Karnataka Rain: ಬೆಂಗಳೂರು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ
Bengaluru Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸದ್ಯಕ್ಕೆ ಮಳೆಯಾಗುವುದಿಲ್ಲ. ಸೆ. 7ರಿಂದ 9ರವರೆಗೆ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Bangalore Rain: ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rain) ವರುಣನ ಆರ್ಭಟಕ್ಕೆ ತತ್ತರಿಸಿಹೋಗಿದೆ. ಬೆಂಗಳೂರಿನ ರಸ್ತೆಗಳೆಲ್ಲ ಮಳೆ ನೀರಿನಿಂದ ಜಲಾವೃತವಾಗಿವೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸದ್ಯಕ್ಕೆ ಮಳೆಯಾಗುವುದಿಲ್ಲ. ಸೆ. 7ರಿಂದ 9ರವರೆಗೆ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಕೂಡ ಈ ಮೂರು ದಿನ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ 3 ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ
ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಅಪಾಯಕಾರಿ ಗಾಳಿ ಬೀಸುವ ಮುನ್ಸೂಚನೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
This is how bangalore looks after 10 min of rain!! After paying huge tax atleast we are expecting good infrastructure and drainage system. I love bangalore but government should address this issue. No hate comments please ??#bangaloretraffic #bangalorerain #bangalorereal pic.twitter.com/r6SQuXZihT
— Madhurima biswas (@bmadhurima78) September 4, 2022
ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಸುರಿಯುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಪ್ರವಾಹ ಪೀಡಿತ ಸ್ಥಳೀಯ ನಿವಾಸಿಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಮಹದೇವಪುರ, ಮಾರತ್ತಹಳ್ಳಿ, ಸಿಲ್ಕ್ಬೋರ್ಡ್, ಹೊರ ವರ್ತುಲ ರಸ್ತೆಗಳ ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿದ್ದು, ಜನರು ಸಂಚರಿಸಲು ಪರದಾಡುವಂತಾಗಿದೆ. ಭಾರೀ ಮಳೆಯಿಂದಾಗಿ ಮೂಲಸೌಕರ್ಯಗಳು ಕುಸಿದಿರುವ ಬಗ್ಗೆ ಕಂಪನಿಗಳು ಸರ್ಕಾರಕ್ಕೆ ಪತ್ರ ಬರೆದು ತಮ್ಮ ಅಸಮಾಧಾನವನ್ನು ತಿಳಿಸಿವೆ. ಬೆಂಗಳೂರಿನಾದ್ಯಂತ ಸಾವಿರಾರು ಮನೆಗಳು ಜಲಾವೃತಗೊಂಡಿವೆ.
Remember when you applied for jobs in Bangalore and mentioned “swimming” as hobbies in your cv. Now is the time to use it.#bangaloretraffic #bangalorerains #Bangalore #bangalore_rain pic.twitter.com/SDoIa8V2Jp
— Ok Piyush ?? (@Mr_bird_watchr) August 30, 2022
ಇದನ್ನೂ ಓದಿ: Bengaluru Rain: ಭಾರೀ ಮಳೆಯಿಂದ ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್; ಈ ಮಾರ್ಗಗಳಲ್ಲಿ ಹೋಗದಿರುವುದೇ ಉತ್ತಮ
ಆಗಸ್ಟ್ 30ರಂದು ಬೆಳ್ಳಂದೂರು, ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಹೊರ ವರ್ತುಲ ರಸ್ತೆ, ಮತ್ತು ಬಿಇಎಂಎಲ್ ಲೇಔಟ್ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಪ್ರವಾಹ ಉಂಟಾಗಿತ್ತು. ಈ ಪ್ರದೇಶಗಳಲ್ಲಿ, ಟ್ರಾಫಿಕ್ ಜಾಮ್ ಕೂಡ ಆಗಿತ್ತು. ಇದೀಗ ಭಾನುವಾರ ಸುರಿದ ಮಳೆಯಿಂದ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ.
#bangalorerain #Bangalore pic.twitter.com/MOPr21TKSH
— gagan batri (@gaganbatri) September 5, 2022
ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ, ಮಾಹೆಯಲ್ಲಿ ಭಾರೀ ಮಳೆಯಾಗಲಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ರಾಯಲಸೀಮಾ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ವಿದರ್ಭ, ಬಿಹಾರದಲ್ಲಿ ಮಿಂಚು ಸಹಿತ ಮಳೆಯಾಗಲಿದೆ. ಮಹಾರಾಷ್ಟ್ರ, ಮರಾಠವಾಡ, ಕರಾವಳಿ ಆಂಧ್ರ ಪ್ರದೇಶ, ಯಾನಂ, ತೆಲಂಗಾಣ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆಯಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ