಣಕ್ಕೆ ಹಣದ ಕೊರತೆ ಆಗಲಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಸರ್ಕಾರದ ವಿರುದ್ಧ ಹೆಚ್ಡಿಕೆ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ‘ ಕುಮಾರಸ್ವಾಮಿಯವರು ತಮಗೆ ಸಿಕ್ಕಿದ ಮಾಹಿತಿ ಮೇಲೆ ಮಾತಾಡಿದ್ದಾರೆ, ಅದು ಸತ್ಯ ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇದ್ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಮತ್ತು ಕೊಡುತ್ತಿಲ್ಲ ಎಂದರು.
ಬೆಂಗಳೂರು: ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರ ಕಾರ್ಡ್ಗೆ ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಉಡುಪಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿದ್ದ ಯುವಕನ ಶವ ಪತ್ತೆಯಾಗಿದೆ. ನಿನ್ನೆ(ಆ.3) ಬೆಂಗಳೂರಿನಿಂದ ನಾಲ್ಕು ಜನ ಸ್ನೇಹಿತರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಪ್ರವಾಸಿಗ ಸಂದೀಪ್ ನೀರಿನಲ್ಲಿ ಬಿದ್ದಿದ್ದ. ಇಂದು ಮುಂಜಾನೆ ಅಗ್ನಿಶಾಮಕದಳ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಇದೀಗ ಮೃತದೇಹ ಪತ್ತೆಯಾಗಿದೆ.
ಬೆಂಗಳೂರು: ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಆರೋಪ ‘ ಪರಿಶಿಷ್ಟ ಜಾತಿ, ಪಂಗಡಕ್ಕೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ಸರ್ಕಾರ ಜನಪರ ಕೆಲಸ ಮಾಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ, ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಮಾಡುತ್ತಿದ್ದಾರೆ ಎಂದರು.
ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೊತೆಗೆ ಜುಲೈ 28ರಂದು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಗಳಿಗೆ ಸೇರಿಸಿ ಎನ್ನುವ ಮೂಲಕ ಪ್ರಚೋದನಕಾರಿ ಮಾತಾಡಿದ್ದ ಹಿನ್ನಲೆ ಎಫ್ಐಆರ್ ದಾಖಲಾಗಿದೆ. ಜೊತೆಗೆ ವೀಣಾ ಶೆಟ್ಟಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸುಮೋಟೋ ಕೇಸ್ ಕೂಡ ಹಾಕಲಾಗಿದೆ.
ಕಲಬುರಗಿ: ರಾಜ್ಯ ಕ್ಯಾಬಿನೇಟ್ ದೆಹಲಿಗೆ ಸಿಪ್ಟ್ ಆಗಿದೆಯೆಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ವಿಚಾರವಾಗಿ‘ ಬೊಮ್ಮಾಯಿ ಅವರಿಗೆ ಬಿಜೆಪಿಯವರು ಅವಮಾನ ಮಾಡ್ತಿದ್ದಾರೆ. ಸಿಎಂ ಆದವರಿಗೆ ವಿರೋದ ಪಕ್ಷದ ನಾಯಕ ಮಾಡ್ತಿಲ್ಲ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹೀಗಾಗಿ ದೆಹಲಿಗೆ ಹೋಗುವುದು, ಬರುವುದು ಇದ್ದದ್ದೆ. ಮೊದಲು ಅವರ ಮನೆಯಲ್ಲಿ ಆಗುತ್ತಿರುವ ಅವಮಾನದ ಬಗ್ಗೆ ಲೆಕ್ಕ ಹಾಕಲಿ ಎನ್ನುವ ಮೂಲಕ ಟಾಂಗ್ ನೀಡಿದ್ದಾರೆ.
ಬೆಂಗಳೂರು: ಗೃಹ ಇಲಾಖೆಯಲ್ಲಿ ವರ್ಗಾವಣೆ ದಂಧೆ ಎಂದು ಹೆಚ್ಡಿಕೆ ಆರೋಪ ‘ಕುಮಾರಸ್ವಾಮಿ ಆರೋಪವನ್ನ ಸಚಿವ ಡಾ.ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಯೆಂದು ಹೇಳುವುದು ಸರಿಯಲ್ಲ. ಕೆಲವು ಸ್ಥಳಗಳಿಗೆ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರು: ಸರ್ಕಾರದ ವಿರುದ್ಧ ಹೆಚ್ಡಿಕೆ ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘H.D.ಕುಮಾರಸ್ವಾಮಿ ಸಮಾಧಾನಕ್ಕೆ ಏನಾದರೂ ಮಾತನಾಡಲಿ, ಪಾಪ ಅವರು ವಿಶ್ರಾಂತಿ ತೆಗೆದುಕೊಂಡು ಬಂದಿದ್ದಾರೆ ಎನ್ನುವ ಮೂಲಕ ಟಾಂಗ್ ನೀಡಿದ್ದಾರೆ.
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಎಫ್ ಎಸ್ ಎಲ್ ವರದಿ ಎಸ್ಪಿ ಕೆ.ಪರಶುರಾಮ್ ಕೈ ಸೇರಿದ್ದು, ಆದರೆ, ನೀರಿನಲ್ಲಿ ಯಾವುದೇ ವಿಷಕಾರಿ ಅಂಶ ಕಂಡು ಬಂದಿಲ್ಲ ಎಂದು FSL ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಾವು ಕುಟುಂಬ ಸಮೇತ ಪ್ರವಾಸ ಹೋಗಿದ್ದು ಯುರೋಪ್ಗೆ ಆದ್ರೆ, ಸರ್ಕಾರ ಕೆಡವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಅವರ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದರು.
ಬೆಂಗಳೂರು: ಗ್ಯಾರಂಟಿಗಳಿಗೆ ಎಸ್ಸಿ, ಎಸ್ಟಿ ವರ್ಗಗಳ ನಿಧಿ ಬಳಕೆ ವಿಚಾರವಾಗಿ ಇಂದು(ಆ.4) ಸರ್ಕಾರದ ವಿರುದ್ಧ ಬೆಳಗ್ಗೆ 11 ಗಂಟೆಗೆ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯರಾದ ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ, ಬೆಂಗಳೂರು ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ಬೆಂಗಳೂರು: ಫ್ಲವರ್ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. ಹೌದು, ಬರೊಬ್ಬರಿ15ರಿಂದ17 ಲಕ್ಷ ಹೂವುಗಳಿಂದ ಕಂಗೊಳಿಸಲಿದೆ. ಇನ್ನು ಫ್ಲವರ್ ಶೋ ವೀಕ್ಷಣೆಗೆ ಬರುವವರಿಗೆ 4 ಕಡೆ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಜೊತೆಗೆ ಟ್ರಾಫಿಕ್ ಹೆಚ್ಚಾಗುವ ದೃಷ್ಟಿಯಿಂದ ಮೆಟ್ರೋ, ಬಸ್ ಬಳಕೆಗೆ ಮಾಡಲು ಮನವಿ ಮಾಡಲಾಗಿದೆ.
ಬೆಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಉದ್ದೇಶದಿಂದ ಮಕ್ಕಳು, ಮಹಿಳೆಯರಿಗೂ ಕೆಲ ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿದೆ. ಇನ್ನು ಫಲಪುಷ್ಪ ಪ್ರದರ್ಶನಕ್ಕೆ ಬರುವವರಿಗೆ ವೀಕ್ ಡೇಸ್ನಲ್ಲಿ ಹಿರಿಯರಿಗೆ 70 ರೂ ಹಾಗೂ ಮಕ್ಕಳಿಗೆ 30 ರೂ ನಿಗದಿ ಮಾಡಲಾಗಿದೆ. ಜೊತೆಗೆ ಲಾಲ್ಬಾಗ್ನಲ್ಲಿ ಭದ್ರತೆ ದೃಷ್ಟಿಯಿಂದ 200 ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು, 300ರಿಂದ 400 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಿ, ಹೆಲ್ತ್ ಕ್ಯಾಂಪ್ ಕೂಡ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು: ಲಾಲ್ಬಾಗ್ನಲ್ಲಿ ಇಂದಿನಿಂದ ಫ್ಲವರ್ ಶೋ ಆರಂಭವಾಗಲಿದ್ದು, 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಯಲಿರುವ 214ನೇ ಫ್ಲವರ್ ಶೋ ಇದಾಗಿದೆ. ಇನ್ನು ಇದನ್ನು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯರನವರು ಉದ್ಘಾಟನೆ ಮಾಡಲಿದ್ದಾರೆ. ವಿಧಾನಸೌಧ, ಕೆಂಗಲ್ ಹನುಮಂತಯ್ಯನವರ ಕಾನ್ಸೆಪ್ಟ್ ಇಲ್ಲಿ ಇರಲಿದೆ. ಇಂದಿನಿಂದ ಆರಂಭವಾಗುವ ಫಲಪುಷ್ಪ ಪ್ರದರ್ಶನ ಆಗಸ್ಟ್ 15ರವರೆಗೂ ನಡೆಯಲಿದೆ. ಇನ್ನು ಈ ಬಾರಿಯ ಫ್ಲವರ್ ಶೋಗೆ ಎರಡೂವರೆ ಕೋಟಿ ಹಣ ವೆಚ್ಚ ಮಾಡಲಾಗಿದೆ.
ಬೆಂಗಳೂರು: ಇಂದಿನಿಂದ(ಆ.4) ಆಗಸ್ಟ್ 15 ರವರೆಗೆ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಫ್ಲವರ್ ಶೋ ವೀಕ್ಷಣೆಗೆ ಲಕ್ಷಾಂತರ ಜನ ಆಗಮ ಹಿನ್ನಲೆ ಸಂಚಾರ ದಟ್ಟಣೆ ಉಂಟಾಗಲಿದೆ. ಹಾಗಾಗಿ ಪರ್ಯಾಯ ಮಾರ್ಗ ಜೊತೆಗೆ ನಿಗದಿತ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಲು ಸೂಚನೆ ನೀಡಲಾಗಿದೆ.
Published On - 7:59 am, Fri, 4 August 23