Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

Karnataka Lokayukta raids: ಕರ್ನಾಟಕದಲ್ಲಿ ಮತ್ತೆ ಲೋಕಾಯುಕ್ತ ದಾಳಿ ನಡೆದಿದೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Important Highlight‌
Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ
ಸಾಂದರ್ಭಿಕ ಚಿತ್ರ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Aug 22, 2023 | 12:05 PM

ಬೆಂಗಳೂರು, (ಆಗಸ್ಟ್ 22): ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಮತ್ತೆ ಲೋಕಾಯುಕ್ತ(Karnataka Lokayukta)  ದಾಳಿಯಾಗಿದೆ. ಇಂದು (ಆಗಸ್ಟ್ 22) ಬೆಂಗಳೂರು, ತುಮಕೂರು ಸೇರಿ 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮೊನ್ನೇ ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ 48 ಕಡೆಗಳಲ್ಲಿ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಂದ ಕೋಟಿ-ಕೋಟಿ ಹಣ ಹಾಗೂ ಆಸ್ತಿ ಪಾಸ್ತಿ ಪತ್ತೆ ಮಾಡಿತ್ತು. ಇದೀಗ ಮತ್ತೆ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರೆಸಿದ್ದು, ಒಂದು ವಾರದಲ್ಲಿ ಇದು ಎರಡನೇ ದಾಳಿಯಾಗಿದೆ.

ಕೆ.ಆರ್.ಪುರ ಸರ್ವೆ ಅಧಿಕಾರಿ ಮನೆ, ಕಚೇರಿ ಮೇಲೆ ದಾಳಿ

ಕೆ.ಆರ್.ಪುರ ತಾಲೂಕು ಕಚೇರಿಯ ಸರ್ವೆ ಸೂಪರ್​​ವೈಸರ್​​​​ ಕೆ.ಟಿ ಶ್ರೀನಿವಾಸಮೂರ್ತಿ ಮನೆಗಳು, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶ್ರೀನಿವಾಸಮೂರ್ತಿ 5ಕ್ಕೂ ಹೆಚ್ಚು ಕಡೆ ಅಬಕಾರಿ ಲೈಸೆನ್ಸ್ ಹೊಂದಿದ್ದು, ನಿಗದಿಗಿಂತಲೂ ಹೆಚ್ಚು ವರಿ ಆಸ್ತಿ ಗಳಿಸಿದ ಆರೋಪ ಕೇಳಿಬಂದಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ಅಂಧ್ರಳ್ಳಿಯಲ್ಲಿರುವ ನಿವಾಸ, ಹೆಣ್ಣೂರಿನಲ್ಲಿರುವ ಸಹೋದರಿ ನಿವಾಸ ಹಾಗೂ ಪತ್ನಿ ಹೆಸರಿನಲ್ಲಿರುವ ಹೋಟೆಲ್​​​​​ ಬೋರ್ಡಿಂಗ್​ ಹೌಸ್​ಗಳ ಮೇಲೂ ದಾಳಿ ಮಾಡಿದ್ದಾರೆ. ಅಲ್ಲದೇ ತುಮಕೂರಿನಲ್ಲಿರುವ ಶ್ರೀನಿವಾಸ ಸಹೋದರನ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ

ಆಗಸ್ಟ್ 17ರಂದು ದಾಳಿ ಮಾಡಿದ್ದ ಲೋಕಾಯುಕ್ತ

ಆಗಸ್ಟ್ 17ರಂದು ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 48 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಕೊಟ್ಯಾಂತರ ರೂ. ಜಪ್ತಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:56 am, Tue, 22 August 23

ತಾಜಾ ಸುದ್ದಿ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಸಕಲೇಶಪುರ: ದಂತಗಳಿಂದ ತಿವಿದು ಆನೆ ಭೀಮನನ್ನು ಗಾಯಗೊಳಿಸಿರೋ ಕಾಡಾನೆಗಳು, ಗಾಯ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ನಲ್ಲಿ ವರಮಹಾಲಕ್ಷ್ಮಿಗೆ ಪಂಚಾಭಿಷೇಕದ ಬಳಿಕ ಭ
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಇಂದು ವರಮಹಾಲಕ್ಷ್ಮಿ ಹಬ್ಬ, ಮೈಸೂರಿನ ದೇವರಾಜ ಮಾರ್ಕೆಟ್​ನಲ್ಲಿ ಜಾತ್ರೆ, ಹಬ್
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ಚಿಕ್ಕಮಗಳೂರಿನಲ್ಲಿ ಕಂದಾಯ ಭೂ ಹಗರಣ: ಕಾರವಾರ ಸೀಬರ್ಡ್ ನೌಕಾನೆಲೆಯ ಭೂ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
ತುಮಕೂರು: ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ, ಮುಜರಾಯಿ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
'777 ಚಾರ್ಲಿ' ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿರುವ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
‘ಉಪಾಧ್ಯಕ್ಷ’ ಕಥೆ ಕೇಳಿ ಯಶ್ ಹೇಳಿದ್ದೇನು? ಮಾಹಿತಿ ಹಂಚಿಕೊಂಡ ಚಿಕ್ಕಣ್ಣ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಹರ್ಷಿಕಾ-ಭುವನ್ ಮದುವೆಗೆ ಹಾಜರಾಗಿ ವಧು-ವರರಿಗೆ ದುಬಾರಿ ಉಡುಗೊರೆ ಕೊಟ್ಟ ಗಣೇ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಆಪರೇಷನ್​ ಹಸ್ತ: ಬಿಜೆಪಿ ಶಾಸಕ ಭೈರತಿ ಬಸವರಾಜ ಖಡಕ್ ರಿಯಾಕ್ಷನ್, ಇಲ್ಲಿದೆ ನ
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು
ಚಂದ್ರನ ದಕ್ಷಿಣ ಧ್ರುವಕ್ಕೆ ಬೆಂಗಳೂರಿನ ಹೆಸರು ರಿಜಿಸ್ಟರ್; ISTRAC ನಿರ್ದೇಶಕ ಬಿಎನ್ ರಾಮಕೃಷ್ಣ ಹೇಳಿದ್ದಿಷ್ಟು